ಬೆಂಗಳೂರು : ದೇವನಹಳ್ಳಿ ಬಳಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಷ್ಠಾಪನೆ ಆಗಲಿರುವ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆಯ ಭಾಗವಾದ 4 ಸಾವಿರ ಕಿಲೋ ತೂಕದ ಖಡ್ಗವು ದೆಹಲಿಯಿಂದ ಸೋಮವಾರ ಬೆಂಗಳೂರು ತಲುಪಿದೆ. ವಿಶೇಷ ಟ್ರಕ್‌ನಲ್ಲಿ ಬಂದ ಈ ಖಡ್ಗವನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಖಡ್ಗಕ್ಕೆ ಸಾಂಪ್ರದಾಯಿಕ ಶಕ್ತಿಪೂಜೆ ನೆರವೇರಿಸಲಾಯಿತು. ‘ಕೆಂಪೇಗೌಡರ ಸ್ಮರಣಾರ್ಥ ಕೆಐಎನಲ್ಲಿ 23 ಎಕರೆ ಜಾಗದಲ್ಲಿ ಪಾರಂಪರಿಕ ಪಾರ್ಕ್ ಅಸ್ತಿತ್ವಕ್ಕೆ ಬರಲಿದ್ದು, ಕಾಮಗಾರಿ ಭರದಿಂದ ಸಾಗುತ್ತಿವೆ. ಇಲ್ಲಿ ತಲೆಯೆತ್ತಲಿರುವ ಕೆಂಪೇಗೌಡರ ಪ್ರತಿಮೆಗೆ ₹ 85 ಕೋಟಿ ವಿನಿಯೋಗಿಸಲಾಗುತ್ತಿದೆ. ನೋಯಿಡಾದ ಶಿಲ್ಪಿ ರಾಮ್ ವಾನಜಿ ಸುತರ್ ಈ ಪ್ರತಿಮೆ ಮಾಡಿಕೊಡುತ್ತಿದ್ದಾರೆ’ ಎಂದು ಅಶ್ವತ್ಥನಾರಾಯಣ ತಿಳಿಸಿದರು. ‘ಕೆಂಪೇಗೌಡರು ಕೈಯಲ್ಲಿ ಹಿಡಿದಿರುವ ಕತ್ತಿಯು (ಖಡ್ಗ) ಕ್ಷಾತ್ರಬಲವನ್ನು ಪ್ರತಿನಿಧಿಸುತ್ತಿದ್ದು, ನವಭಾರತಕ್ಕೊಂದು ಸಂಕೇತವಾಗಿದೆ. ವಿಮಾನ ನಿಲ್ದಾಣದ ಮೂಲಕ ಹೋಗುವವರು ಮತ್ತು ಇಲ್ಲಿ ಬಂದಿಳಿಯುವವರಿಗೆ ಈ ಪ್ರತಿಮೆಯ ನೋಟ ಒಂದು ದಿವ್ಯ ಅನುಭೂತಿ ಮೂಡಿಸುವಂತಿರಬೇಕು ಎನ್ನುವುದು ಸರ್ಕಾರದ ಉದ್ದೇಶ’ ಎಂದರು.
Archives
- March 2026
- February 2026
- January 2026
- December 2025
- November 2025
- October 2025
- September 2025
- August 2025
- July 2025
- June 2025
- May 2025
- April 2025
- March 2025
- February 2025
- January 2025
- December 2024
- November 2024
- October 2024
- September 2024
- August 2024
- July 2024
- June 2024
- May 2024
- April 2024
- March 2024
- February 2024
- January 2024
- December 2023
- November 2023
- October 2023
- September 2023
- August 2023
- July 2023
- June 2023
- May 2023
- April 2023
- March 2023
- February 2023
- January 2023
- December 2022
- November 2022
- October 2022
- September 2022
- August 2022
- July 2022
- June 2022
- May 2022
- April 2022
