Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರೇವಣ್ಣ ಜೈಲಿನಲ್ಲಿ ಹೇಗಿದ್ದಾರೆ ಗೊತ್ತಾ..
    Bengaluru

    ರೇವಣ್ಣ ಜೈಲಿನಲ್ಲಿ ಹೇಗಿದ್ದಾರೆ ಗೊತ್ತಾ..

    vartha chakraBy vartha chakraMay 10, 202423 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle
    ಬೆಂಗಳೂರು,ಮೇ.9-
    ಲೈಂಗಿಕ ಕಿರುಕುಳ ಮತ್ತು ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ನಿನ್ನೆ ರಾತ್ರಿ ಎಲ್ಲ ಕೈದಿಗಳಂತೆ ಜೈಲಿನ ಊಟ ಸೇವಿಸಿದ್ದಾರೆ.
    ಕೆಲ ಹೊತ್ತು ಇಂದಿನ ಪತ್ರಿಕೆಗಳತ್ತ ಕಣ್ಣಾಡಿಸಿದವರು ಯಾರ ಜೊತೆಯೂ ಮಾತನಾಡದೆ ಮೌನವಾಗಿ ದಿನ ದೂಡಿದ್ದಾರೆ. ಕಳೆದ ರಾತ್ರಿ ಕೂಡ ತುಂಬಾ ಹೊತ್ತಿನವರೆಗೆ ನಿದ್ರಿಸದೆ ಮೌನಿಯಾಗಿ ಕುಳಿತು ಯೋಚಿಸುತ್ತಾ ಕಾಲ‌ ಕಳೆದಿದ್ದಾರೆ.
    ಜೈಲಿಗೆ ಬರುವ ಎಲ್ಲಾ ಆರೋಪಿಗಳಿಗೆ ಎಂಟ್ರಿ ನಂಬರ್ ನೀಡಲಾಗುತ್ತದೆ. ಅದರಂತೆಯೇ ರೇವಣ್ಣಗೆ ವಿಚಾರಣಾಧೀನ ಬಂಧಿ 4567 ನಂಬರ್ ನೀಡಲಾಗಿದೆ. ಜೈಲಿನಲ್ಲಿ ಎಲ್ಲ ಕೈದಿಗಳಿಗೆ ನೀಡುವ ಊಟ ಸವಿಯಬೇಕಾದ ಪರಿಸ್ಥಿತಿ ಅವರದ್ದಾಗಿದೆ.
    ಜೈಲಿನ ಮೆನುವಿನಂತೆಯೇ ಅಧಿಕಾರಿಗಳು ರಾತ್ರಿ ಚಪಾತಿ, ಪಲ್ಯ, ಮುದ್ದೆ, ಅನ್ನ, ಸಾಂಬಾರ್ ಊಟ ನೀಡಿದ್ದಾರೆ. ಕೋರ್ಟ್ ಅನುಮತಿ ಇದ್ದರೆ ಮಾತ್ರ ಹೊರಗಿನ ಊಟ ತರಿಸಲು ಅವಕಾಶವಿದೆ. ಆದರೆ ರೇವಣ್ಣಗೆ ಹೊರಗಿನ ಊಟಕ್ಕೆ ಯಾವುದೇ ಅನುಮತಿ ಇಲ್ಲ. ಆದರೆ ರಾತ್ರಿ ಊಟ ನೀಡಿ ಒಂದು ಗಂಟೆ ಕಳೆದರೂ ಊಟ ಮಾಡದೆ ರೇವಣ್ಣ ಮೌನಕ್ಕೆ ಜಾರಿದ್ದಾರೆ ಎಂದು ತಿಳಿದುಬಂದಿದೆ.
    ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ವೇಳೆ ಸಚಿವರಾಗಿ ಇಡೀ ಆಡಳಿತ ವ್ಯವಸ್ಥೆಯನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದ ರೇವಣ್ಣ ಐಷಾರಾಮಿ ಜೀವನ ನಡೆಸಿದವರು,ಆದರೆ ನಿನ್ನೆ ರಾತ್ರಿಯನ್ನು ಸಾಮಾನ್ಯ ಕೈದಿಗಳಂತೆ ಜೈಲಿನಲ್ಲಿ ಕಳೆದಿದ್ದು, ರಾತ್ರಿ ನೀಡಿದ್ದ ಮುದ್ದೆ, ಚಪಾತಿ, ರೈಸ್ ಸಾಂಬಾರ್ ತಡವಾಗಿ ತಿಂದಿದ್ದಾರೆ.
