Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವರ್ತಿಕಾ ಕಟಿಯಾರ್ ಬಗ್ಗೆ ರೂಪಾ ಮೌದ್ಗೀಲ್ ಏನು ಹೇಳಿದ್ದಾರೆ ನೋಡಿ
    Viral

    ವರ್ತಿಕಾ ಕಟಿಯಾರ್ ಬಗ್ಗೆ ರೂಪಾ ಮೌದ್ಗೀಲ್ ಏನು ಹೇಳಿದ್ದಾರೆ ನೋಡಿ

    vartha chakraBy vartha chakraMarch 6, 202526 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು:
    ಡಿಐಜಿ ವರ್ತಿಕಾ ಕಟಿಯಾರ್ ತಮ್ಮ ವಿರುದ್ಧ ದಾಖಲೆ ಕಳ್ಳತನ ಆರೋಪದಲ್ಲಿ ನೀಡಿದ್ದ ದೂರಿಗೆ ಡಿ. ರೂಪಾ ಮೌದ್ಗಿಲ್​ ಅವರೇ ಸ್ಪಷ್ಟೀಕರಣ ನೀಡಿದ್ದಾರೆ .ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದ್ದು,ಅದರ ವಿವರ ಅಚ್ಚರಿ ಮೂಡಿಸುವಂತಿವೆ.
    ಆಂತರಿಕ ಭದ್ರತಾ ವಿಭಾಗದ ಡಿಐಜಿ ವರ್ತಿಕಾ ಕಟಿಯಾರ್  ಶಿಸ್ತಿನ ಇಲಾಖೆಯಲ್ಲಿ ಇದ್ದುಕೊಂಡು ಅಶಿಸ್ತಿನ ರೀತಿ ನಡೆದುಕೊಂಡಿದ್ದಾರೆ. ಹೀಗಾಗಿ ಅವರ ವಿರುದ್ಧ ಶಿಸ್ತು ಕ್ರಮಕೈಗೊಳ್ಳಬೇಕೆಂದು ರೂಪಾ ಅವರು ಪತ್ರದ ಮೂಲಕ ಮನವಿ ಮಾಡಿದ್ದಾರೆ.
    6-9-2024ರಂದು ಕೆಲವು ಕಾನ್‌ಸ್ಟೆಬಲ್‌ಗಳು ತಮ್ಮ ಕೊಠಡಿಯಿಂದ ಫೈಲ್‌ಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಹಾಗೇ ಕೆಲ ಫೈಲ್‌ಗಳ ಫೋಟೋಗಳನ್ನು ತೆಗೆದುಕೊಂಡಿದ್ದಾರೆ ಎಂದು ಅವರು(ವರ್ತಿಕಾ) ಹೇಳುತ್ತಾರೆ. ಆದರೆ ಅವರು ಯಾವುದೇ ಪುರಾವೆಗಳಿಲ್ಲದೆ ಈ ಅಸಂಬದ್ಧ ಮತ್ತು ಸುಳ್ಳು ಆರೋಪಗಳನ್ನು ಮಾಡಿದ್ದಾರೆ.‌ಈ ಬಗ್ಗೆ ಕಾನ್‌ಸ್ಟೆಬಲ್‌ಗಳ ಯಾವುದೇ ಹೇಳಿಕೆಗಳಿಲ್ಲ, ಫೈಲ್‌ಗಳ ಫೋಟೋ ತೆಗೆದುಕೊಂಡಿರುವ ಯಾವುದೇ ಪುರಾವೆಗಳಿಲ್ಲ. ಅವರ ಕೊಠಡಿ ಮತ್ತು ನನ್ನ ಕೊಠಡಿಯ ಮುಂದಿನ ಕಾರಿಡಾರ್‌ನಲ್ಲಿ ಕನಿಷ್ಠ 5 ಸಿಸಿಟಿವಿ ಕ್ಯಾಮೆರಾಗಳಿವೆ. ಅವರು ಯಾವುದೇ ಸಿಸಿಟಿವಿ ದೃಶ್ಯಾವಳಿಗಳನ್ನು ಲಗತ್ತಿಸಿಲ್ಲ ಎಂದು ರೂಪಾ ಸ್ಪಷ್ಟಪಡಿಸಿದ್ದಾರೆ.
