Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಕೃತನ ಬಂಧನ
    ಅಪರಾಧ

    ವಿಕೃತನ ಬಂಧನ

    vartha chakraBy vartha chakraJanuary 13, 20254 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು:
    ಚಾಮರಾಜಪೇಟೆಯ ವಿನಾಯಕನಗರದಲ್ಲಿ ರಸ್ತೆ ಬದಿ ಕಟ್ಟಿದ್ದ ಹಸುಗಳ ಕೆಚ್ಚಲು ಕೊಯ್ದು ಮಚ್ಚಿನಿಂದ ಕಾಲಿಗೆ ಹೊಡೆದ ಆರೋಪಿಯನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದಾರೆ.
    ಬಿಹಾರದ ಚಂಪಾರಣ್ ಜಿಲ್ಲೆಯ ಶೇಕ್ ನಸ್ರು (30) ಬಂಧಿತ‌ ಆರೋಪಿಯಾಗಿದ್ದಾನೆ, ರಸ್ತೆ ಬದಿ ಶೆಡ್‌ನಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದ ಘಟನೆ ವಿನಾಯಕನಗರದಲ್ಲಿ ನಿನ್ನೆ ಬೆಳಿಗ್ಗೆ ಬೆಳಕಿಗೆ ಬಂದಿತ್ತು.
    ಹಸುಗಳ ಮಾಲೀಕ ನೀಡಿದ ದೂರಿನ ಅನ್ವಯ ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ 325 (ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ) ಕಾಯ್ದೆಯಡಿ ಕಾಟನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.
    ಆರೋಪಿ ಶೇಕ್ ನಸ್ರು ಘಟನಾ ಸ್ಥಳದಿಂದ 50 ಮೀಟರ್ ದೂರದಲ್ಲಿದ್ದ ಪ್ಲಾಸ್ಟಿಕ್ ಹಾಗೂ ಬಟ್ಟೆಯ ಬ್ಯಾಗ್‌ಗಳನ್ನು ಹೊಲಿಯುವ ಅಂಗಡಿಯಲ್ಲಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದ.
    ಮದ್ಯದ ಅಮಲಿನಲ್ಲಿ ದುಷ್ಕೃತ್ಯ ಎಸಗಿರುವುದು ತನಿಖೆಯ ವೇಳೆ ತಿಳಿದುಬಂದಿದೆ. ಪೊಲೀಸರು ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಜನವರಿ 24ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು,ಆತನನ್ನು ಹೆಚ್ಚಿನ ವಿಚಾರಣೆ ನಡೆಸಲಾಗಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಎಸ್. ಗಿರೀಶ್ ಮಾಹಿತಿ ನೀಡಿದ್ದಾರೆ.
    ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದ ವಿನಾಯಕನಗರ ನಿವಾಸಿ ಕರ್ಣ   ಹಲವು ವರ್ಷಗಳಿಂದ ಹಸು ಸಾಕುತ್ತಿದ್ದಾರೆ. ಕಳೆದ ಜ.11ರ ತಡರಾತ್ರಿ ಯಾರೋ ಕಿಡಿಗೇಡಿಗಳು ಮೂರು ಹಸುಗಳ ಕೆಚ್ಚಲನ್ನು ಕತ್ತರಿಸಿ, ಕಾಲಿಗೆ ಮಚ್ಚಿನಿಂದ ಹಲ್ಲೆ ಮಾಡಿ ವಿಕೃತಿ ಮೆರೆದಿದ್ದರು.
    ಚಿಕ್ಕಪೇಟೆ ಉಪ ವಿಭಾಗದ ಎಸಿಪಿ ರಮೇಶ್ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.
    ಹಸುಗಳಿಗೆ ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಹಸುಗಳು ಕ್ಷೇಮವಾಗಿವೆ. ಆದರೆ, ಗಾಯ ಮಾಸಲು ಸಮಯಬೇಕಿದೆ.
    ಹಸುವಿನ ಕೆಚ್ಚಲು ಕತ್ತರಿಸಿದ ವಿಚಾರ ತಿಳಿಯುತ್ತಿದ್ದಂತೆ ಹಿಂದೂ ಪರ ಸಂಘಟನೆ ಮುಖಂಡರು, ವಿಪಕ್ಷ ನಾಯಕ ಆರ್ ಅಶೋಕ್, ಸಂಸದ ಪಿಸಿ ಮೋಹನ್, ಎಂಎಲ್ಸಿ ರವಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ, ಮಾಲೀಕ ಕರ್ಣನಿಗೆ ಸಾಂತ್ವನ ಹೇಳಿದ್ದರು. ಘಟನೆಯನ್ನು ಖಂಡಿಸಿದ ನಾಯಕರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ವಿಪಕ್ಷ ನಾಯಕ‌ ಆರ್. ಅಶೋಕ್ ವೈಯುಕ್ತಿಕವಾಗಿ ಒಂದು ಲಕ್ಷ ರೂ ಪರಿಹಾರ ಘೋಷಣೆ ಮಾಡಿದ್ದರು.
    ಚಾಮರಾಜಪೇಟೆಯ ಪಶು ಆಸ್ಪತ್ರೆಯನ್ನು ಕಬ್ಜಾ ಮಾಡಲು ಮುಂದಾಗಿದ್ದರು. ಈ ವೇಳೆ ನಾನು ಮತ್ತು ಸುತ್ತಮುತ್ತಲಿನ ಹಸುಗಳ ಮಾಲೀಕರು ಹಸುಗಳೊಂದಿಗೆ ಆಸ್ಪತ್ರೆ ಮುಂದೆ ಪ್ರತಿಭಟನೆ ಮಾಡಿದ್ದರು. ಹೀಗಾಗಿ ಯಾರೋ ಕಿಡಿಗೇಡಿಗಳು ಈ ರೀತಿ ಮಾಡಿದ್ದಾರೆ ಎಂದು ಹಸುಗಳ ಮಾಲೀಕ ಕರ್ಣ ಆರೋಪಿಸಿದ್ದಾರೆ.

    Verbattle
    Verbattle
    Verbattle
    ಕಾಂಗ್ರೆಸ್ ನ್ಯಾಯ Bengaluru ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಇವೆ ನೋಡಿ
    Next Article ಈ ಬಾರಿ ಐಪಿಎಲ್ ಯಾವಾಗ ಗೊತ್ತಾ
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    February 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    February 21, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • скидка в винлаб промокод on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • урна для раздельного сбора мусора купить on ದೆಹಲಿಯಲ್ಲಿ ನಾಪತ್ತೆ ಪ್ರಕರಣಗಳ ಏರಿಕೆ: 2026ರ ಮೊದಲ 15 ದಿನಗಳಲ್ಲಿ 800ಕ್ಕೂ ಹೆಚ್ಚು ಜನ ನಾಪತ್ತೆ
    • https://swissdays2019.ru on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    February 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    February 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.