ಬೆಂಗಳೂರು.ನ,12:
ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳಿಗೆ ನಡೆಯುತ್ತಿರುವ ಉಪElection ಫಲಿತಾಂಶ ಹೊರ ಬೀಳುತ್ತಿದ್ದಂತೆ ರಾಜ್ಯ ಸಚಿವ ಸಂಪುಟಕ್ಕೆ ಸರ್ಜರಿ ನಡೆಯಲಿದೆ.
ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಈ ಬಗ್ಗೆ ಸುಳಿವು ನೀಡಿದ್ದಾರೆ.
ಮೈಸೂರಿನ ಎಚ್ ಡಿ ಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು ವಾಲ್ಮೀಕಿ ಸಮುದಾಯಕ್ಕೆ ಸೇರಿದ ಬಿ ನಾಗೇಂದ್ರ ಮತ್ತೆ ಮಂತ್ರಿಯಾಗಲಿದ್ದಾರೆ ಎಂದು ತಿಳಿಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣಕಾಸು ವರ್ಗಾವಣೆ ಅಕ್ರಮ ಆರೋಪದ ಹಿನ್ನೆಲೆಯಲ್ಲಿ ಅವರಿಂದ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಪಡೆಯಲಾಗಿತ್ತು ಈ ವೇಳೆ ಅವರಿಗೆ ಮತ್ತೆ ಸಚಿವ ಸ್ಥಾನ ಕೊಡುವ ಭರವಸೆ ನೀಡಿದ್ದೆ ಅದರಂತೆ ಇದೀಗ ಅವರನ್ನು ಮಂತ್ರಿ ಮಾಡುತ್ತೇನೆ ಎಂದು ಹೇಳಿದರು.
ಪ್ರಕರಣದಲ್ಲಿ ಅವರು ಇದೀಗ ಜಾಮೀನು ಪಡೆದುಕೊಂಡು ಹೊರಗೆ ಬಂದಿದ್ದಾರೆ ಮೂರು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಹೊರಬಂದ ನಂತರ ಮಂತ್ರಿಮಂಡಲ ವಿಸ್ತರಣೆ ಪ್ರಕ್ರಿಯೆ ಮಾಡಲಾಗುವುದು ಆಗ ನಾಗೇಂದ್ರ ಅವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತೇನೆ ತಾವು ಕೊಟ್ಟ ಮಾತಿಗೆ ತಪ್ಪುವುದಿಲ್ಲ ಎಂದು ಹೇಳಿದರು.
ಈ ಹೇಳಿಕೆ ಹೊರ ಬಿದ್ದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ವಿದ್ಯಾಮಾನಗಳು ಚುರುಕುಗೊಂಡಿವೆ. ನಿರೀಕ್ಷಿತ ಪ್ರಮಾಣ ದಲ್ಲಿ ಕೆಲಸ ಮಾಡಿದ ಆರೋಪಕ್ಕೆ ಸಿಲುಕಿರುವ ಮತ್ತು ಇತರೆ ಅರ್ಹರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಸಂಪುಟದಿಂದ ಐವರನ್ನು ಕೈ ಬಿಟ್ಟು ಹೊಸದಾಗಿ ಐವರನ್ನು ಸೇರ್ಪಡೆ ಮಾಡಿಕೊಳ್ಳಲು ಮುಖ್ಯಮಂತ್ರಿ ತೀರ್ಮಾನಿಸಿದ್ದಾರೆ ಎಂದು ಗೊತ್ತಾಗಿದೆ.
ಕೆಲವು ಜಿಲ್ಲೆಗಳಿಗೆ ಮತ್ತು ಸಮುದಾಯಗಳಿಗೆ ಅತಿಯಾದ ಪ್ರಾತಿನಿಧ್ಯ ಸಿಕ್ಕಿದೆ. ಇದನ್ನು ತಪ್ಪಿಸಿ ಎಲ್ಲ ಜಿಲ್ಲೆಗಳಿಗೂ ಸೂಕ್ತ ಪ್ರಾತಿನಿಧ್ಯ ಸಾಮಾಜಿಕ ನ್ಯಾಯ ಮತ್ತು ಪಕ್ಷ ಸಂಘಟನೆಗೆ ವಿಶೇಷವಾಗಿ ಒತ್ತು ನೀಡಿದವರಿಗೆ ಗೌರವ ನೀಡುವ ದೃಷ್ಟಿಯಿಂದ ಮೊದಲ ಹಂತದಲ್ಲಿ ಐವರನ್ನು ಕೈ ಬಿಟ್ಟು ಹೊಸದಾಗಿ ಐವರಿಗೆ ಸಚಿವ ಸ್ಥಾನ ಕಲ್ಪಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ, ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ, ಯೋಜನಾ ಸಚಿವ ಡಿ. ಸುಧಾಕರ್, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರನ್ನು ಸಂಪುಟದಿಂದ ಕೈ ಬಿಟ್ಟು ಅವರ ಬದಲಿಗೆ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಲಕ್ಷ್ಮಣ ಸವದಿ ಸೇರಿದಂತೆ ಇತರರಿಗೆ ಸಂಪುಟದಲ್ಲಿ ಸ್ಥಾನ ಕಲ್ಪಿಸುವ ಸಾಧ್ಯತೆ ಇದೆ ಎಂದು ಗೊತ್ತಾಗಿದೆ.
Previous Articleರಕ್ತ ಕಾರಿ ಸಾಯುತ್ತೇನೆ ಎಂದ ಮುನಿರತ್ನ.
Next Article ಇ- ಖಾತೆ ಬೇಕಾದರೆ ಹೀಗೆ ಮಾಡಿ.