    ಒಂದು ವೇಳೆ ಈ ರೀತಿ ಘಟನೆ ನಡೆದಿದ್ದರೆ ಅವರು (ವರ್ತಿಕಾ) ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಹಿರಿಯ ಅಧಿಕಾರಿಗಳ ಗಮನಕ್ಕೆ ಏಕೆ ತರಲಿಲ್ಲ? ನನ್ನ ಮೇಲೆ ಎಡಿಜಿಪಿ ಐಎಸ್‌ಡಿ ಇದ್ದಾರೆ. ಪೊಲೀಸ್ ಮಹಾನಿರ್ದೇಶಕ ಐಎಸ್‌ಡಿ ಇದ್ದಾರೆ ಮತ್ತು ಪೊಲೀಸ್ ಪಡೆಯ ಮುಖ್ಯಸ್ಥರಾಗಿರುವ ಡಿಜಿ ಮತ್ತು ಐಜಿಪಿ ಇದ್ದಾರೆ. ಈ ಬಗ್ಗೆ ಅವರು ಏಕೆ ಇವರುಗಳ ಗಮನಕ್ಕೆ ತರಲಿಲ್ಲ.
    ನನ್ನ ಮೇಲೆ ಕೆಲವು ಕಡತಗಳ ಕಳ್ಳತನ ಮಾಡಿರುವ ಆರೋಪಿಗಳನ್ನು ಮಾಡುತ್ತಿದ್ದಾರೆ. ಅವರು ನಿಷ್ಪಕ್ಷಪಾತ ತನಿಖೆಗಾಗಿ ಇಲಾಖಾ ಮುಖ್ಯಸ್ಥರಿಗೆ ಪತ್ರ ಬರೆಯಬಹುದಿತ್ತಲ್ವಾ ಎಂದು ಪ್ರಶ್ನಿಸಿದ್ದಾರೆ.
    ಅವರು ಸ್ವತಃ ನ್ಯಾಯಾಧೀಶರಾಗಿದ್ದಾರೆ. ಅವರು ನನ್ನ ಖ್ಯಾತಿಗೆ ಕಳಂಕ ತರುವ ಮತ್ತು ನನಗೆ ಮಾನಹಾನಿ ಮಾಡುವ ಏಕೈಕ ಉದ್ದೇಶದಿಂದ ಈ ರೀತಿಯ ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಅವರ ಕ್ರಮಗಳು ಅಶಿಸ್ತು ಮತ್ತು ಘೋರ ದುಷ್ಕೃತ್ಯಕ್ಕೆ ಸಮಾನ. ಪೊಲೀಸ್ ಇಲಾಖೆಯು ಶಿಸ್ತುಬದ್ಧವಾಗಿದೆ. ಮುಖ್ಯ ಕಾರ್ಯದರ್ಶಿಗೆ ನೇರವಾಗಿ ಬರೆಯುವ ಕ್ರಮಗಳು ಅವಿಧೇಯತೆಗೆ ಸಮಾನವಾಗಿರುತ್ತದೆ. ಹೀಗಾಗಿ ವರ್ತಿಕಾ ಕಟಿಯಾರ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
    ಮೇಲ್ನೋಟಕ್ಕೆ ಆರೋಪಗಳು ಅಸಂಬದ್ಧವಾಗಿವೆ. ಏಕೆಂದರೆ ನಾನು ಹಿರಿಯ ಅಧಿಕಾರಿಯಾಗಿದ್ದೇನೆ. ಹೀಗಾಗಿ ಅಧಿಕೃತವಾಗಿ ಯಾವುದೇ ಫೈಲ್​ಗಳನ್ನು ತರಸಿಕೊಳ್ಳಬಹುದು ಮತ್ತು ವಿಲೇವಾರಿ ಮಾಡಬಹುದು. ಆದ್ರೆ, ಅವರು ಯಾವುದೇ ತಲೆಬುಡವಿಲ್ಲದ ಸುಳ್ಳು ಹೇಳುತ್ತಿದ್ದಾರೆ. ವರ್ತಿಕಾ ಕಟಿಯಾರ್ ಅವರು ವೈಯಕ್ತಿಕ ಕಾರಣಗಳಿಗಾಗಿ ಇತರರಿಗೆ ಕಿರುಕುಳ ನೀಡುವ ಉದ್ದೇಶದಿಂದ ಸುಳ್ಳು ಆರೋಪಗಳನ್ನು ಮಾಡುತ್ತಾರೆ ಎಂದು ಕೆಲ
    ಆರೋಪಗಳನ್ನು ಮಾಡುತ್ತಾರೆ ಎಂದು ಕೆಲ ಉದಾಹರಣೆಗಳ ಸಮೇತ ಸ್ಪಷ್ಟನೆ ನೀಡಿದ್ದಾರೆ.
