ಬೆಂಗಳೂರು,ಡಿ.11:
ಕೆಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಸ್ಯಾಂಡಲ್ ವುಡ್ ನ ಹ್ಯಾಟ್ರಿಕ್ ಹೀರೋ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ತಮಗೆ ಎದುರಾಗಿರುವ ಸಂಕಷ್ಟದಿಂದ ಮುಕ್ತಿ ಕೊಡಿಸುವಂತೆ ತಿರುಪತಿ ತಿಮ್ಮಪ್ಪನಿಗೆ ಮುಡಿ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಕುಟುಂಬ ಸದಸ್ಯರೊಂದಿಗೆ ತಿರುಪತಿಗೆ ತೆರಳಿ ಹರಕೆ ತೀರಿಸಿದ ಶಿವರಾಜ್ ಕುಮಾರ್ ಇದೀಗ ತಮಗೆ ಕಾಡುತ್ತಿರುವ ಆರೋಗ್ಯ ಸಮಸ್ಯೆಗೆ ಚಿಕಿತ್ಸೆ ಪಡೆಯಲು ವಿದೇಶಕ್ಕೆ ಹಾರಲು ಸಜ್ಜಾಗಿದ್ದಾರೆ.
ಫ್ಲೋರಿಡಾದಲ್ಲಿರುವ ಮಿಯಾಮಿಯಲ್ಲಿ ಶಿವರಾಜ್ ಕುಮಾರ್ ಮಾರ್ ಅವರಿಗೆ ಶಸ್ತ್ರಚಿಕಿತ್ಸೆ ನಡೆಯಲಿದೆ. ಡಿಸೆಂಬರ್ 18ಕ್ಕೆ ಅವರು ಅಮೆರಿಕಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಡಿಸೆಂಬರ್ 24ರಂದು ಸರ್ಜರಿ ನಡೆಯಲಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
ಶಿವರಾಜ್ ಕುಮಾರ್ ಅವರೇ ಹೇಳಿರುವ ಪ್ರಕಾರ ಶಸ್ತ್ರಚಿಕಿತ್ಸೆ ಬಳಿಕ ಕೆಲ ತಿಂಗಳು ವಿಶ್ರಾಂತಿ ಪಡೆಯಲಿದ್ದಾರಂತೆ. ಅವರು ತಮ್ಮ ವೃತ್ತಿ ಜೀವನ ಆರಂಭಿಸಿದಾಗಿನಿಂದಲೂ ನಿರಂತರವಾಗಿ ಶೂಟಿಂಗ್ನಲ್ಲಿ ತೊಡಗಿಕೊಳ್ಳುತ್ತಾ ಬಂದಿದ್ದಾರೆ. ಅಪ್ಪು ನಿಧನ ಹೊಂದಿದಾಗಲೂ ಸಣ್ಣ ಗ್ಯಾಪ್ ಪಡೆದು ಅವರು ನಟನೆಗೆ ಮರಳಿದರು. ಆದರೆ, ಈ ಬಾರಿ ಆರೋಗ್ಯದ ವಿಚಾರ ಆಗಿರುವುದರಿಂದ ಅವರು ಕೊಂಚ ದೀರ್ಘ ಬ್ರೇಕ್ ಪಡೆಯಲಿದ್ದಾರೆ ಎನ್ನಲಾಗಿದೆ.
ಸದ್ಯ ಇವರು ಅಭಿನಯಿಸಿರುವ ಬೈರತಿ ರಣಗಲ್ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ದೊಡ್ಡ ರೀತಿಯಲ್ಲಿ ಸದ್ದು ಮಾಡುತ್ತಿದೆ