ಬೆಂಗಳೂರು, ಜು.22:
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಹಗರಣಕ್ಕೆ ಹಠಾತ್ ಹೊಸ ತಿರುವು ಸಿಕ್ಕಿದೆ.
ಈ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆಯ ವೇಳೆ ಮಾಜಿ ಸಚಿವ ನಾಗೇಂದ್ರ ಅವರ ಹೆಸರು ಹೇಳುವಂತೆ ಇ.ಡಿ ಅಧಿಕಾರಿಗಳು ತಮ್ಮ ಮೇಲೆ ಒತ್ತಡ ಹಾಕಿ, ಮಾನಸಿಕವಾಗಿ ಹಿಂಸೆ ನೀಡುವ ಮೂಲಕ ಕಿರುಕುಳ ಕೊಡಿತ್ತಿದ್ದಾರೆ ಎಂದು ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಕಲ್ಲೇಶ್ ಆಪಾದಿಸಿದ್ದಾರೆ.
ಅಷ್ಟೇ ಅಲ್ಲ ಈ ಆರೋಪಕ್ಕೆ ಸಂಭವಿಸಿದಂತೆ ಅವರು
ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಇ.ಡಿ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿದ್ದಾರೆ. ಇದನ್ನು ಆಧರಿಸಿ ಪೊಲೀಸರು ಇದೀಗ ಇ.ಡಿ.ಅಧಿಕಾರಿಗಳ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದು,ಪ್ರಕರಣ ಕೋಲಾಹಲಕಾರಿ ತಿರುವು ಪಡೆದುಕೊಂಡಿದೆ.
ಇ.ಡಿ.ಅಧಿಕಾರಿಗಳ ವಿರುದ್ದ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಕಲ್ಲೇಶ್,ತಮಗೆ ವಿಚಾರಣೆಗೆ ಹಾಜರಾಗುವಂತೆ ಇ.ಡಿಯವರು ದೂರವಾಣಿ ಮೂಲಕ ಕರೆ ಮಾಡಿ ತಿಳಿಸಿದ್ದರು.ಅದರಂತೆ ನಾನು ಶಾಂತಿನಗರದ ಜಾರಿ ನಿರ್ದೇಶನಾಲಯ ಕಚೇರಿಗೆ ಹೋಗಿದ್ದೆ. ನನ್ನ ಹೇಳಿಕೆಯನ್ನು ಇ.ಡಿ ಅಧಿಕಾರಿ ಮುರುಳಿ ಕಣ್ಣನ್ ದಾಖಲಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಈ ವೇಳೆ ಅವರು ಪ್ರಕರಣ ಕುರಿತಂತೆ ಮಾಜಿ ಸಚಿವ ನಾಗೇಂದ್ರ ಅವರ ಹೆಸರು ಹೇಳದಿದ್ದರೆ ನಿಮ್ಮನ್ನು ಅರೆಸ್ಟ್ ಮಾಡುತ್ತೇವೆ. ಎರಡು ವರ್ಷ ಆದರೂ ನಿಮಗೆ ಬೇಲ್ ಸಿಗುವುದಿಲ್ಲ ಎಂದು ಹೆದರಿಸುತ್ತಾರೆ” ಎಂದು ಕಲ್ಲೇಶ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ವಿಚಾರಣೆ ಸಮಯದಲ್ಲಿ ಇ.ಡಿ.ಅಧಿಕಾರಿಗಳು
ನನಗೆ 17 ಪ್ರಶ್ನೆಗಳನ್ನು ಕೇಳುತ್ತಾರೆ. ನಾನು 17 ಪ್ರಶ್ನೆಗಳಿಗೂ ಉತ್ತರ ನೀಡುತ್ತೇನೆ. ಅದರಲ್ಲಿ ಮೂರು ಪ್ರಶ್ನೆಗಳಿಗೆ ಉತ್ತರಿಸಲು ನನಗೆ ಕಡತ (ಫೈಲ್)ಬೇಕು ಹಾಗು ನನ್ನ ಕೆಳಹಂತದ ಅಧಿಕಾರಿಗಳು ಬೇಕಾಗುತ್ತಾರೆಂದು ತಿಳಿಸಿರುತ್ತೇನೆ. ಆಗ ಕಣ್ಣನ್ ರವರು ವಿಚಾರಣೆ ಮುಗಿದು ನನ್ನ ಕಡೆಯಿಂದ ನನ್ನ ಹೇಳಿಕೆಗೆ ಸಹಿ ಪಡೆಯುತ್ತಾರೆ. ನಾನು ನನ್ನ ಹೇಳಿಕೆಯ ಪ್ರತಿಯನ್ನು ನನಗೊಂದು ಕೊಡಿ ಎಂದು ಕೇಳುತ್ತೇನೆ. ಆದರೆ ಸದರಿಯವರು ಕೊಡಲಿಲ್ಲ” ಎಂದಿದ್ದಾರೆ.
“ನೀವು ಎಂ.ಜಿ ರೋಡ್ ಖಾತೆಗೆ ಅನುದಾನ ಜಮಾ ಮಾಡಲು ಮಾಜಿ ಮಂತ್ರಿ ನಾಗೇಂದ್ರ, ಮತ್ತು ಎಫ್.ಡಿ ಇಲಾಖೆಯಿಂದ ಸೂಚನೆ ಇತ್ತು ಎಂದು ಒಪ್ಪಿಕೊಂಡಲ್ಲಿ ನಿಮ್ಮನ್ನು ಬಿಡುತ್ತೇವೆ. ಇಲ್ಲದಿದ್ದರೆ ಅರೆಸ್ಟ್ ಮಾಡುತ್ತೇವೆಂದು ಮಾನಸಿಕ ಹಿಂಸೆಯನ್ನು ನೀಡಿರುತ್ತಾರೆ” ಎಂದು ದೂರಿನಲ್ಲಿ ಹೇಳಿದ್ದಾರೆ. ಇದನ್ನು ಆಧರಿಸಿ ಈಗ ಎಫ್ಐಆರ್ ದಾಖಲಿಸಲಾಗಿದೆ.
Previous Articleಸೂರಜ್ ರೇವಣ್ಣ ಅವರಿಗೆ Bail granted.
Next Article ಛಲವಾದಿ ನಾರಾಯಣಸ್ವಾಮಿಗೆ ಗೆ ಬಂಪರ್.