    ಅವರು 2010 ರ ಐಪಿಎಸ್ ಬ್ಯಾಚ್‌ಗೆ ಸೇರಿದವರಾಗಿದ್ದು, ಹೈದರಾಬಾದ್‌ನ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ಪ್ರೊಬೆಷನರ್ ಆಗಿ ತರಬೇತಿ ಪಡೆಯುತ್ತಿದ್ದಾಗ ಐಪಿಎಸ್ ವಿಪುಲ್ ಕುಮಾರ್ ವಿರುದ್ಧ ಲೈಂಗಿಕ ಕಿರುಕುಳದ ಬಗ್ಗೆ ಲಿಖಿತ ದೂರು ನೀಡಿದ್ದರು. ವಿಪುಲ್ ಕುಮಾರ್ ಒಬ್ಬ ಅತ್ಯುತ್ತಮ ಅಧಿಕಾರಿ ಮತ್ತು ಅವರು ಕರ್ನಾಟಕ ಕೇಡರ್‌ಗೆ ಸೇರಿದವರು ಎಂದು ನಮಗೆಲ್ಲರಿಗೂ ತಿಳಿದಿದೆ. ಆದರೆ ಆ ದೂರು ಸುಳ್ಳು ಎಂದು ತಿಳಿದುಬಂತು.
    ತಮ್ಮ ಪತಿ ನಿತಿನ್ ಯೆಯೋಲಾ ವಿರುದ್ಧವೇ ಸುಳ್ಳು ದೂರು ನೀಡಿದ್ದರು. ಎಂಎಸ್ ಕಟ್ಟಡದ 6ನೇ ಮಹಡಿಯಲ್ಲಿರುವ ತಮ್ಮ ಕಚೇರಿಗೆ ಆ್ಯಸಿಡ್ ಎರಚಲು ಬಂದಿದ್ದರು. ಕೊಲ್ಲುವ ಉದ್ದೇಶ ಹೊಂದಿದ್ದರು. ಆದರೆ, ಕಚೇರಿಯಲ್ಲಿ ಇಲ್ಲದ ಕಾರಣ ತಪ್ಪಿಸಿಕೊಂಡೆ ಎಂದು ತಮ್ಮ ಪತಿ ವಿರುದ್ಧವೇ ಆರೋಪಿಸಿದ್ದರು ಎಂದು ರೂಪಾ ಅವರು ವರ್ತಿಕಾ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.
    ಸುಳ್ಳು ಆರೋಪಗಳನ್ನು ಹೊರಿಸಿ ಮಾಧ್ಯಮಗಳಿಗೆ ಸೋರಿಕೆ ಮಾಡಿ ತೀವ್ರ ದುಷ್ಕೃತ್ಯ ಮತ್ತು ಅಶಿಸ್ತಿನ ಕೃತ್ಯ ಎಸಗಿದ್ದಕ್ಕಾಗಿ ಸರ್ಕಾರ ಅವರ (ವರ್ತಿಕಾ) ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ರೂಪಾ ಅವರು ಸಿಎಸ್​ಗೆ ಬರೆದಲ್ಲಿ ವಿನಂತಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ

    Verbattle
    Verbattle
    Verbattle
    ಕರ್ನಾಟಕ ಕಳ್ಳತನ ನ್ಯಾಯ Bengaluru ಲೈಂಗಿಕ ಕಿರುಕುಳ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಭಯ ಬೇಡ ಕೋಳಿ ತಿನ್ನಿ
    Next Article ಇವರೆಂತಾ ವಂಚಕರು ನೋಡಿ
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Daviddek on ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !
    • RicardoCor on ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • Daviddek on ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.