ಬೆಂಗಳೂರು, ಜೂ.3:
ವಿಧಾನಸಭೆಯಿಂದ ವಿಧಾನಪರಿಷತ್ ನ 11 ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ
ಆಯ್ಕೆ ಬಯಸಿ ನಾಮಪತ್ರ ಸಲ್ಲಿಸಿರುವ ಸಚಿವ ಬೋಸರಾಜು,ಮಾಜಿ ಸಚಿವ ಸಿ.ಟಿ.ರವಿ ಸೇರಿದಂತೆ ಎಲ್ಲರೂ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಯಿದೆ.
ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ನಿಂದ ಹನ್ನೊಂದು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿತ್ತು.
ತಮ್ಮ ಪಕ್ಷದ ಮುಖಂಡರೊಂದಿಗೆ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳು ಪ್ರತ್ಯೇಕವಾಗಿ ನಾಮಪತ್ರ ಸಲ್ಲಿಕೆ ಮಾಡಿದರು.ಕಾಂಗ್ರೆಸ್ ಅಭ್ಯರ್ಥಿಗಳು ಪ್ರತ್ಯೇಕವಾಗಿ ಉಮೇದುವಾರಿಕೆ ಮಾಡಿದರೆ ಬಿಜೆಪಿ-ಜೆಡಿಎಸ್ ಎನ್‌ಡಿಎ ಮೈತ್ರಿಕೂಟ ಅಭ್ಯರ್ಥಿಗಳು ಜೊತೆಗೆ ಆಗಮಿಸಿ ನಾಮಪತ್ರ ಸಲ್ಲಿಸಿದ್ದು ವಿಶೇಷವಾಗಿತ್ತು.
ಮಂಗಳವಾರ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಗುರುವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.
ಮೊದಲು ಕಾಂಗ್ರೆಸ್‌ನ 7 ಅಭ್ಯರ್ಥಿಗಳಾದ ಎನ್.ಎಸ್. ಬೋಸರಾಜು, ವಸಂತ್‌ಕುಮಾರ್, ಡಾ.ಯತೀಂದ್ರ, ಕೆ.ಗೋವಿಂದರಾಜ್, ಐವನ್ ಡಿಸೋಜಾ, ಬಿಲ್ಕಿಸ್ ಬಾನೋ, ಜಗದೇವ್ ಗುತ್ತೇದಾರ್ ಅವರುಗಳು ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ಉಮೇದುವಾರಿಕೆ ಮಾಡಿದರು.
ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರು, ಶಾಸಕರು ಹಾಗೂ ಪಕ್ಷದ ಮುಖಂಡರು ಹಾಜರಿದ್ದರು
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಬಸವರಾಜ ಬೊಮಾಯಿ, ಡಿ.ವಿ.ಸದಾನಂದಗೌಡ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ , ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಇತರೆ ನಾಯಕರೊಂದಿಗೆ ಆಗಮಿಸಿದ ಬಿಜೆಪಿಯ ಸಿ.ಟಿ.ರವಿ, ಎನ್.ರವಿಕುಮಾರ್ ಹಾಗೂ ಎಂ.ಜಿ.ಮುಳೆ, ಜೆಡಿಎಸ್‌ನ ಹಿರಿಯ ಮುಖಂಡ ಜವರಾಯಗೌಡ ಅವರು ಉಮೇದುವಾರಿಕೆ ಸಲ್ಲಿಕೆ ಮಾಡಿದರು.
ವಿಧಾನಸಭೆಯಲ್ಲಿ ಹೊಂದಿರುವ ಶಾಸಕರ ಸಂಖ್ಯೆಯ ಆಧಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ 7, ಪ್ರತಿಪಕ್ಷ ಬಿಜೆಪಿ 3 ಹಾಗೂ ಜೆಡಿಎಸ್ 1 ಸ್ಥಾನಗಳನ್ನು ಸುಲಭವಾಗಿ ಗೆಲ್ಲಲಿದೆ. ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯುವ ದ್ವೈವಾರ್ಷಿಕ ಚುನಾವಣೆಯಲ್ಲಿ ಓರ್ವ ಅಭ್ಯರ್ಥಿ ಗೆಲ್ಲಬೇಕಾದರೆ 19 ಮತಗಳನ್ನು ಪಡೆಯಬೇಕು.
