ಬೆಂಗಳೂರು,ಜೂ.16:
ರಾಜಕೀಯ ನಿಂತ ನೀರಲ್ಲ. ನದಿ ಹರಿದು ವಿಜಯವಾಡದ ಬಳಿ ಸಮುದ್ರ ಸೇರಬಹುದು ಎಂದು ಲೋಕೋಪಯೋಗಿ ಮಂತ್ರಿ ಸತೀಶ್ ಜಾರಕಿಹೊಳಿ ಹೇಳಿದ್ದು ಹಲವು ರೀತಿಯ ವ್ಯಾಖ್ಯಾನಗಳಿಗೆ ಕಾರಣವಾಗಿದೆ.
ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದಲ್ಲಿ ಏರಿಳಿತಗಳು ಸಾಮಾನ್ಯ. ಹಿಂದೆ ಬಿಜೆಪಿಯಲ್ಲಿ ಮೂರು ಜನ ಮುಖ್ಯಮಂತ್ರಿಗಳಾಗಿದ್ದರು. ನಮಲ್ಲಿ ಅಂತಹ ಪರಿಸ್ಥಿತಿ ಇಲ್ಲ. ಮುಖ್ಯಮಂತ್ರಿ ಸ್ಥಾನ ಗಟ್ಟಿಯಾಗಿದೆ. ಅಧಿಕಾರ ಯಾರಿಗೂ ಶಾಶ್ವತ ಅಲ್ಲ. ಸಚಿವರ ಸ್ಥಾನಗಳಲ್ಲಿ ಬದಲಾವಣೆಯಾಗಬಹುದು ಎಂದರು.
ಬಹಳಷ್ಟು ಮಂದಿ ಹಿರಿಯರು ನಮಗೂ ಅವಕಾಶ ಕೊಡಿ ಎಂದು ಮನವಿ ಮಾಡುತ್ತಿದ್ದಾರೆ. ಹೊಸ ನಾಯಕತ್ವ ಬಳಸಲು ಬಿಜೆಪಿಯಲ್ಲಿ ಮೊದಲ ಬಾರಿ ಗೆದ್ದವರನ್ನೇ ಮುಖ್ಯಮಂತ್ರಿ ಮಾಡಿದ್ದಾರೆ. ವಿಧಾನಪರಿಷತ್‌ನ ಆಯ್ಕೆಯಲ್ಲೂ ಕಾರ್ಯಕರ್ತರಿಗೆ ಅವಕಾಶ ಕೊಟ್ಟಿದ್ದಾರೆ. ಆ ಮಾದರಿ ನಮಲ್ಲೂ ಅನುಷ್ಠಾನಕ್ಕೆ ಬರಬೇಕು ಎಂದು ಹೇಳಿದರು.
ನಮ್ಮ ಪಕ್ಷದ ನಾಯಕರು ಇತ್ತೀಚೆಗೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದರು.
ಅಲ್ಲಿ ಯಾವ ಚರ್ಚೆಯಾಗಿದೆಯೋ ಗೊತ್ತಿಲ್ಲ. ಸಂಪುಟ ಪುನರ್‌ರಚನೆ ಅಥವಾ ವಿಸ್ತರಣೆ ಮಾಡುವುದು ವರಿಷ್ಠರ ನಿರ್ಧಾರ. ನಾವು ಸಂಪುಟದ ಭಾಗವಷ್ಟೆ. ಬೇರೆಯವರನ್ನು ಸೇರಿಸಿಕೊಳ್ಳುವುದು, ಬಿಡುವುದು ನಮ್ಮ ಕೈಲಿಲ್ಲ. ನಮ್ಮ ಸ್ಥಾನಗಳನ್ನು ಉಳಿಸಿಕೊಂಡರೆ ಸಾಕಾಗಿದೆ ಎಂದರು.
Previous Articleಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !
Next Article ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?
1 Comment
For those tracking innovation in service sectors, Read more about this here