Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಣ ಲಪಟಾಯಿಸಲು ನಕಲಿ ವ್ಯಕ್ತಿ ಸೃಷ್ಟಿ
    Trending

    ಹಣ ಲಪಟಾಯಿಸಲು ನಕಲಿ ವ್ಯಕ್ತಿ ಸೃಷ್ಟಿ

    vartha chakraBy vartha chakraAugust 8, 20241 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.8-
    ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಕೋಟ್ಯಂತರ ರೂಪಾಯಿ ಅಕ್ರಮ ವರ್ಗಾವಣೆ ಪ್ರಕರಣದ ಬಂಧಿತ ಪ್ರಮುಖ ಆರೋಪಿ
    ಸತ್ಯನಾರಾಯಣ ವರ್ಮಾ, ಹಣ ವರ್ಗಾವಣೆಗೆ ಹಿಡಿದ ಮಾರ್ಗ ಅತ್ಯಂತ ರೋಚಕವಾಗಿದೆ.
    ಹೈದರಾಬಾದ್ ನ ಫಸ್ಟ್ ಕ್ರೆಡಿಟ್ ಕೋ ಅಪರೇಟಿವ್ ಬ್ಯಾಂಕ್ ನಲ್ಲಿ ವ್ಯವಸ್ಥಾಪಕ ನಿರ್ದೇಶಕರಾಗಿ ಕೆಲಸ ಮಾಡುತ್ತಿರುವ ಸತ್ಯನಾರಾಯಣ ವರ್ಮಾ, ನಿಗಮದಲ್ಲಿದ್ದ ಕೋಟ್ಯಂತರ ರೂ ಕಬಳಿಸಲು ನಕಲಿ ಅಧಿಕಾರಿಯನ್ನು ಸೃಷ್ಟಿಸಿ, ಆತನೊಂದಿಗೆ ಹೇಗೆ ವ್ಯವಹರಿಸಬೇಕು ಎಂದು ತರಬೇತಿ ನೀಡಿದ್ದಾರೆ.
    ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಗಳು ಹಾಗೂ ಬ್ಯಾಂಕ್ ಅಧಿಕಾರಿಗಳೊಂದಿಗೆ ಸತ್ಯನಾರಾಯಣರ ನಿರಂತರ ಸಂಪರ್ಕದಲ್ಲಿದ್ದು ನಕಲಿ ವ್ಯಕ್ತಿಯೊಂದಿಗಿನ ವ್ಯವಹಾರದ ಉಸ್ತುವಾರಿ ವಹಿಸಿದ್ದರು ಎಂಬ ಮಾಹಿತಿ ಎಸ್ ಐಟಿ ತನಿಖೆಯಲ್ಲಿ ಪತ್ತೆಯಾಗಿದೆ.
    ಬೆಂಗಳೂರಿನ ವಸಂತನಗರದ ಯೂನಿಯನ್ ಬ್ಯಾಂಕ್ನಿಂದ ಎಂ.ಜಿ.ರೋಡ್‌ನಲ್ಲಿರುವ ಯೂನಿಯನ್ ಬ್ಯಾಂಕ್ ಶಾಖೆಗೆ ನಿಗಮದ ಖಾತೆ ವರ್ಗಾವಣೆಯಾದ ಬಳಿಕ ಖಾತೆಯಲ್ಲಿದ್ದ 93 ಕೋಟಿ ಹಣ ಕಬಳಿಸಲು ವ್ಯವಸ್ಥಿತ ಸಂಚು ರೂಪಿಸಿದ್ದ ವರ್ಮಾ, ಶಿವಕುಮಾರ್ ಹೆಸರಿನಲ್ಲಿ ಆರೋಪಿ ನಕಲಿ ಆಧಾರ್ ಕಾರ್ಡ್ ಹಾಗೂ ನಿಗಮದ ಗುರುತಿನ ಚೀಟಿ ಮಾಡಿಸಿದ್ದ.
    ಶಿವಕುಮಾರ್ ಹೆಸರಿನಲ್ಲಿ ಆರೋಪಿ ಸಾಯಿತೇಜ ಬ್ಯಾಂಕ್ ಖಾತೆ ತೆರೆಸಿ ಬಳಿಕ ಆರೋಪಿಗಳಾದ ಜಗದೀಶ್ ಹಾಗೂ ಚಂದ್ರಮೋಹನ್ ಎಂಬುವರು ಸಾಯಿತೇಜ ಜೊತೆ ನಿಗಮದ ಅಧಿಕಾರಿಗಳಾಗಿ ತೆರಳಿ ವರ್ಗಾವಣೆ ಸಂಬಂಧಿಸಿದ ಅರ್ಜಿ ಪಡೆದು ಪ್ರಕ್ರಿಯೆಗಳನ್ನು ಪೂರೈಸಿದ್ದರು.
    ಇದಕ್ಕೂ ಮುನ್ನ ನಿಗಮದ ಅಧಿಕಾರಿಯಾಗಿ ಹೇಗೆ ಮಾತನಾಡಬೇಕು, ಹೇಗೆ ವರ್ತಿಸಬೇಕು ಎಂಬುದು ಸೇರಿದಂತೆ ಹಲವು ವಿಚಾರಗಳ ಬಗ್ಗೆ ವರ್ಮಾ ಸೂಕ್ತ ತರಬೇತಿ ನೀಡಿದ್ದ ಎಂಬುದರ ಬಗ್ಗೆ ಚಾರ್ಜ್‌ಶೀಟ್ನಲ್ಲಿ ಉಲ್ಲೇಖಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
