Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲಿಂ.ತೋಂಟದ ಸಿದ್ಧಲಿಂಗ ಶ್ರೀಗಳ ಜನ್ಮದಿನವನ್ನು ಭಾವೈಕ್ಯ ದಿನವಾಗಿ ಆಚರಣೆ: ಸಿಎಂ
    ಸುದ್ದಿ

    ಲಿಂ.ತೋಂಟದ ಸಿದ್ಧಲಿಂಗ ಶ್ರೀಗಳ ಜನ್ಮದಿನವನ್ನು ಭಾವೈಕ್ಯ ದಿನವಾಗಿ ಆಚರಣೆ: ಸಿಎಂ

    vartha chakraBy vartha chakraApril 15, 2022Updated:August 22, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಗದಗ: ಜಗದ್ಗುರು ಡಾ: ತೋಂಟದ ಸಿದ್ಧಲಿಂಗ ಮಹಾಸ್ವಾಮೀಜಿಗಳ ಜನ್ಮದಿನವನ್ನು ಭಾವೈಕ್ಯ ದಿನವನ್ನಾಗಿ ಆಚರಿಸಲಾಗುವುದು. ಈ ಕುರಿತು ಸರ್ಕಾರಿ ಆದೇಶವನ್ನು ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

    ಅವರು ಇಂದು ಶ್ರೀ ಜಗದ್ಗುರು ತೋಂಟದಾರ್ಯ ಜಾತ್ರಾ ಮಹೋತ್ಸವ ಸಮಿತಿ, ಗದಗ ವತಿಯಿಂದ ಆಯೋಜಿಸಿದ್ದ ತ್ರಿವಿಧ ದಾಸೋಹಮೂರ್ತಿ ಪೂಜ್ಯ ಲಿಂಗೈಕ್ಯ ಶ್ರೀ ಜಗದ್ಗುರು ಡಾ: ತೋಂಟದ ಸಿದ್ಧಲಿಂಗಮಹಾಸ್ವಾಮೀಜಿಗಳ ಐಕ್ಯ ಮಂಟಪ ಲೋಕಾರ್ಪಣೆ ಮಾಡಿ ಮಾತನಾಡಿದರು.

    ಅವರ ಜನ್ಮ ದಿನವನ್ನು ಅರ್ಥಪೂರ್ಣ ವಾಗಿ ಆಚರಿಸುವುದು ನಮ್ಮೆಲ್ಲರ ಕರ್ತವ್ಯ.
    ಪರಮಪೂಜ್ಯರು ಜ್ಞಾನಿಗಳಾಗಿದ್ದರು. ಆಧ್ಯಾತ್ಮಿಕವಾಗಿ ಅವರ ಜ್ಞಾನ ಆಳವಾಗಿತ್ತು. ಆ ಆಳದ ಲೆಕ್ಕ ನಮಗ್ಯಾರಿಗೂ ಸಿಕ್ಕಿಲ್ಲ. ಅವರ ಲೌಕಿಕ ಜ್ಞಾನವೂ ಅಷ್ಟೇ ವಿಸ್ತಾರವಾಗಿತ್ತು. ಭಕ್ತರಿಗೆ ಜ್ಞಾನದ ಮೂಲಕ ಮಾರ್ಗದರ್ಶನ ಮಾಡಿದಾಗ ಅವರು ಸಂತೃಪ್ತರಾಗಿ ಬದುಕಿನ ಮಾರ್ಗವನ್ನು ಪಡೆದುಕೊಂಡು ಯಶಸ್ವಿಯಾಗಿದ್ದಾರೆ. ಪರಮಪೂಜ್ಯರ ಸಂಘಕ್ಕೆ ಬಂದವರು ಅಪಾರವಾದ ಪ್ರೀತಿ, ಆತ್ಮೀಯತೆ, ಆಶೀರ್ವಾದ ನೀಡಿದ್ದಾರೆ ಎಂದರು.

