ಬೆಂಗಳೂರು,ಏ.16:
ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ ಇದನ್ನು ಸಹಿಸಲಾಗದೆ ಸರ್ಕಾರವನ್ನು ಪತನಗೊಳಿಸಲು ಉನ್ನತ ಮಟ್ಟದಲ್ಲಿ ಸಂಚು ನಡೆದಿದೆ ನೀವು ಎಚ್ಚರದಿಂದ ಇರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿವಿಮಾತು ಹೇಳಿದ್ದಾರೆ.
ಕಲಬುರಗಿಯಲ್ಲಿ ನಡೆದ ವಿಭಾಗ ಮಟ್ಟದ ಉದ್ಯೋಗ ಮೇಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರ ತೆಗೆಯಲು ಯೋಜನೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ನಿಮ್ಮ ಸರ್ಕಾರವನ್ನು ಬೀಳಿಸುತ್ತಾರೆ. ನಿಮ್ಮಲ್ಲಿ ಏನೇ ಮನಸ್ತಾಪ ಇದ್ದರೂ ಒಗ್ಗಟ್ಟಾಗಿರಬೇಕು. ನೀವು ಹುಷಾರಾಗಿರಬೇಕು ಎಂದು ಹೇಳಿದರು.
ಅಧಿಕಾರ ಹಂಚಿಕೆ ಒಪ್ಪಂದ ಸೇರಿದಂತೆ ಹಲವಾರು ವಿಚಾರಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ವೈಮನಸ್ಯ ಉಂಟಾಗಿರುವ ಬೆನ್ನಲ್ಲೇ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿರುವ ಈ ಎಚ್ಚರಿಕೆ ಕುತೂಹಲ ಮೂಡಿಸಿದೆ.
ಇದೇ ವೇಳೆ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಹಾಗೂ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ಮೂಲಕ ಬೆದರಿಸಲು ಕೇಂದ್ರ ಸರ್ಕಾರ ನೋಡುತ್ತಿದೆ. ಇದಕ್ಕೆಲ್ಲಾ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಹೆದರುವುದಿಲ್ಲ ಎಂದು ಹೇಳಿದರು.
Previous Articleಎನ್ ಕೌಂಟರ್ ಸಮರ್ಥಿಸಿದ ಕಮೀಷನರ್
Next Article 50 ಕೋಟಿ ರೂಪಾಯಿ ನಾಯಿ ಅಂದು ತಗಲಾಕೊಂಡ

