ಬೆಂಗಳೂರು,ಜು.18-
ಐಷಾರಾಮಿ ಬದುಕು, ಮಲೇಶಿಯನ್ ಹುಡುಗಿಯರು ವಿದೇಶಿ ಮಧ್ಯದ ಮೂಲಕ ಶ್ರೀಮಂತ ಕುಳಗಳನ್ನು ಖೆಡ್ಡಾಕ್ಕೆ ಬೀಳಿಸಿ ಸಾಲದ ಹೆಸರಿನಲ್ಲಿ ನೂರಾರು ಕೋಟಿ ರೂಪಾಯಿಗಳನ್ನು ಪಡೆದು ಪಂಗನಾಮ ಹಾಕಿರುವ ಐ ನಾತಿ ವಂಚಕನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ರೋಹನ್ ಅಲಿಯಾಸ್ ರೋಹನ್ ಸಲ್ಡಾನಾ (45) ಬಂಧಿತ ಆರೋಪಿಯಾಗಿದ್ದು, ಈತನ ಐಷಾರಾಮಿ ಜೀವನ ವಿದೇಶಗಳೊಂದಿಗೆ ಹೊಂದಿರುವ ನಂಟು ಪ್ರಭಾವಿಗಳೊಂದಿಗೆ ಹೊಂದಿರುವ ಸಂಪರ್ಕ ಬ್ಯಾಂಕ್ ಬ್ಯಾಲೆನ್ಸ್ ಕಂಡು ಪೊಲೀಸರೇ ದಂಗುಬಡಿದು ಹೋಗಿದ್ದಾರೆ
ರೋಹನ್ ವಿರುದ್ಧ ಕೇಳಿ ಬಂದ ಆರೋಪದ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ನೇತೃತ್ವದ ತಂಡ ಕಳೆದ ರಾತ್ರಿ ಮಂಗಳೂರು ಹೊರವಲಯದ ಜಪ್ಪಿನಮೊಗರು ಎಂಬಲ್ಲಿನ ಐಷಾರಾಮಿ ಬಂಗಲೆಯ ಮೇಲೆ ದಾಳಿ ನಡೆಸಿದ ವೇಳೆ ಅಲ್ಲಿನ ವೈಭೋಗ ಕಂಡು ಇಡೀ ತಂಡ ಬೆಚ್ಚಿಬಿದ್ದಿದೆ
ಮನೆಯಲ್ಲಿನ ಚಿನ್ನ, ಬಣ್ಣದ ಚಿತ್ತಾರ, ಎಲ್ಲಿ ನೋಡಿದ್ರೂ ವಿದೇಶಿ ಮದ್ಯಗಳು, ಮಲೇಶಿಯನ್ ಹುಡುಗಿಯರು ಎಲ್ಲವನ್ನು ಮನೆಗೆ ಬಂದ ಉದ್ಯಮಿಗಳಿಗೆ ನೀಡುತ್ತಿದ್ದ. ಐಷಾರಾಮಿ ಮನೆ, ಅಲ್ಲಿನ ಆತಿಥ್ಯ ನೋಡಿಯೇ ಉದ್ಯಮಿಗಳು ಖೆಡ್ಡಾಕ್ಕೆ ಬೀಳುತ್ತಿದ್ದರು.
ಮೊದಲ ಸುತ್ತಿನ ಮಾತುಕತೆ ಬಳಿಕ ಉದ್ಯಮಿಗಳನ್ನು ತನ್ನ ವಂಚನಾ ಜಾಲಕ್ಕೆ ಬೀಳಿಸಿಕೊಳ್ಳುತ್ತಿದ್ದ. ಉದ್ಯಮಿಗಳ ಒಪ್ಪಿಗೆಯ ನಂತರ 50 ರಿಂದ 100 ಕೋಟಿ ರೂ. ಅಥವಾ ಅದಕ್ಕಿಂತ ದೊಡ್ಡ ಮೊತ್ತದ ಸಾಲ ನೀಡಲು 5-10 ಕೋಟಿ ರೂ. ಸ್ಟ್ಯಾಂಪ್ ಡ್ಯೂಟಿ ಹಣ ನೀಡುವಂತೆ ಕೇಳುತ್ತಿದ್ದ. ಆತನ ಬಣ್ಣದ ಮಾತಿಗೆ ಮರುಳಾಗಿ ಉದ್ಯಮಿಗಳು ಹಿಂದೆ-ಮುಂದೆ ನೋಡದೇ ಕೋಟ್ಯಂತರ ರೂ. ಹಣವನ್ನು ನಗದು ರೂಪದಲ್ಲಿ ನೀಡುತ್ತಿದ್ದರು.
