ಬೆಂಗಳೂರು: ಜೆಡಿಎಸ್ ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಉರುಳಿಸಲು ಯಾರನ್ನೆಲ್ಲ ಬಳಕೆ ಮಾಡಿಕೊಳ್ಳಲಾಯಿತು? ಬಾಂಬೆಗೆ ಹೋದವರ ಮೋಜು ಮಸ್ತಿಗೆ ಸಕಲ ವ್ಯವಸ್ಥೆ ಮಾಡಿದವರು ಯಾರು? ಎಂಬ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು
ಮೈಸೂರು ಪೊಲೀಸರು ಎಫ್ ಐ ಆರ್ ದಾಖಲು ಮಾಡಿರುವ ಸಾಂಟ್ರೋ ರವಿ ಹಾಗೂ ರಾಜ್ಯ ಸರ್ಕಾರದ ಕೆಲ ಪ್ರಭಾವಿ ಸಚಿವರ ನಡುವೆ ಇರುವ ಸಂಬಂಧ ಏನು ಇದು ಬಹಿರಂಗವಾಗಬೇಕು ಎಂದು ಆಗ್ರಹಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೋದಲ್ಲಿ,ಬಂದಲ್ಲಿ ದಮ್ಮು ತಾಕತ್ತುಗಳ ಬಗ್ಗೆ ಮಾತನಾಡುತ್ತಾರೆ, ಇಲ್ಲಿ ಅವರು ದಮ್ಮು ತಾಕತ್ತು ತೋರಿಸಲಿ ಸಾಂಟ್ರೋ ರವಿ ಮತ್ತು ತಮ್ಮ ಸಂಪುಟದ ಸಚಿವರ ನಡುವೆ ಇರುವ ಸಂಬಂಧದ ಬಗ್ಗೆ ತನಿಖೆಗೆ ಆದೇಶ ನೀಡಲಿ ಎಂದುಸವಾಲು ಹಾಕಿದರು.
ಸಾಂಟ್ರೋ ರವಿ ಎನ್ನುವ ಈ ವ್ಯಕ್ತಿ ಯಾರು? ಈ ಸರಕಾರದಲ್ಲಿ ಯಾರೊಂದಿಗೆ ಈತನ ಸಂಪರ್ಕ ಇದೆ. ಈತನ ಬಗ್ಗೆ ಮಾಹಿತಿಯನ್ನು ರಹಸ್ಯವಾಗಿಡಿ ಎಂದು ಯಾರಿಗೆ ಸೂಚನೆ ಕೊಟ್ಟಿದ್ದೀರಿ? ಎಂದು ಪ್ರಶ್ನಿಸಿದರು
ಈ ವ್ಯಕ್ತಿ ಮೇಲೆ ಎಷ್ಟಿದೆ ಕೇಸ್ ಗಳು ಇವೆ? ಸ್ಯಾಂಟ್ರೋ ರವಿಗೆ ಐದು ಹೆಸರುಗಳಿವೆ. 1995ರಿಂದಲೂ ಈತನ ಮೇಲೆ ಕೆಸುಗಳಿವೆ. ಮೈಸೂರು, ಬೆಂಗಳೂರುನಲ್ಲಿ ಎಷ್ಟೋ ಕೇಸ್ ಇವೆ? ಕಳೆದ ತಿಂಗಳವರೆಗೆ ಕುಮಾರಕೃಪ ಅತಿಥಿ ಗೃಹದಲ್ಲಿ ಇವನಿಗೆ ಕೊಠಡಿ ಕೊಟ್ಟವರು ಯಾರು? ಕೊಠಡಿ ಕೊಡುವಂತೆ ಯಾರು ಶಿಫಾರಸು ಮಾಡಿದ್ದರು? ಇದೆಲ್ಲವನ್ನು ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ರಾಜ್ಯದ ಜನತೆಗೆ ತಿಳಿಸಬೇಕು ಎಂದು ಒತ್ತಾಯಿಸಿದರು.
ಕುಮಾರಕೃಪದಲ್ಲಿ ಕೂತು ಈತ ಭಾರೀ ವ್ಯವಹಾರ ನಡೆಸಿದ್ದಾನೆ. ಇವನ ಹಿಂದೆ ಅಡಗಿ ಕೂತಿರುವ ಅಸಲಿ ವ್ಯಕ್ತಿ ಯಾರು? ಪೊಲೀಸ್ ಅಧಿಕಾರಿಗೆ ಇವನು ಮೊಬೈಲ್ ಕರೆ ಮಾಡಿ, ನಾಳೆ ಬಂದು ನೋಡು ಅಂತ ಹೇಳುತ್ತಾನೆ. ತನ್ನ ಸರ್ ಎಂದು ಕರೆಯುವಂತೆ ಆ ಪೊಲೀಸ್ ಅಧಿಕಾರಿಗೆ ತಾಕೀತು ಮಾಡುತ್ತಾನೆ. ಇದೆಲ್ಲಾ ದಾಖಲೆ ಇದೆ ಎಂದು ಹೇಳಿದರು.
