ಉಡುಪಿ, ಮೇ.22- ಬೆಂಗಳೂರಿನಲ್ಲಿ ನಾಪತ್ತೆಯಾಗಿದ್ದ ಪ್ರೇಮಿಗಳು ಕಾರಿನಲ್ಲಿ ಇಂದು ಮುಂಜಾನೆ ಬೆಂಕಿ ಹಚ್ಚಿಕೊಂಡು ಸುಟ್ಟು ಕರಕಲಾಗಿ ಪತ್ತೆಯಾಗಿರುವ ದಾರುಣ ಘಟನೆ ಜಿಲ್ಲೆಯ ಮಂದಾರ್ತಿ ಸಮೀಪದ ಹೆಗ್ಗುಂಜ್ಜೆಯಲ್ಲಿ ನಡೆದಿದೆ.
ಬೆಂಗಳೂರಿನ ಆರ್.ಟಿ.ನಗರದ ಯಶವಂತ ಯಾದವ್ ಹಾಗೂ ಜ್ಯೋತಿ ಮೃತ ದುರ್ದೈವಿಗಳು.
ಯಶವಂತ ಹಾಗೂ ಜ್ಯೋತಿ ಕಳೆದ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದು ಈ ಬಗ್ಗೆ ಎರಡು ಕುಟುಂಬದವರು ಪೊಲೀಸ್ ಠಾಣೆಗೆ ದೂರು ನೀಡಿದ್ದರು.ನಿನ್ನೆ ಮಂಗಳೂರಿಗೆ ಬಂದಿದ್ದ ಪ್ರೇಮಿಗಳು ಹುಸೇನ್ ಎಂಬವರಿಂದ ಕಾರು ಬಾಡಿಗೆ ಪಡೆದಿದ್ದರು.
ಬಳಿಕ ಮುಂಜಾನೆ 3 ಗಂಟೆ ಸುಮಾರಿಗೆ ಮಂದಾರ್ತಿ ಸಮೀಪದ ಹೆಗ್ಗುಂಜ್ಜೆಯಲ್ಲಿ ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳೀಯರು ಕಾರಿನ ಬೆಂಕಿ ಆರಿಸಿದಾಗ ಪ್ರೇಮಿಗಳ ಮೃತದೇಹಗಳು ಪತ್ತೆಯಾಗಿದ್ದು
ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿದ್ದು ನಾಪತ್ತೆ ದೂರು ದಾಖಲಾಗಿದ್ದ ಬೆಂಗಳೂರಿನ ಪೊಲೀಸ್ ಠಾಣೆಗಳಿಗೆ ಮಾಹಿತಿಯನ್ನು ನೀಡಿದ್ದಾರೆ.
Previous Articleಮಾಲ್‌ನಿಂದ ಬಿದ್ದು ವಿದ್ಯಾರ್ಥಿನಿ ಸಾವು, ಯುವಕನ ಸ್ಥಿತಿ ಗಂಭೀರ
Next Article ಫ್ಲೈಓವರ್‌ನಿಂದ ಬಿದ್ದು ಬೈಕ್ ಸವಾರ ಸಾವು