ಬೆಂಗಳೂರು,ಫೆ.10-
ರಾಜಧಾನಿ ಮಹಾನಗರ ಬೆಂಗಳೂರಿನ ಉತ್ತರ ಭಾಗದಲ್ಲಿನ ರಸ್ತೆಗಳಲ್ಲಿ ಕಿಲೋ ಮೀಟರ್ ನಷ್ಟು ದೂರದವರೆಗೆ ವಾಹನಗಳು ನಿಂತಿವೆ.ಸಮಯಕ್ಕೆ ಸರಿಯಾಗಿ ಕಚೇರಿ ಮತ್ತು ಹೋಗಬೇಕಾದ ಸ್ಥಳಗಳಿಗೆ ತಲುಪಲಾಗದೆ ಹಿಡಿಶಾಪ ಹಾಕುತ್ತಿದ್ದಾರೆ.
ಆಗಸದಲ್ಲಿ ಲೋಹದ ಹಕ್ಕಿಗಳ ಕಲರವ ಕೇಳಿಬರುತ್ತಿದ್ದರೆ ರಸ್ತೆಗಳಲ್ಲಿ ವಾಹನ ಸವಾರರು ಪರದಾಡುತ್ತಿದ್ದಾರೆ
ನಗರದಲ್ಲಿ ಇಂದಿನಿಂದ ಆರಂಭವಾಗಿರುವ 15ನೇ ಆವೃತ್ತಿಯ ವೈಮಾನಿಕ ಪ್ರದರ್ಶನ ಏರೋ ಇಂಡಿಯಾ ಹಿನ್ನೆಲೆಯಲ್ಲಿ ಮೊದಲ ದಿನವೇ ಬೆಂಗಳೂರಿಗರಿಗೆ ಸಂಚಾರ ದಟ್ಟಣೆಯ ಬಿಸಿ ತಟ್ಟಿದೆ.
ಏರ್ ಶೋ ನಡೆಯುವ ಸ್ಥಳದ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ
,ಬೆಳಗ್ಗೆಯಿಂದಲೇ ವಾಹನ ಸವಾರರು ಪರದಾಡುವಂತಾಗಿತ್ತು. ಕಿಲೋಮೀಟರ್‌ಗಟ್ಟಲೇ ವಾಹನಗಳು ನಿಂತ ಹಿನ್ನೆಲೆಯಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಟ್ರಾಫಿಕ್ ಪೊಲೀಸರು ಹರಸಾಹಸ ಪಟ್ಟಿದ್ದಾರೆ.
ಏರ್ ಶೋ ಉದ್ಘಾಟನಾ ಕಾರ್ಯಕ್ರಮದ ಸ್ಟಾಲ್‌ಗಳಿಗೆ ಬರುವ ಗಣ್ಯರಿಗೂ ಟ್ರಾಫಿಕ್ ಬಿಸಿ ತಟ್ಟಿದೆ. ಕಳೆದ ಎರಡು ಗಂಟೆಯಿಂದ ವಾಹನಗಳು ನಿಧಾನಗತಿಯಲ್ಲಿ ಸಂಚರಿಸುತ್ತಿವೆ.
ಸಂಚಾರ ಮಾರ್ಪಾಡು:
ಏರ್ ಶೋ ಹಿನ್ನೆಲೆಯಲ್ಲಿ 5 ದಿನಗಳ ಕಾಲ ಏರ್‌ಪೋರ್ಟ್ ರಸ್ತೆಯ ಸವಾರರಿಗೆ ಟ್ರಾಫಿಕ್ ಬಿಸಿ ತಟ್ಟುವ ಸಾಧ್ಯತೆ ಇದೆ. ವಿದೇಶಿ ಗಣ್ಯರು ಆಗಮಿಸುವ ಕಾರಣ ಎಲಿವೇಟೆಡ್ ರಸ್ತೆಯ ಸಂಚಾರವನ್ನು ಕೆಲ ಕಾಲ ಬಂದ್ ಮಾಡಲಾಗುತ್ತೆ. ಸರ್ವೀಸ್ ರಸ್ತೆಯಲ್ಲೇ ಸಂಚಾರ ಮಾಡಬೇಕಿರುವ ಕಾರಣ ಆ ಭಾಗದ ವಾಹನ ಸವಾರರು 5 ದಿನಗಳ ಕಾಲ ಇದೇ ಪರಿಸ್ಥಿತಿ ಎದುರಿಸಬೇಕಾಗುತ್ತದೆ. ಇನ್ನೂ, ಏರ್ ಪೋರ್ಟ್ ರಸ್ತೆ ಸುತ್ತಮುತ್ತ ಹಲವು ರಸ್ತೆಗಳಲ್ಲಿ ಸಂಚಾರ ಮಾರ್ಪಾಡು ಮಾಡಿ ಸಂಚಾರಿ ಪೊಲೀಸರು ಆದೇಶಿಸಿದ್ದಾರೆ.