ಬೆಳಗಾವಿ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ
ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕುರಿತು ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ನ ಬಿಜೆಪಿ
ಸದಸ್ಯ ಸಿಟಿ ರವಿ ಅವರನ್ನು ಬಂಧಿಸಲಾಗಿದೆ.
ಲಕ್ಷ್ಮೀ ಹೆಬ್ಬಾಳ್ಕರ್ ಅವರು ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಿಕೊಂಡಿರುವ ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರು, ಪರಿಷತ್ ಸಭಾಪತಿ ಹೊರಟ್ಟಿ ಅವರಿಗೆ ಮಾಹಿತಿ ನೀಡಿ ಸುವರ್ಣಸೌಧದಲ್ಲಿದ್ದ ಸಿಟಿ ರವಿ ಅವರನ್ನು ಬಂಧಿಸಿದ್ದಾರೆ.
ಸುವರ್ಣ ಸೌಧದಲ್ಲಿ ಬಲವಂತಾಗಿಯೇ ಪೊಲೀಸರು ಸುವರ್ಣಸೌಧದಿಂದ ಸಿಟಿ ರವಿ ಅವರನ್ನು ಎತ್ತಿಕೊಂಡು ಬಂದು ವಾಹನದಲ್ಲಿ ಕೂರಿಸಿಕೊಂಡರು.
ಇಬ್ಬರು ಎಸ್‌ಪಿ ರ್ಯಾಂಕ್ ಅಧಿಕಾರಿಗಳು, ನಾಲ್ಕು ಎಸ್ಕಾರ್ಟ್, ಎರಡು ಕೆಎಸ್‌ಆರ್‌ಪಿ ತುಕಡಿಯ ಭದ್ರತೆಯೊಂದಿಗೆ ಸಿಟಿ ರವಿ ಕರೆದುಕೊಂಡು ನಂದಗಡ ಠಾಣೆಗೆ ಹೋದರು
ರವಿ ವಿರುದ್ಧ ಎಫ್‌ಐಆರ್ ದಾಖಲಾದ ಹಿರೇಬಾಗೇವಾಡಿ ಪೊಲೀಸ್ ಠಾಣೆ ದೂರುದಾರಾದ ಲಕ್ಷ್ಮೀ ಹೆಬ್ಬಾಳ್ಕರ್ ಕ್ಷೇತ್ರದ ವ್ಯಾಪ್ತಿಯಲ್ಲಿರುವುದರಿಂದ ಅವರ ಬೆಂಬಲಿಗರು ಆಗಮಿಸುವ ಸಾಧ್ಯತೆಗಳಿವೆ. ಹೀಗಾಗಿ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಸಿಟಿ ರವಿ ಅವರನ್ನು ಬಂಧಿಸಿ ನಂದಗಡ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಲಾಗಿದೆ ಎಂದು ಮೂಲಗಳು ತಿಳಿಸಿವೆ