Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸರ್ಕಾರದ ವಿರುದ್ಧವೇ ಮಂತ್ರಿ ಅಸಮಾಧಾನ.
    ರಾಜಕೀಯ

    ಸರ್ಕಾರದ ವಿರುದ್ಧವೇ ಮಂತ್ರಿ ಅಸಮಾಧಾನ.

    vartha chakraBy vartha chakraDecember 9, 20241 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ,ಡಿ.9 :
    ರಾಜ್ಯ ಸರ್ಕಾರದಲ್ಲಿ ಪ್ರಭಾವಿ ಮಂತ್ರಿಯಾಗಿರುವ ಲಕ್ಷ್ಮಿ ಹೆಬ್ಬಾಳ್ಕರ್ ಇದೀಗ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧವೇ ಅಸಮಾಧಾನ ಹೊರಹಾಕಿದ್ದಾರೆ.
    ಅದರಲ್ಲೂ ತಮ್ಮ ತವರು ಜಿಲ್ಲೆ ಬೆಳಗಾವಿಯ ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶ ಇವರನ್ನು ಕೆಂಡಮಂಡಲರಾಗುವಂತೆ ಮಾಡಿದೆ
    ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಟ್ರ್ಯಾಕ್ಟರ್ ರ್ಯಾಲಿಗೆ ಬೆಳಗಾವಿ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ ಇದಕ್ಕೆ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ರ್ಯಾಲಿ, ಹೋರಾಟಗಳಿಗೆ ನಿರ್ಬಂಧ ಹೇರಬಾರದು, ಇದು ಪ್ರಜಾಪ್ರಭುತ್ವ. ಆದರೆ ಇದಕ್ಕೆ ವ್ಯತಿರಿಕ್ತವಾಗಿ ಜಿಲ್ಲಾಡಳಿತ ನಡೆದುಕೊಂಡಿದೆ ಎಂದು ಬೇಸರ ಹೊರಹಾಕಿದರು.
    ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿಗೆ ಆಗ್ರಹಿಸಿ ಜಯ ಮೃತ್ಯುಂಜಯ ಸ್ವಾಮೀಜಿಯ ನೇತೃತ್ವದಲ್ಲಿ ಸಮುದಾಯದವರು ಟ್ರ್ಯಾಕ್ಟರ್ ರ್ಯಾಲಿ ಮೂಲಕ ಬೆಳಗಾವಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವ ಘೋಷಣೆ ಮಾಡಿದ್ದಾರೆ. ಇದನ್ನು ನಿಯಂತ್ರಿಸುವ ದೃಷ್ಟಿಯಿಂದ ಜಿಲ್ಲಾಡಳಿತ ಬೆಳಗಾವಿಯಲ್ಲಿ ಟ್ರಾಕ್ಟರ್ ಮತ್ತು ಕ್ರೂಜರ್ ಸಂಚಾರಕ್ಕೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ.
    ಈ ಶ್ರಮವನ್ನು ಪ್ರಶ್ನಿಸಿರುವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪಂಚಮಸಾಲಿ ಮೀಸಲಾತಿಗಾಗಿ ನಾನು ಮುಂಚೂಣಿಯಲ್ಲಿ ನಿಂತು ಹೋರಾಟ ಮಾಡಿದ್ದೇನೆ ಎಂದರು.
    ಈಗ ಕಬ್ಬಿನ ಸೀಸನ್‌ ಆಗಿರುವುದರಿಂದ ಟ್ರ್ಯಾಕ್ಟರ್ ಗಳು ಹೆಚ್ಚು ಓಡಾಡುತ್ತಿರುತ್ತವೆ. ಅಧಿವೇಶನದ ವೇಳೆ ಯಾವುದೇ ಅಪಘಾತ, ದುರ್ಘಟನೆ ಆಗಬಾರದು ಅಂತಾ ಮುಂಜಾಗ್ರತೆ ದೃಷ್ಟಿಯಿಂದ ಈ ಕ್ರಮ ಕೈಗೊಂಡಿರಬಹುದು ಎಂದು ಸಚಿವರು ಹೇಳಿದರು.
    ನಾನು ಈಗಾಗಲೇ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಅವರ ಜೊತೆ ಮಾತನಾಡಿದ್ದೇನೆ. ಹೋರಾಟಕ್ಕೆ ಸಂಬಂಧಪಟ್ಟಂತೆ ನಾನು ಸ್ವಾಮೀಜಿ ಅವರ ಜೊತೆ ಹಾಗೂ ನಮ್ಮ ಸಮಾಜದ ಇತರ ಪಕ್ಷಗಳ ನಾಯಕರ ಜೊತೆಗೂ ನಿರಂತರ ಸಂಪರ್ಕದಲ್ಲಿದ್ದೇನೆ. ಇಂತಹ ಗುರುಗಳು ಸಿಕ್ಕಿದ್ದು ನಮ್ಮ ಪುಣ್ಯ. ನಾಳೆ ನಡೆಯಲಿರುವ ಸಮಾವೇಶದಲ್ಲಿ ನಾನು ಖಂಡಿತವಾಗಿ ಭಾಗಿಯಾಗುತ್ತೇನೆ ಎಂದು ತಿಳಿಸಿದರು.
    ನಾನು ಮಂತ್ರಿ ಆಗಿರುವ ಕಾರಣ ವಿಧಾನಸಭೆ ಕಲಾಪದ ವೇಳೆ ಬಾವಿಗಿಳಿದು ಧರಣಿ ಮಾಡುವುದಕ್ಕೆ ಸಾಧ್ಯವಿಲ್ಲ. ವಿಧಾನಸಭೆಯಲ್ಲಿ ಯಾರಾದರೂ ವಿಷಯ ಪ್ರಸ್ತಾಪಿಸಿದಾಗ ಧ್ವನಿಯಾಗಿ ಇರುವೆ. ನಾನೂ ಹಾಗೂ ನನ್ನ ತಮ್ಮ ಚನ್ನರಾಜ ಹಟ್ಟಿಹೊಳಿ ಧ್ವನಿಯಾಗಿ ಇರುತ್ತೇವೆ ಎಂದು ಹೆಬ್ಬಾಳಕರ್‌ ಹೇಳಿದರು.

    Verbattle
    Verbattle
    Verbattle
    ಅಪಘಾತ ವಿಧಾನಸಭೆ ಕಲಾಪ ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಸುವರ್ಣ ಸೌಧದಲ್ಲಿ ಅನುಭವ ಮಂಟಪ.
    Next Article ಯುವನಿಧಿ ಎಷ್ಟು ಜನರಿಗೆ ಸಿಗುತ್ತದೆ ಗೊತ್ತಾ.
    vartha chakra
    • Website

    Related Posts

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ಬಲೆಗೆ ಬಿದ್ದ ಡ್ರಗ್ ಫೆಡ್ಲರ್ ಗಳು
    • LinwoodGah on ದೇವಿಗೆ ಶಿವಕುಮಾರ್ ಕೇಳಿದ ಐದು ಪ್ರಶ್ನೆ!
    • Glennhof on ಜನ ಕನ್ನಡ ನ್ಯೂಸ್ ಚಾನಲ್ ನೋಡ್ತಾ ಇಲ್ಲ
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.