    ಕಳೆದ ವರ್ಷ ಅಕ್ಟೋಬರ್ನಲ್ಲಿ ಬೆಂಗಳೂರಿಗೆ ಬಂದಿದ್ದ ಸತ್ಯನಾರಾಯಣ ವರ್ಮಾ ಮೊದಲು ತನ್ನ ಸ್ನೇಹಿತ ಕಾಕಿ ಶ್ರೀನಿವಾಸನ ಜೊತೆಗೆ ಮಾತುಕತೆ ನಡೆಸಿದ್ದ. ಇದಾದ ನಂತರ ನಾಗೇಶ್ವರ ರಾವ್ ಮೂಲಕ ಸಂಬಂಧಿ ನೆಕ್ಕಂ ಟಿ ನಾಗರಾಜನನ್ನು ಸಂಪರ್ಕಿಸಿದ್ದ. ಈ ಮೂಲಕ ನಿಗಮದ ಎಂ.ಡಿ ಪದ್ಮರಾಜ ಅವರನ್ನು ಭೇಟಿ ಮಾಡಿ ನಿಗಮದ ಬ್ಯಾಂಕ್ ಖಾತೆಯಲ್ಲಿದ್ದ ಹಣದ ಬಗ್ಗೆ ಚರ್ಚಿಸಿದ್ದರು.
    ಪ್ರಕರಣದ ಏಳನೇ ಆರೋಪಿ ಚಂದ್ರಮೋಹನ್ ಮೂಲಕ ಎಂಜಿ ರಸ್ತೆ ಶಾಖೆಯ ಯೂನಿಯನ್ ಬ್ಯಾಂಕ್ನ ಖಾತೆಯಲ್ಲಿರುವ ಹಣ ಮಾಹಿತಿ ಪಡೆದು ನಂತರ ವಸಂತ ನಗರ ಶಾಖೆಯಲ್ಲಿ ಅಕೌಂಟ್ ತೆರೆದು 89.62.99.500 ಹಣವನ್ನು ವರ್ಗಾಯಿಸಿಕೊಂಡಿದ್ದರು ಎಂಬುದರ ಬಗ್ಗೆ ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಿರುವುದಾಗಿ ಮೂಲಗಳು ತಿಳಿಸಿವೆ

    Verbattle
    Verbattle
    Verbattle
    Bangalore Karnataka News Varthachakra ಅಪರಾಧ ಸುದ್ದಿ ಕಳ್ಳತನ ವಾಲ್ಮೀಕಿ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಮಹಾರಾಷ್ಟ್ರದಲ್ಲಿತ್ತು ಡ್ರಗ್ಸ್ Factory.
    Next Article ಬೆಂಗಳೂರಿನಲ್ಲಿ ಹುಡುಗಿಯರೇ ಹೆಚ್ಚು ನಾಪತ್ತೆ.
    vartha chakra
    • Website

    Related Posts

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    January 31, 2026

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    January 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    January 31, 2026

    1 Comment

    1. RandomNameCal on January 8, 2026 9:12 am

      direct action – Practical, concise tone showing that clear direction simplifies execution.

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Donniezew on ಮನೆ, ಮನೆಗೆ ಪೊಲೀಸ್.
    • Donniezew on ಬಾಲಿವುಡ್ ನಲ್ಲಿ ಕಾಸ್ಟಿಂಗ್ ಕೌಚ್.
    • 1 win бонус при регистрации on ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    Latest Kannada News

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    January 31, 2026

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    January 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    January 31, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.