ಅರವಿಂದ್‌ಕುಮಾರ್ ಅರಳಿ, ಎನ್.ಎಸ್.ಬೋಸರಾಜು, ಕೆ.ಗೋವಿಂದರಾಜ್, ಡಾ. ತೇಜಸ್ವಿನಿ ಗೌಡ, ಮುನಿರಾಜು ಗೌಡಪಿ.ಎಂ, ಕೆ.ಪಿ.ನಂಜುಂಡಿ ವಿಶ್ವಕರ್ಮ ಬಿ.ಎಂ.ಫಾರೂಕ್, ರಘುನಾಥ ರಾವ್ ಮಲ್ಕಾಪುರೆ, ಎನ್. ರವಿ ಕುಮಾರ್, ಎಸ್.ರುದ್ರೇಗೌಡ, ಕೆ.ಹರೀಶ್‌ಕುಮಾರ್ ಅವರ ಅಧಿಕಾರಾವಧಿ ಮುಕ್ತಾಯವಾಗಲಿದ್ದು, ತೆರವಾಗಲಿರುವ ಈ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಇದರಲ್ಲಿ ಎನ್.ಎಸ್.ಬೋಸರಾಜ್, ಗೋವಿಂದರಾಜ್, ಎನ್.ರವಿಕುಮಾರ್ ಪುನಃ ಸ್ಪರ್ಧಿಸಿದ್ದಾರೆ.
Previous Articleಜೈಲಿನಲ್ಲೇ ಕೊಲೆಯಾದ ಪಾತಕಿ.
Next Article ನಾಗೇಂದ್ರ ರಾಜೀನಾಮೆ ಕೇಳಿಲ್ಲ ಅಂದ್ರು ಸಿಎಂ.


6 Comments
La plataforma de Betmexico se consolida en 2026 como el sitio de apuestas y casa de apuestas deportivas lider para el mercado mexicano, llamando la atencion por su novedoso bono sin deposito de $50 MXN sin jugar lo depositado, una oferta unica que elimina las complicaciones tipicas de la demas casas de apuestas.
Het beste online casino is Betano https://betanogame.org/nl/. Ontgrendel 100% tot €500 plus gratis spins en geniet van non-stop actie. Snelle uitbetalingen, enorme toernooien en eindeloos plezier wachten op je.
https://miamifightcard.com/
In the context of MediaFightCard, the fight odds reveal a fascinating dynamic with titleholders entering as underdogs and aspirants boasting favorite status. In the featured bout for the available light heavyweight title, former champion Jiri Prochazka debuted as a slight -143 favorite over the surging Carlos Ulberg, who comes in as a +116 underdog even with his nine-fight winning streak.
https://codere.cat/
Nos referimos a Codere Mexico como un casino online que opera con pleno cumplimiento normativo con licencia oficial otorgada por la SEGOB , proporcionando a los jugadores en el pais un sitio garantizado y transparente en el que las transacciones de deposito y retiro se realizan solo en pesos mexicanos (MXN) via SPEI, el sistema de pagos ampliamente utilizado en Mexico.
Mostbet: o cassino que combina emoГ§ГЈo intensa com as melhores condiГ§Гµes – https://mostbetpt.pro/como-se-registrar/ , Mostbet entrega bГґnus turbinados e saques rГЎpidos para vocГЄ aproveitar logo .
Spin until regret apologizes in cash – https://gpdifluca.com/betano-casino-review-2026/ , One more spin and history books get rewritten .