    ಮನುಷ್ಯರನ್ನು ಮನುಷ್ಯತ್ವದಿಂದ ಕಟ್ಟಲು ಪ್ರಯತ್ನ

    ಅವರು ಮನಸ್ಸು ಮಾಡಿದ್ದರೆ, ದೊಡ್ಡ ಸಂಸ್ಥೆಗಳನ್ನು ಕಟ್ಟಬಹುದಿತ್ತು. ಅವರ ಚಿಂತನೆಗಳು ಬೇರೆ. ಕಟ್ಟಡಗಳನ್ನು ಕಟ್ಟಲು ಮಹತ್ವ ನೀಡಲಿಲ್ಲ. ಮನುಷ್ಯರನ್ನು ಮನುಷ್ಯತ್ವದಿಂದ ಕಟ್ಟಲು ಪ್ರಯತ್ನ ಮಾಡಿದ್ದಾರೆ. ಆ ಮೂಲಕ ಸಾಮೂಹಿಕ ಚಿಂತನೆಯ ಸಮಾಜ ಕಟ್ಟಲು ಬಯಸಿದ್ದರು. ಹೊಗಳಿಕೆಗೆ ತೆಗಳಿಕೆಗೆ ಕಿವಿಗೊಡದೆ ಸ್ಥಿತಪ್ರಜ್ಞರಾಗಿದ್ದರು. ಆಧ್ಯಾತ್ಮಿಕವಾಗಿ ಬಹಳ ದೊಡ್ಡ ಸಾಧನೆ ಮಾಡಿದವರಿಗೆ ಮಾತ್ರ ಅದು ಸಾಧ್ಯವಾಗುತ್ತದೆ. ಇಂಥ ಪರಮಪೂಜ್ಯರನ್ನು ಹೊಂದಿದ ಮಠ ಪವಿತ್ರ ಕ್ಷೇತ್ರ. ಇದರ ಪರಂಪರೆ, ಸಂಸ್ಕೃತಿ, ಎಲ್ಲರನ್ನೂ ಒಳಗೊಂಡಿದೆ. ಜಾತ್ರಾ ಮಾಹೋತ್ಸವದಲ್ಲಿ ಇದನ್ನು ಕಾಣುಬಹುದಾಗಿದೆ. ಅರ್ಥಪೂರ್ಣ ವಾಗಿ ಆಚರಣೆಯಾಗುವ ಹಂಬಲ ಗುರುಗಳದ್ದು. ಕೆರೆಕಟ್ಟೆಗಳ ನಿರ್ಮಾಣಕ್ಕಾಗಿ ಅವರು ತಾಯಿ ಹೃದಯದಿಂದ ಮಿಡಿಯುತ್ತಿದ್ದರು. ಅವರ ಆಶೀರ್ವಾದದಿಂದ ಅನೇಕ ಕೆರೆ ತುಂಬಿಸುವ ಯೋಜನೆಗಳಾಗಿವೆ ಎಂದರು.

    ಪರಿಸರ ಕಾಳಜಿ ಸ್ವಾಮಿಗಳು ಜನ ಹಾಗೂ ಪರಿಸರದ ಬಗ್ಗೆಯೂ ಕಳಕಳಿ ಇದ್ದವರು. ಕಪ್ಪತಗುಡ್ಡವನ್ನು ವನ್ಯಜೀವಿ ತಾಣವನ್ನಾಗಿ ಘೋಷಿಸಲು ಅವರು ದೊಡ್ಡ ಹೋರಾಟ ಮಾಡಿದರು. ಕನ್ನಡ ಬಾಷೆಯ ಬಗ್ಗೆಯೂ ಅವರಿಗೆ ಅಭಿಮಾನವಿತ್ತು ಗೋಕಾಕ್ ಚಲವಳಿಯಲ್ಲಿಯೂ ಭಾಗಿಯಾಗಿದ್ದರು. ಅವರ ಭಾಷಣ ಕೇಳಿ ಡಾ: ರಾಜ್ ಕುಮಾರ್ ಅವರೂ ಪ್ರಶಂಸೆ ವ್ಯಕ್ತಪಡಿಸಿದ್ದರು. ಅವರನ್ನು ಕಳೆದುಕೊಂಡು ನಮ್ಮ ನಾಡು, ಸಂಸ್ಕೃತಿ, ಸಮಾಜ ಬಡವಾಗಿದೆ. , ನಿರ್ಣಾಯಕ ವಿಚಾರಗಳಿದ್ದದ್ದರಿಂದ ವಿವಾದಗಳಿದ್ದವು. ನಿಷ್ಠುರವಾಗಿ ಸತ್ಯವನ್ನಾಡಿದರೆ ವಿವಾದಗಳಿರುತ್ತವೆ. ಸಕಾರಾತ್ಮಕ, ಜನಕಲ್ಯಾಣಕ್ಕಾಗಿ ವಿವಾದಗಳನ್ನು ಹುಟ್ಟುತ್ತಿದ್ದವು. ಅವರ ಪ್ರಭಾವ ನಮ್ಮ ಮೇಲಿದೆ ಎಂದರು.

    ಮೌಲಿಕ ಚಿಂತನೆಗಳು

    ಪ್ರಸಿದ್ದಿ ಇದ್ದವರಿಗೆ ಎಲ್ಲರೂ ಪ್ರಶಸ್ತಿ ಕೊಡುತ್ತಾರೆ. ಸದ್ದಿಲ್ಲದೆ ಸಮಾಜಕ್ಕಾಗಿ ಕೆಲಸ ಮಾಡಿದವರನ್ನು ಗುರುತಿಸಿ ಪ್ರಶಸ್ತಿ ನೀಡಬೇಕೆಂದು ಸ್ವಾಮಿಗಳು ಹೇಳುತ್ತಿದ್ದರು. ವಿಧವೆಯೊಬ್ಬರು ಬರೆದ ಪುಸ್ತಕಕ್ಕೆ 32 ವರ್ಷಗಳ ನಂತರ ಪುಸ್ತಕ ಮತ್ತು ಲೇಖಕರಿಗೆ ಪ್ರಶಸ್ತಿ ನೀಡಲಾಯಿತು. ಮೌಲಿಕವಾಗಿ ಚಿಂತನೆ ಮಾಡಿ, ದೊಡ್ಡ ಪ್ರಮಾಣದಲ್ಲಿ ಪ್ರಕಟಣೆಗಳನ್ನು ಹೊರತಂದಿದ್ದಾರೆ.