ಮೊದಲ ಸುತ್ತಿನ ಮಾತುಕತೆ ಬಳಿಕ ಉದ್ಯಮಿಗಳಿಗೆ ತನ್ನ ವಂಚನೆ ಜಾಲದ ಖೆಡ್ಡಾಕ್ಕೆ ಬೀಳಿಸುತ್ತಿದ್ದ ರೋಹನ್, 50 ಕೋಟಿಯಿಂದ 100 ಕೋಟಿ ರೂ. ವ್ಯವಹಾರ ಅಥವಾ ಅದಕ್ಕಿಂತ ದೊಡ್ಡ ಮೊತ್ತದ ಸಾಲ ನೀಡಲು ಹಣಕ್ಕೆ ಬೇಡಿಕೆ ಇಡುತ್ತಿದ್ದ. ತಾನು ನಿರೀಕ್ಷೆ ಮಾಡಿದಷ್ಟು ಹಣ ವಸೂಲಿಯಾದ ಬಳಿಕ ಉದ್ಯಮಿಗಳಿಗೆ ನಾನಾ ನೆಪ ಹೇಳಿ ಎಸ್ಕೇಪ್ ಆಗುತ್ತಿದ್ದ. ಹೀಗೆ ಕೇವಲ 3 ತಿಂಗಳಲ್ಲೇ 45 ಕೋಟಿ ರೂ ವ್ಯವಹಾರ ನಡೆಸಿರುವುದು ಪತ್ತೆ ಆಗಿದೆ.
ಆರೋಪಿ ರೋಹನ್ ಸಲ್ಡಾನಾನ ಐಷಾರಾಮಿ ಬೆಡ್ ರೂಮ್ ಬಳಿ ಹೈಡ್ ಔಟ್ ರೂಮ್ ಇದೆ. ಬೆಡ್ ರೂಮ್ ಕಬೋರ್ಡ್ ಒಳಗೆ ಒಂದು ಹಿಡನ್ ಡೋರ್ ಇದೆ. ಅದನ್ನು ತಳ್ಳಿದ್ದರೆ ವಿಶಾಲವಾದ ರೂಮ್ ಇದೆ. ಪೊಲೀಸರು ಅಥವಾ ಮೋಸ ಹೋದವರು ಬಂದರೆ ಇದೇ ರೂಮ್ನಲ್ಲಿ ಆತ ಅಡಗಿಕೊಳ್ಳುತ್ತಿದ್ದ.
ಇದನ್ನು ನೋಡಿ ಪೊಲೀಸರೇ ಶಾಕ್ ಆಗಿದ್ದಾರೆ.
ರೋಹನ್ ಸಲ್ಡಾನಾ ಯಾರು?
ರೋಹನ್ ಸಲ್ಡಾನಾ ಹುಟ್ಟುತ್ತಲೇ ಶ್ರೀಮಂತನಲ್ಲ. 2016ರವರೆಗೂ ಕಷ್ಟದ ಜೀವನ ಮಾಡುತ್ತಿದ್ದ. ವಂಚನೆಯ ಜಾಲಕ್ಕೂ ಮುನ್ನ ಮುಂಬೈಯಲ್ಲಿ ಕೆಲಸ ಮಾಡಿಕೊಂಡಿದ್ದ. ತನಗೆ ಪ್ರಸಿದ್ಧ ಉದ್ಯಮಿಗಳ ಪರಿಚಯವಿದೆ ಎಂದು ಹೇಳಿಕೊಳ್ಳುತ್ತಿದ್ದ.
2016ರ ಬಳಿಕ ವಂಚನೆಯ ಜಾಲಕ್ಕೆ ಕೈ ಹಾಕಿದ್ದ. ಹಣದಾಸೆಯಿಂದ ವಂಚನೆಯ ಜಾಲವನ್ನು ವಿಸ್ತಾರ ಮಾಡಿಕೊಂಡಿದ್ದ. ಇದೇ ವರ್ಷ ಜನವರಿಯಲ್ಲಿ ಮತ್ತೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ. ಆ ಬಳಿಕ ಕೋಟ್ಯಂತರ ರೂ. ವಂಚನೆ ಗೆ ಕೈ ಹಾಕಿದ್ದ. ಈ ನಿಟ್ಟಿನಲ್ಲಿ ಕಳೆದ ಮೂರು ತಿಂಗಳ ಅವಧಿಯಲ್ಲಿ 40 ಕೋಟಿ ರೂ. ವ್ಯವಹಾರ ಮಾಡಿದ್ದ. ಕಳೆದ ತಿಂಗಳು 10 ಕೋಟಿ ರೂ. ಮೌಲ್ಯದ ಫಿಶಿಂಗ್ ಬೋಟ್ ತಯಾರು ಮಾಡಲು ಹೂಡಿಕೆ ಮಾಡಿದ್ದನು.