ಬೆಂಗಳೂರು,ಜೂ.23- ಜೆಡಿಎಸ್ ವಿಧಾನಪರಿಷತ್ ಸದಸ್ಯ ಡಾ ಸೂರಜ್ ರೇವಣ್ಣ ವಿರುದ್ಧದ ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣವ ಸಿಐಡಿಗೆ ವರ್ಗಾವಣೆ ಮಾಡಲಾಗಿದೆ.
ಈಗಾಗಲೇ ಬಂಧನವಾಗಿರುವ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಿ ಕಾನೂನು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ(ಎಡಿಜಿಪಿ) ಹಿತೇಂದ್ರ ಅವರು ಆದೇಶ ಹೊರಡಿಸಿದ್ದಾರೆ.
ಸೂರಜ್ ರೇವಣ್ಣ ವಿರುದ್ಧದ ಪ್ರಕರಣವನ್ನು ಸಿಐಡಿಗೆ ವಹಿಸಿರುವ ಸಂಬಂಧ ಎಡಿಜಿಪಿ ಹಿತೇಂದ್ರ ಅವರು ಹಾಸನ ಎಸ್ಪಿ, ಸಿಐಡಿ ಡಿಜಿಪಿಗೆ ಪತ್ರ ಬರೆದಿದ್ದಾರೆ. ಖುದ್ದು ಸಿಐಡಿ ಕಚೇರಿಗೆ ತೆರಳಿ ಕೇಸ್ ಫೈಲ್ ನೀಡುವಂತೆ ಸೂಚನೆ ನೀಡಿದ್ದಾರೆ. ಅಲ್ಲದೇ ತನಿಖೆಗೆ ತಯಾರಿ ಮಾಡಿಕೊಳ್ಳಲು ಸಿಐಡಿ ಅಧಿಕಾರಿಗಳಿಗೆ ಸಹ ಸೂಚಿಸಿದ್ದಾರೆ.
ಅಸಹಜ ಲೈಂಗಿಕ ದೌರ್ಜನ್ಯ ಸಂಬಂಧ ಸೆನ್ ಠಾಣೆ ಪೊಲೀಸರು ಬಂಧಿಸಿರುವ ಸೂರಜ್ ವಿರುದ್ಧ ಸಂತ್ರಸ್ತ ನೀಡಿದ್ದ ದೂರು ಆಧರಿಸಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 377 (ಅಸ್ವಾಭಾವಿಕ ಅಪರಾಧ), 342 (ತಪ್ಪಾದ ಬಂಧನಕ್ಕೆ ಶಿಕ್ಷೆ) ಹಾಗೂ 506 (ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
Previous Articleಎಚ್.ಡಿ.ರೇವಣ್ಣ ಅವರ ಮತ್ತೊಬ್ಬ ಮಗನೂ ಬಂಧನ.
Next Article ಪಾರ್ಟಿ ಪತ್ತೆ ಹಚ್ಚದ ಪೊಲೀಸರು ಸಸ್ಪೆಂಡ್.