    ಮನೆಯವರು ತಂದು ಕೊಟ್ಟಿರುವ ಬಟ್ಟೆ ಪಡೆದಿದ್ದಾರೆ. ರಾತ್ರಿ ಒಂದು ಗಂಟೆಯವರೆಗೂ ನಿದ್ರೆ ಮಾಡದೆ ಯೋಚಿಸುತ್ತಿದ್ದರು ಎನ್ನಲಾಗಿದೆ. ರೇವಣ್ಣ ಆರೋಗ್ಯ ಸರಿ‌ ಇಲ್ಲದ ಕಾರಣ ಜೈಲಾಧಿಕಾರಿಗಳು ಹೆಚ್ಚು ನಿಗಾ ಇಟ್ಟಿದ್ದಾರೆ. ರೇವಣ್ಣ ಇರುವ ಕೊಠಡಿ ಬಳಿ ಒಬ್ಬ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
    ಇಂದು ಬೆಳಿಗ್ಗೆ 5.30ಕ್ಕೆ ನಿದ್ರೆಯಿಂದ ಎದ್ದ ರೇವಣ್ಣ ಅವರಿಗೆ ಕಾಫಿ-ಟೀ ನೀಡಲಾಗಿದೆ. ಕೈದಿಗಳಿಗೆ ಟಿವಿ ವ್ಯವಸ್ಥೆ ಇಲ್ಲ. ಹೊರಗಿನ ಸುದ್ದಿ ತಿಳಿಯಲು ನ್ಯೂಸ್ ಪೇಪರ್ ವ್ಯವಸ್ಥೆ ಮಾಡಲಾಗಿದೆ. ರೇವಣ್ಣಗೆ ಓದಲು ಕನ್ನಡ-ಇಂಗ್ಲೀಷ್ ಪೇಪರ್ ನೀಡಲಾಗಿದೆ. ಪೇಪರ್ ಕಡೆ ಕಣ್ಣಾಡಿಸಿ ನಿನ್ನೆಯ ವಿದ್ಯಮಾನಗಳನ್ನು ರೇವಣ್ಣ ಓದಿದ್ದಾರೆ. ಜೈಲಿನ ಮೆನುವಿನಂತೆ ರೇವಣ್ಣಗೆ ಇಂದು ಬೆಳಗ್ಗಿನ ತಿಂಡಿಗೆ ಪುಳಿಯೋಗರೆ ನೀಡಲಾಗಿದೆ .
    ಆದರೆ ರೇವಣ್ಣ ಅವರು ಪುಳಿಯೋಗರೆಯನ್ನು ಸೇವಿಸಿಲ್ಲ ಮಧ್ಯಾಹ್ನದ ವೇಳೆಗೆ ತಮಗೆ ಅತಿಯಾದ ಹೊಟ್ಟೆ ನೋವು ಎಂದು ನರಳ ತೊಡಗಿದರು. ತಕ್ಷಣವೇ ಅವರನ್ನು ಜೈಲಿನಲ್ಲಿರುವ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಲಾಯಿತು.
     ಅಪಹರಣ ಮಾಡಿದ ಆರೋಪ ಹೊತ್ತಿರುವ ರೇವಣ್ಣ ಅವರ ಜಾಮೀನು ಅರ್ಜಿ  ವಿಚಾರಣೆ ನಿನ್ನೆ ನಡೆದಿದ್ದು, ಏಳು ದಿನ ಅಂದರೆ ಮೇ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದೆ.

    Verbattle
    Verbattle
    Verbattle
    ಆರೋಗ್ಯ ನ್ಯಾಯ ಲೈಂಗಿಕ ಕಿರುಕುಳ
    Share. Facebook Twitter Pinterest LinkedIn Tumblr Email WhatsApp
    Previous Articleಏರ್ ಇಂಡಿಯಾ ಎಕ್ಸ್‌ಪ್ರೆಸ್ ನ 30 ಕ್ಯಾಬಿನ್ ಸಿಬ್ಬಂದಿ ವಜಾ!
    Next Article ಶಿವಕುಮಾರ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕಂತೆ.
    vartha chakra
    • Website

    Related Posts

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn on ವಕೀಲರಿಗೆ ಕಪ್ಪು ಕೋಟ್ ಬೇಕಿಲ್ಲ | Lawyers
    • LinwoodGah on ಸಾರಿಗೆ ನಿಗಮದ ನೌಕರರಿಗೆ ಅತೀವ ಹರ್ಷ
    • Bqaote on CM ವಿರುದ್ಧ ರೌಡಿ ಶೀಟ್ ತೆರೆಯಬೇಕಾ.?
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.