ಬೆಂಗಳೂರು,ಮೇ.11- ಲೈಂಗಿಕ ದೌರ್ಜನ್ಯ,ಅತ್ಯಾಚಾರ ಸೇರಿ ಮೂವರು ಗಂಭೀರ ಅಪರಾಧ ಪ್ರಕರಣ ದಾಖಲಾಗಿರುವ ಬೆನ್ನಲ್ಲೇ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೆ ವಿಶೇಷ ತನಿಖಾ ದಳ(ಎಸ್‌ಐಟಿ) ವಿಶೇಷ ತಂಡವನ್ನು ರಚಿಸಿದೆ.
ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ನನ್ನು ಪತ್ತೆಹಚ್ಚಿ ಅಲ್ಲಿಂದ ಬಂಧಿಸಿ ನಗರಕ್ಕೆ ಕರೆತರಲು ಈಗಾಗಲೇ ಪ್ರಜ್ವಲ್ ಅವರನ್ನು ಕರೆತರಲು ಎಸ್‌ಐಟಿವಿಶೇಷ ತಂಡ ಕಾರ್ಯಾಚರಣೆ ಕೈಗೊಂಡಿದೆ
ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲ್ಯೂ ಕಾರ್ನರ್ ನೋಟಿಸ್ ನೀಡಲಾಗಿತ್ತು. ಶತಾಯಗತಾಯ ಅವರನ್ನು ಬಂಧಿಸಿ ಕರೆತರಲೇಬೇಕು ಎಂದು ತೀರ್ಮಾನಿಸಿ ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಎಸ್ ಐಟಿ ಮೂಲಗಳು ತಿಳಿಸಿವೆ.
ಓರ್ವ ಎಸ್‌ಪಿ, ಮೂವರು ಇನ್ಸ್‌ಪೆಕ್ಟರ್ ಹಾಗೂ ಮೂವರು ಸಬ್ ಇನ್ಸ್‌ಪೆಕ್ಟರ್ ಒಳಗೊಂಡ ಎಸ್‌ಐಟಿಯ ವಿಶೇಷ ತಂಡವು
ಯೂರೋಪ್ ಬಳಿ ಇರುವ ಹಂಗೇರಿ ತಲುಪಿ ಅಲ್ಲಿ ಹುಡುಕಾಟ ನಡೆಸಲಿದ್ದಾರೆ. ಈಗಾಗಲೇ ಭಾರತ ಹಾಗೂ ಜರ್ಮನಿ ಬಳಿ ಮ್ಯೂಚುಯಲ್ ಲೀಗಲ್ ಅಸಿಸ್ಟೆಂಟ್ ಟ್ರೀಟಿ ಬಗ್ಗೆ ಪರಿಶೀಲನೆ ನಡೆಸಿದ ಅಧಿಕಾರಿಗಳು ಸಿಬಿಐ ಸಹಾಯದಿಂದ ಇಂಟರ್ ಪೋಲ್ ಅಧಿಕಾರಿಗಳ ಜತೆ ಸಹ ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ.
ಪ್ರಜ್ವಲ್ ಬಳಿ ರಾಜತಾಂತ್ರಿಕ ಪಾಸ್‌ಪೋರ್ಟ್ ಇರುವುದರಿಂದ ಅವರು ಕೆಲವು ದೇಶಗಳಿಗೆ ವೀಸಾ ಇಲ್ಲದೆ ಪ್ರಯಾಣಿಸಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ಎಸ್ಐಟಿ ವಿಶೇಷ ತನಿಖಾ ದಳ ಮಾಹಿತಿ ಕಲೆ ಹಾಕಿದೆ. ಒಂದು ವೇಳೆ ಇಂಡಿಯನ್ ಎಂಬಸ್ಸಿ ಕಡೆಯಿಂದ ಜರ್ಮನಿ ಎಂಬಸ್ಸಿ ಜತೆಗೆ ಮಾತುಕತೆ ನಡೆದರೆ ಖಂಡಿತವಾಗಲೂ ಪ್ರಜ್ವಲ್ ರೇವಣ್ಣ ಎಸ್ಐಟಿ ಬಲೆಗೆ ಬೀಳುವ ಸಾಧ್ಯತೆ ಇದೆ