ಬೆಂಗಳೂರು, ಸೆ.25:
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪದ ಬಗ್ಗೆ ಮೂರು ತಿಂಗಳೊಳಗೆ ತನಿಖೆ ಪೂರ್ಣಗೊಳಿಸುವಂತೆ ಜನಪ್ರತಿನಿಧಿಗಳ ನ್ಯಾಯಾಲಯ ಲೋಕಾಯುಕ್ತ ಪೊಲೀಸ್ ರಿಗೆ ಆದೇಶಿಸಿದೆ.
ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಪತ್ನಿ ಹೆಸರಿನಲ್ಲಿ ಪರ್ಯಾಯ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸ್ನೇಹಮಯಿ ಕೃಷ್ಣ ಹಾಗೂ ಟಿ.ಜೆ.ಅಬ್ರಹಾಂ ಅವರು ದೂರು ಸಲ್ಲಿಸಿದ್ದರು
ಖಾಸಗಿ ಕ್ರಿಮಿನಲ್ ದೂರಿನ ವಿಚಾರಣೆ ಆಲಿಸಿ ಕಾಯ್ದಿರಿಸಿದ್ದ ಆದೇಶವನ್ನು, ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ತೆರೆದ ನ್ಯಾಯಾಲಯದಲ್ಲಿ ಉಕ್ತಲೇಖನದ ಮೂಲಕ ಆದೇಶಿಸಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ರಾಜ್ಯಪಾಲರು ನೀಡಿದ್ದ ಆದೇಶಕ್ಕೆ ಹೈಕೋರ್ಟ್ ನಿನ್ನೆಯಷ್ಟೇ (ಸೆ.23) ಅಸ್ತು ಎಂದಿತ್ತು. ಭ್ರಷ್ಟಾಚಾರ ನಿಗ್ರಹ ಕಾಯ್ದೆ- 1988ರ ಕಲಂ 17 ಎ ಅಡಿಯಲ್ಲಿ ತನಿಖೆಗೆ ಅನುಮತಿ ನೀಡಿದ್ದ ರಾಜ್ಯಪಾಲರ ಆದೇಶವನ್ನು ಪ್ರಶ್ನಿಸಿ ಸಿದ್ದರಾಮಯ್ಯ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿತ್ತು.
ಈ ಹಿನ್ನೆಲೆಯಲ್ಲಿ ಫಿರ್ಯಾದುದಾರ ಮೈಸೂರಿನ ಸ್ನೇಹಮಯಿ ಕೃಷ್ಣ ಬುಧವಾರ ಬೆಳಗ್ಗೆ ತಮ್ಮ ವಕೀಲರಾದ ಲಕ್ಷ್ಮಿ ಅಯ್ಯಂಗಾರ್ ಅವರ ಮುಖಾಂತರ ಹೈಕೋರ್ಟ್ ತೀರ್ಪಿನ ಪ್ರತಿಯನ್ನು ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರಿಗೆ ಸಲ್ಲಿಸಿದರು.
3 Comments
Стальной двутавр — это фасонный металлопрокат с Н-образным сечением поперечного профиля. Он изготавливается горячекатаным способом из углеродистых или низколегированных сталей при температуре 1200°C по стандарту ГОСТ 8239-89 https://dvutavrmsk.ru
Ассортимент арматуры на рынке широк, и выбор подходящего изделия может быть затруднительным. Классификация металлических стержней помогает специалистам разобраться в технических характеристиках, областях применения и преимуществах различных металлопрокатных изделий.
http://sarmatura-12.ru
Арматура диаметром 32 мм, изготовленная из стали марки А500С, является одним из самых востребованных видов металлопроката в строительстве. Она применяется при возведении фундаментов, армировании стен и перемычек. https://armatura32.ru