ಬೆಂಗಳೂರು,ಆ.6:
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರು ಸಲ್ಲಿಸಲು ಅನುಮತಿ ನೀಡುವಂತೆ ಕೋರಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿರುವ ಬೆನ್ನಲ್ಲೇ ಇಂತಹುದೇ ಮತ್ತೊಂದು ಆರೋಪದಲ್ಲಿ ಖಾಸಗಿ ದೂರು ಸಲ್ಲಿಸಲು ಅನುಮತಿ ನೀಡುವಂತೆ ಕೋರಿ ಇನ್ನೊಂದು ಅರ್ಜಿ ಸಲ್ಲಿಕೆಯಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ಮೈಸೂರಿನ ಭೂಮಿಯೊಂದನ್ನು ಡಿ ನೋಟಿಫೈ ಮಾಡಿದ್ದಾರೆ ಎಂದು ಈ ದೂರಿನಲ್ಲಿ ಆರೋಪಿಸಲಾಗಿದೆ.
ಮೈಸೂರು ಮೂಲದ ಸ್ನೇಹಮಯಿ ಕೃಷ್ಣ ಎಂಬುವರು ಸಿಎಂ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರಿಗೆ ಮನವಿ ಸಲ್ಲಿಸಿದ್ದು ಖಾಸಗಿ ದೂರು ಸಲ್ಲಿಸಲು ಅನುಮತಿ ಪಡೆದ
ವಸತಿ ಹೀನರಿಗಾಗಿ ಆಶ್ರಯ ಯೋಜನೆ ಅಡಿಯಲ್ಲಿ ವಸತಿ ಸೌಲಭ್ಯ ಕಲ್ಪಿಸಲು ಮೈಸೂರು ತಾಲೂಕು ವರುಣ ಹೋಬಳಿಯ ಉತ್ತನಹಳ್ಳಿ ಗ್ರಾಮದಲ್ಲಿನ 1.39 ಎಕರೆ ಜಮೀನನ್ನು ಜಿಲ್ಲಾಡಳಿತ 1972ರಲ್ಲಿ ಭೂ ಸ್ವಾಧೀನಪಡಿಸಿಕೊಂಡಿತ್ತು.
ಆ ಬಳಿಕ ಜಮೀನಿನಲ್ಲಿ ನಿವೇಶನಗಳನ್ನು ಅಭಿವೃದ್ಧಿಪಡಿಸಿ ವಸತಿ ಹೀನರನ್ನು ಆಯ್ಕೆ ಮಾಡಿ ಹಕ್ಕುಪತ್ರಗಳನ್ನು ಹಂಚಲಾಗಿತ್ತು. ಆದರೆ, ನಿವೇಶನವಿರುವ ಜಮೀನಿನಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿರಲಿಲ್ಲ. ಹೀಗಾಗಿ ನಿವೇಶನ ಪಡೆದ ಫಲಾನುಭವಿಗಳು ಮನೆ ನಿರ್ಮಾಣ ಮಾಡಿರಲಿಲ್ಲ. ಪರಿಣಾಮವಾಗಿ ಈ ಜಮೀನು ಖಾಲಿ ಬಿದ್ದಿತ್ತು.
ಇದಾದ 30 ವರ್ಷಗಳ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂದಿನ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು, ಈ 1.39 ಎಕರೆ ಜಮೀನನ್ನು ಮಾರಪ್ಪ ಎಂಬ ಹೆಸರಿನ ವ್ಯಕ್ತಿಗೆ ಡಿನೋಟಿಫೈ ಮಾಡುವಂತೆ ಕೋರುತ್ತಾರೆ. ಆದರೆ, ಮಾರಪ್ಪ ಎಂಬ ವ್ಯಕ್ತಿಗೂ ಮತ್ತು ಈ ಜಮೀನಿಗೆ ಯಾವುದೇ ಸಂಬಂಧವಿರುದಿಲ್ಲ. ಮಾರಪ್ಪನ ತಂದೆ ಹೆಸರಿನಲ್ಲಿ ಬೇರೊಂದು ಜಾಗದಲ್ಲಿ ಜಮೀನು ಇದೆ.
ಆದರೆ ಇದು ಯಾವುದನ್ನು ಪರಿಗಣನೆಗೆ ತೆಗೆದುಕೊಳ್ಳದೆ ಸಿದ್ದರಾಮಯ್ಯ ಪತ್ರ ಆಧರಿಸಿ ಜಿಲ್ಲಾಡಳಿತ 14 ತಿಂಗಳ ಬಳಿಕ ನಕಲಿ ದಾಖಲೆಗಳನ್ನು ಸೃಷ್ಟಿಸಿ ಮಾರಪ್ಪ ಎಂಬುವರ ಹೆಸರಿಗೆ 1.39 ಎಕರೆ ಜಮೀನನ್ನು ಡಿನೋಟಿಫೈ ಮಾಡಿದ್ದಾರೆ ಎಂದು ರಾಜ್ಯಪಾಲರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಸಿದ್ದರಾಮಯ್ಯ ಅವರ ಪತ್ರವನ್ನು ಆಧರಿಸಿ ಡಿ ನೋಟಿಫೈ ಮಾಡಿರುವ ಮೂಲ ಜಮೀನಿನ ಮಾಲೀಕರು ಮಾರಪ್ಪ ಅಲ್ಲ, ಆದರೂ ಅವರ ಹೆಸರಿಗೆ ಡಿನೋಟಿಫೈ ಮಾಡಲಾಗಿದೆ. ಈ ವಿಚಾರ ತಿಳಿದ ಫಲಾನುಭವಿಗಳು 2011ರಲ್ಲಿ ಅಂದಿನ ಜಿಲ್ಲದಾಧಿಕಾರಿಗಳಿಗೆ ಪತ್ರ ಬರೆದು, ನಮ್ಮ ಜಮೀನು ನಮಗೆ ನೀಡುವಂತೆ ಮನವಿ ಮಾಡುತ್ತಾರೆ. ಆದರೆ ಜಿಲ್ಲಾಡಳಿತ ಈಗಾಗಲೇ ಈ ಭೂಮಿಯನ್ನು ಡಿ ನೋಟ್ ಫೈವ್ ಮಾಡಲಾಗಿದೆ ಎಂಬ ಉತ್ತರ ನೀಡಿದೆ ಇದರಲ್ಲಿ ಅಕ್ರಮ ನಡೆದಿದೆ ಎಂದು ಹಲವು ಆರೋಪದ ದಾಖಲೆಗಳನ್ನು ಮುಂದಿಟ್ಟು ಸ್ನೇಹಮಯಿ ಕೃಷ್ಣ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
Previous ArticleBankಗೆ ವಂಚಿಸಿದವ 20 ವರ್ಷದ ನಂತರ ಸಿಕ್ಕಿ ಬಿದ್ದ
Next Article ಎಚ್ಚರಿಕೆ ನಡೆ ಇಡುತ್ತಿರುವ ರಾಜ್ಯಪಾಲರು.