ಬೆಂಗಳೂರು,ಆ.29:
ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣಕ್ಕೆ ಸಂಬಂಧಿಸಿದಂತೆ ಉತ್ತಮ ಕಲಿಕಾ ವಾತಾವರಣವನ್ನು ಸೃಷ್ಟಿಸಿಶಾಲೆಗಳಲ್ಲಿ ಕಲಿಕೆಯನ್ನು ಕೇಂದ್ರ ಬಿಂದುವನ್ನಾಗಿಸಲು ಸಾಧ್ಯವಾಗಬಹುದಾದ ರೀತಿಯಲ್ಲಿ ಶಿಕ್ಷಣ ವ್ಯವಸ್ಥೆಯನ್ನು ಪುನರ್ ರಚಿಸುವುದು ತುರ್ತು ಅಗತ್ಯವಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಭಿಪ್ರಾಯಪಟ್ಟಿದೆ.
ಸರ್ಕಾರಿ ಶಾಲೆಗಳಲ್ಲಿ ಉತ್ತಮ ಕಲಿಕಾ ವಾತಾವರಣ ದೃಷ್ಟಿಸುವ ದೃಷ್ಟಿಯಿಂದ ರಾಜ್ಯದ ಪ್ರತಿಯೊಬ್ಬ ಶಾಸಕ ತಮ್ಮ ಕ್ಷೇತ್ರ ವ್ಯಾಪ್ತಿಯ ಐದು ಸರಕಾರಿ ಶಾಲೆಗಳನ್ನು ದತ್ತು ತೆಗೆದುಕೊಂಡು ಅಭಿವೃದ್ಧಿಪಡಿಸುವಂತೆ ಮನವಿ ಮಾಡಿದೆ.
ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಪ್ರತಿಪಕ್ಷ ನಾಯಕರು ಸೇರಿದಂತೆ ರಾಜ್ಯದ ಎಲ್ಲಾ ಸಚಿವ ಶಾಸಕರಿಗೆ ಪತ್ರ ಬರೆದಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ಶಾಲೆಗಳ ಸರ್ಕಾರಿ ಶಾಲೆಗಳನ್ನು ದತ್ತು ಪಡೆಯುವಂತೆ ಮನವಿ ಮಾಡಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯ ಕೊರತೆ ಹಿನ್ನೆಲೆಯಲ್ಲಿ ಕಲಿಕಾ ವಾತಾವರಣ ಇಲ್ಲವಾಗಿದೆ ಹೀಗಾಗಿ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಕಳುಹಿಸಲು ಆಸಕ್ತಿ ತೋರುತ್ತಿದ್ದು ಸರ್ಕಾರಿ ಶಾಲೆ ಮುಚ್ಚುವ ಸ್ಥಿತಿ ತಲುಪಿವೆ ಇದನ್ನು ತಪ್ಪಿಸುವ ಜವಾಬ್ದಾರಿ ಎಲ್ಲರ ಮೇಲಿದೆ. ಹೀಗಾಗಿ ಪ್ರತಿ ಶಾಸಕರು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ 5 ಸಹಕಾರಿ ಶಾಲೆಗಳನ್ನ ದತ್ತು ಪಡೆದು ಅಭಿವೃದ್ಧಿ ಪಡಿಸಬೇಕು ಎಂದು ಆಗ್ರಹಿಸಿದ್ದಾರೆ.