ಅಧಿಕಾರಿಗಳಿಗೆ ಇವನು ಧಮ್ಕಿ ಹಾಕಿದ್ದಾನೆ. ಆ ಅಧಿಕಾರಿಗಳಿಗೆ ಹೇಳ್ತಾನಂತೆ, ಕುಂಬಳಗೋಡಿಗೆ ಯಾರದ್ದೋ ಕೆಲಸ ಆಗೋಯ್ತು ,50 ಲಕ್ಷಕ್ಕೆ. ನೆಲಮಂಗಲ ಎರಡು ತಿಂಗಳಲ್ಲಿ ಖಾಲಿ ಆಗುತ್ತೆ, ವೈಯ್ಟ್ ಮಾಡಿ ಎಂದು ಹೇಳುತ್ತಾನಂತೆ. ನನಗೆ ಇರುವ ಮಾಹಿತಿ ಪ್ರಕಾರ ಕೋಟ್ಯಂತರ ರೂಪಾಯಿ ವ್ಯವಹಾರ ನಡೆದಿದೆ ಎಂದರು
ರಾಜ್ಯವು ಬಿಜೆಪಿ ನಾಯಕರಿಂದ ಉಳಿಯಲು ಸಾಧ್ಯವಿಲ್ಲ. ಈ ಸರಕಾರದ ಮಂತ್ರಿಗಳ ಹಣೆಬರಹ ಇಲ್ಲಿದೆ ನೋಡಿ ಎಂದು ಸಾಂಟ್ರೋ ರವಿ ಜತೆ ಇರುವ ಮಂತ್ರಿಗಳ ಚಿತ್ರಗಳನ್ನು ಪ್ರದರ್ಶಿಸಿದ ಅವರು ಈ
ಸಾಂಟ್ರೋ ರವಿ ಅನೇಕ ಸಚಿವರ ಜತೆ ನಂಟು ಹೊಂದಿದ್ದಾನೆ.ಫೋಟೋ ತೆಗೆಸಿಕೊಂಡಿದ್ದಾನೆ. ಆದರೆ, ಶಿಕ್ಷಣ ಸಚಿವ ನಾಗೇಶ್ ಅವರ ಜತೆ ಅದೇಗೆ ಹೋಗಿ ಫೋಟೋ ತೆಗೆಸಿಕೊಂಡನೋ ಗೊತ್ತಿಲ್ಲ ಎಂದು ಅಚ್ಚರಿ ವ್ಯಕ್ತಪಡಿಸಿದರು.
ಕೇವಲ ನಾಗೇಶ್ ಮಾತ್ರವಲ್ಲ ಸಾಂಟ್ರೋ ರವಿ ಜತೆ ಬಿಜೆಪಿ ಸರಕಾರದ ಯಾವ ಮಂತ್ರಿ ಸಂಪರ್ಕದಲ್ಲಿ ಇಲ್ಲ ಹೇಳಿ ಎಂದು ಅವರು, 17 ಜನ ಮಂತ್ರಿಗಳು ತಮ್ಮ ವಿರುದ್ಧ ಸುದ್ದಿವಾಹಿನಿಗಳಲ್ಲಿ ಕೆಲ ವಿಷಯಗಳನ್ನು ಪ್ರಸಾರ ಮಾಡಬಾರದು ಎಂದು ಕೋರ್ಟ್ ನಿಂದ ತಡೆಯಾಜ್ಞೆ ತಂದರಲ್ಲ ಯಾಕೆ ಎಂದು ಪ್ರಶ್ನಿಸಿದರು.
ಬಿಜೆಪಿ ಎಲ್ಲರಿಗೂ, ಗೌರವ ಕೊಡುವ ಪಕ್ಷ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಾರಲ್ಲ, ಹಾಗಾದರೆ, ನನ್ನ ನೇತೃತ್ವದ ಮೈತ್ರಿ ಸರಕಾರ ತೆಗೆಯಲು ಕೆಲವರನ್ನು
ಇಲ್ಲಿಂದ ಮುಂಬೈಗೆ ಮೋಜು ಮಾಡಲು ಕರೆದುಕೊಂಡು ಹೋದ ಆ ವ್ಯಕ್ತಿ ಯಾರು? ಎಂದು ಪ್ರಶ್ನಿಸಿದರು
ಸಮ್ಮಿಶ್ರ ಸರಕಾರವನ್ನು ತೆಗೆಯಲು ಎಲ್ಲಾ ರೀತಿಯ ವಾಮಮಾರ್ಗಗಳನ್ನು ಅನುಸರಿಸಲಾಯಿತು. ಈಗ ಮಾತನಾಡಲ್ಲ, ಬೀದರ್ ಮತ್ತು ಕಲಬುರ್ಗಿ ಜಿಲ್ಲೆಗಳಲ್ಲಿ ಪಂಚರತ್ನ ರಥಯಾತ್ರೆ ಮುಗಿಸಿಕೊಂಡು ಬಂದ ಮೇಲೆ ವಿವರವಾಗಿ ಮಾತನಾಡುತ್ತೇನೆ ಎಂದು ಹೇಳಿದರು