ಶಿವಮೊಗ್ಗ : ಏರ್‌ಪೋರ್ಟ್ ನಿರ್ಮಾಣದ ವಿಚಾರವಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.
ಶಿವಮೊಗ್ಗ ಏರ್‌ಪೋರ್ಟ್ ಶೀಘ್ರ ಪೂರ್ಣಕ್ಕೆ ಅನುದಾನ ಬಿಡುಗಡೆ ಮಾಡಲು ನಿರ್ಧಾರ ಮಾಡಿದ್ದೀರಾ. ಹೀಗಾಗಿ ಸಿಎಂ ಬೊಮ್ಮಾಯಿ ಅವರಿಗೆ ಧನ್ಯವಾದಗಳು. ಆದರೆ ನಮ್ಮ ಹೆಸರನ್ನು ಏರ್‌ಪೋರ್ಟ್ ಇಡುವ ಕುರಿತು ಘೋಷಣೆ ಮಾಡಿದ್ದೀರಾ. ನಿಮ್ಮ ಪ್ರೀತಿ ಅಭಿಮಾನಕ್ಕೆ ನನ್ನ ಧನ್ಯವಾದಗಳು ಎಂದು ಅಭಿನಂದನೆ ತಿಳಿಸಿದ್ದಾರೆ.
ಇನ್ನು ರಾಷ್ಟ್ರಕ್ಕೆ ಅಭಿವೃದ್ಧಿಗೆ ಸೇವೆ ಸಲ್ಲಿಸಿದ ಅನೇಕ ಮಹನೀಯರು, ದೇಶ ಭಕ್ತರ ಇದ್ದಾರೆ. ಅವರು ನೀಡಿರುವ ಕೊಡುಗೆಗೆ ಹೋಲಿಸಿದಾಗ ನನ್ನದು ಅಳಿಲು ಸೇವೆ. ತನ್ನ ಬೆಂಬಲಿಸಿದ ಜಿಲ್ಲೆಯ ಜನತೆಗೆ ಸೇವೆ ಸಲ್ಲಿಸಿದ್ದೇನೆ. ಈ ಹಿನ್ನೆಲೆಯಲ್ಲಿ ನನ್ನ ಹೆಸರು ಸೂಕ್ತವಲ್ಲವೆಂದು ಭಾವಿಸುತ್ತೇನೆ. ಹೀಗಾಗಿ ನಿಮ್ಮ ನಿರ್ಧಾರವನ್ನು ಪುನರ್ ಪರಿಶೀಲಿಸಿ . ದೇಶಕ್ಕಾಗಿ ಇತಿಹಾಸಕ್ಕೆ ಕೊಡುಗೆ ನೀಡಿದವರ ಹೆಸರನ್ನು ಏರ್ಪೋರ್ಟ್ಗೆ ನಾಮಕರಣ ಮಾಡಿ ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ.
