Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸರ್ಕಾರದ ವಿರುದ್ಧ ಸಬ್ ರಿಜಿಸ್ಟ್ರಾರ್ ಗಳ ಸಮರ
    Viral

    ಸರ್ಕಾರದ ವಿರುದ್ಧ ಸಬ್ ರಿಜಿಸ್ಟ್ರಾರ್ ಗಳ ಸಮರ

    vartha chakraBy vartha chakraFebruary 21, 202530 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

     

    ಬೆಂಗಳೂರು,ಫೆ.21-
    ಸಬ್ ರಿಜಿಸ್ಟ್ರಾರ್ ಗಳ ವರ್ಗಾವಣೆ ವಿಚಾರ ಇದೀಗ ಭಾರಿ ವಿವಾದಕ್ಕೆ ಕಾರಣವಾಗಿದೆ. ರಿಜಿಸ್ಟಾರ್ ಗಳ ವರ್ಗಾವಣೆಯಲ್ಲಿ ಪಾರದರ್ಶಕತೆ ಮತ್ತು ಒಂದೇ ಕಡೆ ತುಂಬಾ ವರ್ಷಗಳಿಂದ ಬೇರುಬಿಟ್ಟ ಅಧಿಕಾರಿಗಳನ್ನು ಎತ್ತಂಗಡಿ ಮಾಡುವ ದೃಷ್ಟಿಯಿಂದ ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡುವ ನೀತಿಯನ್ನು ರಾಜ್ಯ ಸರ್ಕಾರ ರೂಪಿಸಿದೆ.
    ಇದರ ಪರಿಣಾಮ ಹಲವಾರು ವರ್ಷಗಳಿಂದ ಬೆಂಗಳೂರಿನಲ್ಲಿ ಬೀಡು ಬಿಟ್ಟಿರುವ ಸಬ್ ರಿಜಿಸ್ಟ್ರಾರ್ ಗಳು ಅನಿವಾರ್ಯವಾಗಿ ನಗರದಿಂದ ಹೊರ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ ನೂತನ ಕಾನೂನು ಆಧರಿಸಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.
    ಈ ಆದೇಶದ ವಿರುದ್ಧ ಸಮರ ಸಾರಿರುವ ಬೆಂಗಳೂರಿನ ಸಬ್ ರಿಜಿಸ್ಟ್ರಾರ್ ಗಳು ಹೈಕೋರ್ಟ್ ಮೊರೆ ಹೋಗಿದ್ದಾರೆ. ಕೋರ್ಟ್ ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಿದೆ. ಈ ಹಿನ್ನೆಲೆಯಲ್ಲಿ ಎತ್ತಂಗಡಿಯಾಗಿದ್ದ ಅಧಿಕಾರಿಗಳು ಮೂಲ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.ಆದರೆ ಸರ್ಕಾರ ಇದಕ್ಕೆ ಮಣಿದಿಲ್ಲ.
    ಹೀಗಾಗಿ ಹೈಕೋರ್ಟ್ ಆದೇಶ ಇದ್ದರೂ ಕರ್ತವ್ಯ ನಿರ್ವಹಿಸಲು ಚಲನಾದೇಶ ಮತ್ತು ಲಾಗಿನ್ ಐಡಿ ನೀಡುತ್ತಿಲ್ಲ ಎಂದು ಆರೋಪಿಸಿ ಬೆಂಗಳೂರಿನ ಸಬ್‌ ರಿಜಿಸ್ಟ್ರಾರ್‌ಗಳು ಅಹೋರಾತ್ರಿ ಧರಣಿ ಕೈಗೊಂಡಿದ್ದಾರೆ.
    ಕೆ.ಜಿ. ರಸ್ತೆಯ ಕಂದಾಯ ಭವನದಲ್ಲಿ ಇರುವ ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆಯುಕ್ತರ ಕಚೇರಿ ಮುಂಭಾಗ ಬೆಂಗಳೂರು ನಗರದ ಎಲ್ಲ ಹಿರಿಯ, ಕಿರಿಯ ಸಬ್‌ ರಿಜಿಸ್ಟ್ರಾರ್‌ಗಳು ಅಹೋರಾತ್ರಿ ಪ್ರತಿಭಟನೆ ಕೈಗೊಂಡಿದ್ದಾರೆ.
    ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಡಿ.10ರ 90 ಅಧಿಕಾರಿಗಳ ಕೌನ್ಸಲಿಂಗ್ ವರ್ಗಾವಣೆ ಆದೇಶಕ್ಕೆ ಹೈಕೋರ್ಟ್ ವಿಭಾಗೀಯ ಪೀಠವು ಫೆ.18ರಂದು ತಡೆಯಾಜ್ಞೆ ವಿಧಿಸಿತ್ತು.