    ಸಾಧಕನಿಗೆ ಸಾವು ಅಂತ್ಯವಲ್ಲ ಸಾವಿನ ನಂತರವೂ ಬದುಕುವನು ಸಾಧಕ ಎನ್ನುವ ಸ್ವಾಮಿ ವಿವೇಕಾನಂದರ ನುಡಿಗಳಂತೆ ಅವರು ಸಾಧಕರಾಗಿ ನಮ್ಮ ನಡುವೆ ಬದುಕಿದ್ದಾರೆ. ಸಿದ್ದರಾಮ ಮಹಾಸ್ವಾಮಿಗಳನ್ನು ಗುರುತಿಸಿ ಪರಂಪರೆ ಮುಂದುವರೆಯಲು ಎಲ್ಲಾ ಕೆಲಸ ಮಾಡಿದ್ದಾರೆ ಎಂದರು.

    ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಲೊಕೋಪಯೋಗಿ ಇಲಾಖೆ ಸಚಿವ ಸಿ.ಸಿ.ಪಾಟೀಲ, ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ, ಲೋಕಸಭಾ ಸದಸ್ಯ ಶಿವಕುಮಾರ ಉದಾಸಿ, ಶಾಸಕ ಕಳಕಪ್ಪ ಬಂಡಿ, ರಾಮಣ್ಣ ಲಮಾಣಿ, ವಿಧಾನ ಪರಿಷತ ಸದಸ್ಯ ಎಸ್.ವಿ.ಸಂಕನೂರ, ಮಾಜಿ ಸಚಿವ ಎಸ್.ಎಸ್.ಪಾಟೀಲ, ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ದುರದುಂಡಿಶ್ವರ ಮಠ ಅರಬಾವಿ, ಶ್ರೀ ನಿಜಗುಣ ಪ್ರಭು ತೋಂಟದಾರ್ಯ ಮಹಾಸ್ವಾಮಿಗಳು ತೋಂಟದಾರ್ಯ ಶಾಖಾಮಠ ಮುಂಡರಗಿ-ಬೈಲೂರ, ಶ್ರೀ ಗುರುಬಸವ ಮಹಾಸ್ವಾಮಿಗಳು ತೋಂಟದಾರ್ಯ ಶಾಖಾ ಮಠ ಶಿರೋಳ, ಶ್ರೀ ಶಾಂತಲಿಂಗ ಮಹಾಸ್ವಾಮಿಗಳು ದೊರೆಸ್ವಾಮಿ ವೀರಕ್ತಮಠ ಭೈರನಟ್ಟಿ, ಗದಗ-ಬೆಟಗೇರಿ ನಗರ ಸಭೆ ಅಧ್ಯಕ್ಷೆ ಉಷಾ ದಾಸರ, ಉಪಾದ್ಯಕ್ಷೆ ಸುನಂದಾ ಬಾಕಳೆ, ದ್ರಾಕ್ಷಾ ರಸ ಮಂಡಳಿ ಅಧ್ಯಕ್ಷ ಕಾಂತಿಲಾಲ ಬನ್ಸಾಲಿ, ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂಗಮೇಶ ದುಂದುರ ಸೇರಿದಂತೆ ಇತರರು ಉಪಸ್ಥಿತರಿದ್ದರು.

    Verbattle
    Verbattle
    Verbattle
    #bommayi #Gadag ಬಸವರಾಜ ಹೊರಟ್ಟಿ ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous Articleಈಶ್ವರಪ್ಪ ಬಂಧನದ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ಸಿಗಿಲ್ಲ- ಸಿಎಂ
    Next Article ಈಶ್ವರಪ್ಪ ಬಂಧನವಾಗಲೇಬೇಕು..
    vartha chakra
    • Website

    Related Posts

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    February 24, 2026

    ನಾಯಿ ಕಚ್ಚಿದ್ದಕ್ಕೆ ಹೀಗಾ ಮಾಡಿಕೊಳ್ಳೋದು..?!

    February 24, 2026

    ಬಿಜೆಪಿಯ ಅಂತಿಮ ದಿನಗಳು ಹತ್ತಿರವಾಗಿವೆ: ಚಿಕ್ಕಬಳ್ಳಾಪುರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

    February 23, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • pin up casino играть на деньги on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Diegotup on ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    • MichaelRem on ಯಾರೇ.. ಕೂಗಾಡಲಿ…
    Latest Kannada News

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    February 24, 2026

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    February 24, 2026

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    February 24, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.