ಬೆಂಗಳೂರು, ಜೂ.9:
ಲೋಕಸಭೆ ಚುನಾವಣೆಯಲ್ಲಿ ನಿರೀಕ್ಷಿತ ಫಲಿತಾಂಶ ತಂದುಕೊಡಲು ವಿಫಲವಾಗಿರುವ ಕಾಂಗ್ರೆಸ್ ನಾಯಕರಿಗೆ ಶಿಕ್ಷೆ ವಿಧಿಸಲು ಹೈಕಮಾಂಡ್ ಸಜ್ಜು ಗೊಂಡಿದೆ.
ಕಾಂಗ್ರೆಸ್ ಆಡಳಿತದಲ್ಲಿರುವ ಕರ್ನಾಟಕದಿಂದ ಈ ಬಾರಿ 14ರಿಂದ 16 ಸಂಸದರನ್ನು ಆಯ್ಕೆ ಮಾಡಿ ಕಳುಹಿಸುವಂತೆ ಹೈಕಮಾಂಡ್ ರಾಜ್ಯ ನಾಯಕರಿಗೆ ಗುರಿ ನೀಡಿತ್ತು. ಇದಕ್ಕಾಗಿ ಅಭ್ಯರ್ಥಿಗಳ ಆಯ್ಕೆ ಚುನಾವಣೆ ಕಾರ್ಯಕ್ರಮ ಕಾರ್ಯತಂತ್ರ ಸೇರಿದಂತೆ ಎಲ್ಲದರ ಬಗ್ಗೆ ತೀರ್ಮಾನ ಕೈಗೊಳ್ಳಲು ರಾಜ್ಯ ನಾಯಕರಿಗೆ ಸಂಪೂರ್ಣ ಅಧಿಕಾರ ನೀಡಲಾಗಿತ್ತು.
ಆದರೆ ಚುನಾವಣೆ ಫಲಿತಾಂಶ ಇದಕ್ಕೆ ವ್ಯತಿರಿಕ್ತವಾಗಿ ಬಂದಿರುವುದನ್ನು ಹೈಕಮಾಂಡ್ ಇದೀಗ ಗಂಭೀರವಾಗಿ ಪರಿಗಣಿಸಿದೆ.
ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಬಗ್ಗೆ ಸುಧೀರ್ಘ ಚರ್ಚೆ ನಡೆದಿದ್ದು ಕರ್ನಾಟಕದ ವಿದ್ಯಮಾನಗಳ ಕುರಿತಾಗಿಯೇ ರಾಜ್ಯದ ನಾಯಕರ ಜೊತೆ ಪ್ರತ್ಯೇಕವಾಗಿ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಕಾಂಗ್ರೆಸ್ಸಿನ ಉನ್ನತ ಮೂಲಗಳು ತಿಳಿಸಿವೆ.
ಹೈಕಮಾಂಡ್ ನಿರ್ಧಾರದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಬೀಡು ಬಿಟ್ಟಿರುವ ಉಪಮುಖ್ಯಮಂತ್ರಿ ಹಾಗೂ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಕಳಪೆ ಸಾಧನೆ ಹಿನ್ನೆಲೆಯಲ್ಲಿ ಹೈಕಮಾಂಡ್ ಕೆಲವು ಮಂತ್ರಿಗಳನ್ನು ಸಂಪುಟದಿಂದ ಕೈ ಬಿಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೂಚಿಸುವ ಸಾಧ್ಯತೆ ಇದೆ ಎಂದು
Previous Articleಪೋರ್ಷೆ ಅಪ್ರಾಪ್ತ ಆರೋಪಿ ತಂದೆಯ ರೆಸಾರ್ಟ್ ನೆಲಸಮ.
Next Article ಕ್ಷುಲ್ಲಕ ಕಾರಣಕ್ಕೆ ಕಾರು ಹರಿಸಿ ಕೊಲೆ.


1 Comment
Курс терапии в клинике состоит из нескольких последовательных этапов, каждый из которых направлен на достижение конкретных целей — от снятия интоксикации до восстановления психологического равновесия. Такой подход позволяет добиться устойчивого результата и минимизировать вероятность рецидива. На всех стадиях лечения ведётся контроль состояния пациента, а также постоянная корректировка назначений в зависимости от реакции организма.
Подробнее тут – частная наркологическая клиника в казани