Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !
    ಸುದ್ದಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    vartha chakraBy vartha chakraJuly 23, 2025No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜು.23-
    ರಾಜ್ಯ ಸರ್ಕಾರ ಮತ್ತು ರಾಜ್ಯದ ಪ್ರಭಾವಿ ಸಮುದಾಯಗಳ ನಡುವೆ ಸಂಘರ್ಷಕ್ಕೆ ಕಾರಣವಾಗಿದ್ದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಶೈಕ್ಷಣಿಕ ಆರ್ಥಿಕ ಸಮೀಕ್ಷೆ ಮತ್ತೊಮ್ಮೆ ಚಾಲನೆ ಸಿಗಲಿದೆ.
    ಜಾತಿವಾರು ಜನಗಣತಿ ಎಂದೆ ವ್ಯಾಖ್ಯಾನಿಸಲಾಗುತ್ತಿರುವ ಈ ಸಮೀಕ್ಷೆ ಕುರಿತಂತೆ
    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉನ್ನತ ಮಟ್ಟದ ಸಭೆ ನಡೆಸಿದರು.
    ಈ ಹಿಂದೆ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಕಾಂತರಾಜು ನೇತೃತ್ವದಲ್ಲಿ ನಡೆದ ಸಮೀಕ್ಷೆಯ ದತ್ತಾಂಶಗಳನ್ನು ಆಧರಿಸಿ ಜಯಪ್ರಕಾಶ್ ಹೆಗಡೆ ನೇತೃತ್ವದ ಆಯೋಗ ಅಂತಿಮ ವರದಿ ಸಲ್ಲಿಸಿತ್ತು ಇದರಲ್ಲಿ ಲಿಂಗಾಯತ, ಒಕ್ಕಲಿಗ ಸೇರಿದಂತೆ ಕೆಲವು ಸಮುದಾಯಗಳ ಜನಸಂಖ್ಯೆ ವಿವರ ಕುರಿತಾಗಿ ವಿವಾದ ಉಂಟಾಗಿತ್ತು.
    ಈ ಹಿನ್ನಲೆಯಲ್ಲಿ ವರದಿಯನ್ನು ತಿರಸ್ಕರಿಸಿ ಹೊಸದಾಗಿ ಸಮೀಕ್ಷೆ ನಡೆಸಲು ತೀರ್ಮಾನಿಸಲಾಗಿತ್ತು ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತಾದ ಪೂರ್ವಭಾವಿ ಸಭೆ ನಡೆಸಿದರು.
    ಈ ಸಭೆಯಲ್ಲಿ ಸೆಪ್ಟಂಬರ್ 22ರಿಂದ ಅಕ್ಟೋಬರ್ 7ರವರೆಗೆ 15ದಿನಗಳ ಕಾಲ ಸಮೀಕ್ಷೆ ನಡೆಸುವ ನಿರ್ಧಾರ ಕೈಗೊಳ್ಳಲಾಯಿತು.
    ಅಕ್ಟೋಬರ್ ಕೊನೆಯ ಒಳಗಾಗಿ ಸಮೀಕ್ಷೆ ವರದಿಯನ್ನು ಸಲ್ಲಿಸಬೇಕು. ತರಬೇತಿ ಸೇರಿದಂತೆ ಸಮೀಕ್ಷೆಗೆ ಪೂರ್ವಭಾವಿ ಸಿದ್ಧತೆಗಳನ್ನು ಈಗಲೇ ಆರಂಭಿಸಲು ಸೂಚನೆ ನೀಡಿದರು.
    ಹಿಂದುಳಿದ ವರ್ಗಗಳ ಆಯೋಗ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ಕುರಿತಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದೆ. ಇದರಂತೆ ರಾಜ್ಯದ ಎಲ್ಲಾ 7 ಕೋಟಿ ಜನರ ಸಮೀಕ್ಷೆ ನಡೆಸಲಾಗುವುದು. ಜಾತಿ ತಾರತಮ್ಯ ನಿವಾರಣೆ ಮಾಡುವುದು ಗಣತಿಯ ಮುಖ್ಯ ಉದ್ದೇಶ ಎಂದು ತಿಳಿಸಿದರು.
    ರಾಜ್ಯದ ಪ್ರತಿಯೊಬ್ಬರ ಆರ್ಥಿಕ ಪರಿಸ್ಥಿತಿ, ಜಮೀನು ಇದೆಯೇ ಇಲ್ಲವೇ ಸೇರಿದಂತೆ ಸಮಗ್ರ ಸಮೀಕ್ಷೆ ನಡೆಯಬೇಕು. ಈ ಸಮೀಕ್ಷೆ ವರದಿ ಮುಂದಿನ ಬಜೆಟ್ ಸಿದ್ಧಪಡಿಸುವ ಸಂದರ್ಭದಲ್ಲಿ ಆಧಾರವಾಗಲಿದೆ. ಈ ಬಾರಿಯ ಸಮೀಕ್ಷೆ ದೇಶದಲ್ಲೇ ಮಾದರಿ ಸಮೀಕ್ಷೆಯಾಗಬೇಕು ಎಂದರು.
