ಬೆಂಗಳೂರು, ಜೂ.22:
ಲೋಕಸಭೆ Electionಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಕೂಟ ಜನ ಬೆಂಬಲಗಳಿಸಿದೆ ಈ ಹಿನ್ನೆಲೆಯಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ನಮ ಮೈತ್ರಿ ಮುಂದುವರೆಯಲಿದೆ. ಇಲ್ಲೂ ಕೂಡ ನಾವು ಗೆದ್ದು ತೋರಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಬಿಜೆಪಿ ಮತ್ತು ಜೆಡಿಎಸ್ ನ ನೂತನ ಸಂಸದರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಐದು ಗ್ಯಾರಂಟಿಗಳಿಂದ ರಾಜ್ಯದ ಜನತೆ ಸಂತೃಪ್ತಿಯಾಗಿದ್ದಾರೆಂದು ಕಾಂಗ್ರೆಸ್ ನಾಯಕರು ಬೊಗಳೆ ಬಿಡುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ನಿಮ್ಮ ಹಣೆಬರಹ ಏನೆಂಬುದು ಸಾಬೀತಾಗಿದೆ ಎಂದು ವಾಗ್ದಾಳಿ ನಡೆಸಿದರು.
ಬಿಜೆಪಿ-ಜೆಡಿಎಸ್ ಮೈತ್ರಿ ಕಾಂಗ್ರೆಸ್‌ಗೆ ನಡುಕ ಹುಟ್ಟಿಸಿದೆ. ಅದು ಅಧಿಕಾರಕ್ಕೆ ಬಂದ ಒಂದು ವರ್ಷದಲ್ಲೇ ಕಸದ ಬುಟ್ಟಿ ಸೇರಿದೆ. ಲೋಕಸಭೆಯಲ್ಲಿ ಜನ ಕಾಂಗ್ರೆಸ್ ಅನ್ನು ಕಸದ ಬುಟ್ಟಿಗೆ ಎಸೆದಿದ್ದಾರೆ ಎಂದು ಹೇಳಿದರು
ಕಾಂಗ್ರೆಸ್ ರಾಜ್ಯದಲ್ಲಿ ಬೆಲೆ ಏರಿಕೆ ಯುಗವನ್ನೇ ಪ್ರಾರಂಭ ಮಾಡಿದ್ದಾರೆ. ಕರ್ನಾಟಕದ ಕಾಂಗ್ರೆಸ್ ನಾಯಕರ ಮುಖ ನೋಡಿ ಕೇಂದ್ರದಲ್ಲಿ ದುಡ್ಡು ಕೊಡುವ ಪರಿಸ್ಥಿತಿ ಇಲ್ಲ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮುಖ ನೋಡಿದರೆ ಯಾರೂ ದುಡ್ಡು ಕೊಡುವುದಿಲ್ಲ ಎಂದರು.
ಕಾಂಗ್ರೆಸ್ ಪಕ್ಷದ ನಾಯಕರಿಗೆ ದಮ್ಮು ಮತ್ತು ತಾಕತ್ತಿದ್ದರೆ ತಕ್ಷಣವೇ ಜಿಲ್ಲಾ, ತಾಲ್ಲೂಕು ಪಂಚಾಯತ್ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ದಿನಾಂಕವನ್ನು ತಕ್ಷಣವೇ ಘೋಷಣೆ ಮಾಡಲಿ ಸವಾಲು ಹಾಕಿದರು.
ರಾಜ್ಯದಲ್ಲಿ ಈಗ ಗ್ಯಾರಂಟಿಗಳು ಇಲ್ಲ. ಈಗ ಇರುವುದೆಲ್ಲಾ ಬೋಗಸ್ ಗ್ಯಾರಂಟಿ. ಬೆಲೆ ಏರಿಕೆಯಿಂದಲೇ ಎಲ್ಲಾ ಗ್ಯಾರಂಟಿಗಳನ್ನು ನಡೆಸುತ್ತೇವೆ ಎನ್ನುತ್ತಿರುವ ಕಾಂಗ್ರೆಸ್‌ನವರನ್ನು ನಾವು ಮನೆಗೆ ಕಳುಹಿಸಿಕೊಡಬೇಕೆಂದು ಕರೆ ಕೊಟ್ಟರು.
Previous Articleದರ್ಶನ್ ನಂಬಿದವರ ಪಾಡು ಅಯ್ಯೋ ಪಾಪ.
Next Article ಸಾಕ್ಷಿ ನಾಶಕ್ಕೆ ಯತ್ನಿಸಿದ ದರ್ಶನ್ ಗ್ಯಾಂಗ್.