ಬೆಳಗಾವಿ,ಡಿ.25- ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾನಾಪುರ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್ ( ಸಿಪಿಐ) ಮಂಜುನಾಥ್ ನಾಯಕ್ ರನ್ನು ಅಮಾನತು ಮಾಡಿ ಐಜಿಪಿ ವಿಕಾಸ್ ಕುಮಾರ್ ವಿಕಾಸ್ ಆದೇಶ ಹೊರಡಿಸಿದ್ದಾರೆ.ಕಳೆದ ಡಿಸೆಂಬರ್ 19ರಂದು ಸಿ.ಟಿ.ರವಿಯವರನ್ನು ಹಿರೇಬಾಗೇವಾಡಿ ಠಾಣೆಯಿಂದ ಖಾನಾಪುರ ಠಾಣೆಗೆ ಕರೆದುಕೊಂಡು ಬರಲಾಗಿತ್ತು. ಠಾಣೆಯ ಸಿಬ್ಬಂದಿಯನ್ನಿಟ್ಟುಕೊಂಡು ಸೂಕ್ತ ಭದ್ರತೆ ನೀಡುವಂತೆ ಸೂಚಿಸಲಾಗಿತ್ತು. ಆಪಾದಿತರನ್ನು (ಸಿಟಿ ರವಿ) ಹೊರತುಪಡಿಸಿ ಯಾರನ್ನೂ ಒಳಬೀಡದಂತೆ ಆದೇಶಿಸಲಾಗಿತ್ತು.
ಆದರೆ, ಸಿಪಿಐ ಮಂಜುನಾಥ್ ನಾಯಕ್ ಸೂಕ್ತ ಬಂದೋಬಸ್ತ್ ಮಾಡಿರಲ್ಲ. ರಾಜಕೀಯ ಮುಖಂಡರು ಖಾನಾಪುರ ಠಾಣೆ ಒಳಗೆ ನುಗ್ಗಿ ಬಂದಿದ್ದರು. ಇದರಿಂದ ಠಾಣೆಯೊಳಗೆ ಗದ್ದಲದ ವಾತಾವರಣ ನಿರ್ಮಾಣವಾಗಿತ್ತು. ರಾಜಕೀಯ ಮುಖಂಡರನ್ನು ತಡೆಯುವಲ್ಲಿ ವಿಫಲರಾಗಿದ್ದರು.ಮೇಲಧಿಕಾರಿಗಳ ಆದೇಶ ಉಲ್ಲಂಘನೆ ಮಾಡಿ, ಕರ್ತವ್ಯ ಲೋಪ, ಬೇಜವಾಬ್ದಾರಿತನ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತಿನಲ್ಲಿಟ್ಟು ಆದೇಶ ಹೊರಡಿಸಲಾಗಿದೆ ಎಂದು ಆದೇಶ ಪತ್ರದಲ್ಲಿ ಐಜಿಪಿಉಲ್ಲೇಖಿಸಿದ್ದಾರೆ.
Previous Articleಡಿಜಿಟಲ್ ಅರೆಸ್ಟ್ ಎನ್ನುವುದೇ ಇಲ್ಲ.
Next Article ಭಟ್ಕಳ ಉಗ್ರರಿಗೆ ಜೈಲು ಶಿಕ್ಷೆ.