ಬೆಂಗಳೂರು,ಜ.31
ಗುಣಪಡಿಸಲಾಗದ ಮಾರಣಾಂತಿಕ ರೋಗಗಳಿಂದ ನರಳುತ್ತಿರುವ ರೋಗಿಯು ಘನತೆಯಿಂದ ಸಾಯುವ ಹಕ್ಕು ನೀಡಿರುವ ಸುಪ್ರೀಂ ಕೋರ್ಟ್ ಆದೇಶವನ್ನು ರಾಜ್ಯದಲ್ಲಿ ಜಾರಿಗೆ ತರಲಾಗುತ್ತಿದೆ.
ಈ ಕುರಿತಾದ ಸುತ್ತೋಲೆಯನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕರ್ನಾಟಕ ಪ್ರಗತಿಪರ ರಾಜ್ಯವಾಗಿದ್ದು ನ್ಯಾಯಾಲಯಗಳ ಆದೇಶಗಳಿಗೆ ಗೌರವ ನೀಡಿ ಅದನ್ನು ಚಾಚು ತಪ್ಪದೇ ಪಾಲಿಸುತ್ತಿದೆ ಎಂದು ತಿಳಿಸಿದ್ದಾರೆ.
ಮರಣಾಂತಿಕ ಖಾಯಿಲೆಗಳಿಂದ ಬಳಲುತ್ತಿರುವ ರೋಗಿಗಳು ಘನತೆಯಿಂದ ಸಾವಿನ ಹಕ್ಕನ್ನು ಚಲಾಯಿಸಲು ಅವಕಾಶ ನೀಡುತ್ತದೆ ಇದಕ್ಕಾಗಿ ಮರಣ ಇಚ್ಛೆಯ ಉಯಿಲು ಅಥವಾ ಲಿವಿಂಗ್ ವಿಲ್ ಅನ್ನು ಸಹ ಹೊರತಂದಿದೆ ಇದರಲ್ಲಿ ರೋಗಿಯು ಭವಿಷ್ಯದಲ್ಲಿ ತಮ್ಮ ವೈದ್ಯಕೀಯ ಚಿಕಿತ್ಸೆಯ ಬಗ್ಗೆ ತಮ್ಮ ಇಚ್ಛೆಯನ್ನು ದಾಖಲಿಸಬಹುದು ಎಂದು ಹೇಳಿದ್ದಾರೆ.
Previous Articleಲಾಂಗ್ ಹಿಡಿದು ಪುಂಡಾಟಿಕೆ ಮಾಡಿದ್ದ ರೌಡಿ ಅರೆಸ್ಟ್.
Next Article ಕುಮಾರಸ್ವಾಮಿ ವಿರುದ್ಧ ತನಿಖೆಗೆ ಎಸ್ ಐ ಟಿ