    ಜಾತಿ ಸಮೀಕ್ಷೆ ಅತ್ಯಂತ ಸಮರ್ಪಕವಾಗಿ ನಡೆಯಬೇಕು. ಸಮೀಕ್ಷೆ ಕುರಿತು ಯಾವುದೇ ದೂರುಗಳಿಗೆ ಅಸ್ಪದವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸಮೀಕ್ಷೆಯಿಂದ ಯಾರೂ ಹೊರಗುಳಿಯದಂತೆ ಖಾತ್ರಿಪಡಿಸಬೇಕು ಎಂದರು.
    ಕಾಂತರಾಜು ಆಯೋಗ 54 ಪ್ರಶ್ನೆಗಳನ್ನು ಸಿದ್ದಪಡಿಸಿ manual ಆಗಿ ಈ ಹಿಂದೆ ಸಮೀಕ್ಷೆ ನಡೆಸಿತ್ತು. ಈ ಬಾರಿಯ ಸಮೀಕ್ಷೆಯಲ್ಲಿ ಇನ್ನಷ್ಟು ಅಂಶಗಳನ್ನು ಸೇರಿಸುವ ಕುರಿತು ಪರಿಶೀಲನೆ. ಈ ಬಾರಿ ಮೊಬೈಲ್ ಆಪ್ ಬಳಸಿಕೊಂಡು ಸಮೀಕ್ಷೆ ನಡೆಸಲಾಗುವುದು.
    ತೆಲಂಗಾಣದಲ್ಲಿ ಕೈಗೊಳ್ಳಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿ ಕುರಿತು ಅಧ್ಯಯನ ನಡೆಸಲು ಸೂಚನೆ. ಸಮೀಕ್ಷೆ ಕಾರ್ಯದ ಮೇಲುಸ್ತುವಾರಿಗೆ ಉನ್ನತಮಟ್ಟದ ಸಮಿತಿ ರಚಿಸಲು ತಿರ್ಮಾನಿಸಲಾಯಿತು.
    ಸಮೀಕ್ಷೆ ವೈಜ್ಞಾನಿಕವಾಗಿ ಮತ್ತು ಪಾರದರ್ಶಕವಾಗಿ ನಡೆಯಬೇಕು. ಸಮೀಕ್ಷೆಯಲ್ಲಿ ಕೇಳಬೇಕಾದ ಪ್ರಶ್ನೆಗಳನ್ನು ಅಂತಿಮಗೊಳಿಸಲು ತಜ್ಞರ ಸಮಿತಿಯ ನೆರವು ಪಡೆಯಬೇಕು ಎಂದು ಸೂಚಿಸಿದರು.
    ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸಮೀಕ್ಷೆ ಕಾರ್ಯವನ್ನು ಯಶಸ್ವಿಗೊಳಿಸಲು ಯೋಜನೆ ರೂಪಿಸಿ ಕಾರ್ಯನಿರ್ವಹಿಸಬೇಕು. ಸಚಿವರಾದ ಶಿವರಾಜ ತಂಗಡಗಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂಧನ ಆರ್ ನಾಯ್ಕ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಪೊನ್ನಣ್ಣ, ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

    m ಕಾನೂನು ತೆಲಂಗಾಣ Bengaluru ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous ArticleKGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!
    vartha chakra
    • Website

    Related Posts

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    July 22, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • luchshiye_fotografy_jfOl on ರೈಲುಗಳ ಮೇಲೂ ಚುನಾವಣಾ ಆಯೋಗದ ಹದ್ದಿನ ಕಣ್ಣು | Election Commission
    • luchshiye_fotografy_qvOl on ಶಹಬಾಸ್ ಬೆಂಗಳೂರು ಪೊಲೀಸ್ | Bengaluru Police
    • luchshiye_fotografy_wlOl on ಈ ಬಾರಿ ಐಪಿಎಲ್ ಯಾವಾಗ ಗೊತ್ತಾ
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe