ಬೆಂಗಳೂರು,ನ. 21-ನಗರದಲ್ಲಿ ಬಿಎಂಟಿಸಿ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣಗಳು ಮತ್ತೆ ಮುಂದುವರಿದಿದ್ದು, ಸ್ಕೂಟರ್ಗೆ ಜಾಗ ಕೊಡಲಿಲ್ಲ ಎಂಬ ಕಾರಣಕ್ಕೆ, ನೃಪತುಂಗ ರಸ್ತೆಯ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಬಿಎಂಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಲಾಗಿದೆ.
ಮೆಜೆಸ್ಟಿಕ್ನಿಂದ ಸಿಕೆ ಪಾಳ್ಯ ಕಡೆ ಹೊರಟಿದ್ದ ಬಿಎಂಟಿಸಿ ಬಸ್, ಬಸ್ ನಂಬರ್ ಕೆಎ-57 ಎಫ್-0835 (ಡಿಪೋ-34 ಜಂಬೂಸವಾರಿ ದಿಣ್ಣೆಗೆ ಸೇರಿದ ಬಿಎಂಟಿಸಿ ಬಸ್) ಚಾಲಕ ಕುಶಾಲ್ ಕುಮಾರ್ ಮೇಲೆ ಹಲ್ಲೆ ನಡೆದಿದೆ.
ಕೆಆರ್ ಸರ್ಕಲ್ನಿಂದ ನೃಪತುಂಗ ರಸ್ತೆಯಲ್ಲಿ ಬರುತ್ತಿದ್ದ ಸವಾರ, ಸ್ಕೂಟರ್ಗೆ ಸೈಡ್ ಬಿಡಲಿಲ್ಲ ಎನ್ನುವ ಕಾರಣಕ್ಕೆ ಏಕಾಏಕಿ, ಚಾಲಕನ ಸೀಟ್ ಬಳಿಯ ಡೋರ್ನಿಂದ ಬಸ್ ಹತ್ತಿ ಹಲ್ಲೆ ನಡೆಸಿದ್ದಾನೆ. ಚಾಲಕ ಕುಶಾಲ್ ಕುಮಾರ್ ಕೊರಳಪಟ್ಟಿಗೆ ಕೈಹಾಕಿ ಎಳೆದಿದ್ದಾನೆ. ಇದನ್ನು ಪ್ರಶ್ನಿಸಿದ ನಿರ್ವಾಹಕ ಕೃಷ್ಣ ಮೇಲೂ ಹಲ್ಲೆಗೆ ಯತ್ನಿಸಲಾಗಿದೆ. ಸದ್ಯ ಘಟನೆ ಸಂಬಂಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
Previous Articleನಿರ್ಮಲಾ ಸೀತಾರಾಮನ್ ಗೆ ಸಿಎಂ ಮೊರೆ..
Next Article ಲೋಕಾಯುಕ್ತ ಬಲೆಯಲ್ಲೀ ಕಾವೇರಿ ನೀರಾವರಿ ನಿಗಮ ಎಂ.ಡಿ.