    ಆದೇಶ ಬಂದು 48 ಗಂಟೆಗಳು ಕಳೆದರು ಚಲನಾದೇಶ ಮತ್ತು ಲಾಗಿನ್ ಐಡಿ ಕೊಡದೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಮತ್ತು ಐಜಿಆರ್ ಕೆ.ಎ. ದಯಾನಂದ್ ದ್ವೇಷ ಸಾಧಿಸುತ್ತಿದ್ದಾರೆ ಎಂದು ಆರೋಪಿಸಿರುವ ನೌಕರರು ನೆಮ್ಮದಿಯಾಗಿ ಕರ್ತವ್ಯ ನಿರ್ವಹಿಸುವಂತಹ ವಾತಾವರಣ ಬೇಕೆಂದು ಒತ್ತಾಯಿಸಿದ್ದಾರೆ.
    1865ರಿಂದ ಉಪನೋಂದಣಾಧಿಕಾರಿ ಕಚೇರಿಗಳು ಕಾರ್ಯನಿರ್ವಹಿಸುತ್ತಿದ್ದು, 160 ವರ್ಷಗಳ ಇತಿಹಾಸವಿದೆ. ರಾಜ್ಯ ಸರ್ಕಾರದ ಬೊಕ್ಕಸ ತುಂಬಿಸುವಲ್ಲಿ ಇಲಾಖೆ 3ನೇ ಸ್ಥಾನದಲ್ಲಿದೆ. ಇಲ್ಲಿಯವರೆಗೂ ಇಲಾಖೆಯಲ್ಲಿ ಯಾವುದೇ ಧರಣಿ, ಪ್ರತಿಭಟನೆಗಳು ನಡೆದಿರಲಿಲ್ಲ. ಇದೀಗ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಕೈಗೊಳ್ಳುತ್ತಿರುವ ಕ್ರಮಗಳು ಸಾಮಾಜಿಕ ನ್ಯಾಯದ ವಿರುದ್ಧ ಮತ್ತು ಏಕಪಕ್ಷಿಯವಾಗಿವೆ‌.ಹೀಗಾಗಿ ಹೋರಾಟಕ್ಕೆ ಇಳಿಯಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಪ್ರತಿಭಟನಕಾರರು ಹೇಳಿದ್ದಾರೆ
    ನೋಂದಣಿ ಮತ್ತು ಮುದ್ರಾಂಕ ಇಲಾಖೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧೀನದಲ್ಲಿದೆ. ವರ್ಗಾವಣೆ ಸಮಯದಲ್ಲಿ ಡಿಪಿಆರ್‌ಎ ಮಾರ್ಗಸೂಚಿ ಪಾಲನೆ ಮಾಡದೆ ಬೇಕಾಬಿಟ್ಟಿಯಾಗಿ ಮಾಡುತ್ತಿರುವ ವರ್ಗಾವಣೆಗೆ ನಮ್ಮ ವಿರೋಧವಿದೆ. ವಯಸ್ಸಾದ ತಂದೆ,ತಾಯಿ ಮತ್ತು ಶಾಲೆಗೆ ಹೋಗುವ ಮಕ್ಕಳು ಮನೆಯಲ್ಲಿ ಇದ್ದಾರೆ. ಇದ್ಯಾವುದು ಗಮನದಲ್ಲಿ ಇರಿಸಿಕೊಳ್ಳದೇ ವರ್ಗಾವಣೆ ಮಾಡಲಾಗುತ್ತಿದೆ ಎಂದು ದೂರಿದ್ದಾರೆ.

    Verbattle
    Verbattle
    Verbattle
    ಕಾನೂನು ನ್ಯಾಯ Bengaluru ಶಾಲೆ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಜಿಮ್ ಗೆ ಹೋಗೋರೇ ಎಚ್ಚರ ಎಚ್ಚರ
    Next Article ಗೃಹಜ್ಯೋತಿ ಯೋಜನೆಯ ಮೇಲೆ ತೂಗುಗತ್ತಿ
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RicardoCor on ಭಾರತಕ್ಕೆ ಇನ್ನೊಬ್ಬ ವೈರಿ ಹುಟ್ಟಿಕೊಂಡನೇ?
    • Daviddek on ಸಾರಿಗೆ ನಿಗಮದ ನೌಕರರಿಗೆ ಅತೀವ ಹರ್ಷ
    • RicardoCor on ರೆಡ್ಡಿ- ಶ್ರೀರಾಮುಲು ಗೆ ಬಾಯಿ ಮುಚ್ಚಿ ಅಂದ್ರು
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.