ಶಿಮ್ಲಾ(ಹಿಮಾಚಲ ಪ್ರದೇಶ): ಪ್ರತಿಕೂಲ ಹವಾಮಾನ ಹಾಗು ಕೋವಿಡ್ ಎಫೆಕ್ಟ್‌ನಿಂದಾಗಿ ಹಿಮಾಚಲ ಪ್ರದೇಶದಲ್ಲಿ ಪ್ರವಾಸೋದ್ಯಮಕ್ಕೆ ತೀವ್ರ ಹಿನ್ನಡೆಯಾಗಿದೆ ಎಂಬ ಮಾತು ವ್ಯಾಪಕವಾಗಿದೆ.
ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಯಲ್ಲಿ ಭಾರೀ ಇಳಿಕೆಯಾಗಿದೆ. ಹೀಗಾಗಿ ಪ್ರವಾಸಿಗರನ್ನೇ ನೆಚ್ಚಿಕೊಂಡಿರುವ ಜನ ಕಂಗಾಲಾಗಿದ್ದಾರೆ.
ಆರ್ಥಿಕವಾಗಿ ಸದೃಢರಾಗಿರುವ ಹೆಚ್ಚಿನ ಜನ ಪ್ರವಾಸಕ್ಕೆ ಕಾಶ್ಮೀರಕ್ಕೆ ತೆರಳುತ್ತಿದ್ದಾರೆ. ಸಾಮಾನ್ಯ ಜನರು ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದೆ.
ಹಿಮಾಚಲ ಪ್ರದೇಶಕ್ಕೆ ಮಾರ್ಚ್‌ನಿಂದ ಜೂನ್‌ವರೆಗೆ ಹೆಚ್ಚು ಜನರು ಪ್ರವಾಸಕ್ಕೆ ಬರುತ್ತಿದ್ದರು. ಆದರೆ ಈಗ ಪ್ರವಾಸಿಗರ ಭೇಟಿ ಗಣನೀಯವಾಗಿ ಕಡಿಮೆಯಾಗಿದ್ದು, ವ್ಯಾಪಾರಸ್ಥರು ಕೂಡ ನಷ್ಟ ಅನುಭವಿಸುವಂತಾಗಿದೆ.
ಹಿಮಾಚಲ ಪ್ರದೇಶ ಪ್ರವಾಸೋದ್ಯಮಕ್ಕೆ ಭಾರೀ ಹಿನ್ನಡೆ
Previous Articleಎಲ್ಲಾ ಬಿಟ್ಟ ಮಗ ಭಂಗಿ ನೆಟ್ಟ..
Next Article ಫೇಸ್ಬುಕ್ ನಲ್ಲಿ ಯುವತಿ ಎಂದು ನಂಬಿಸಿ ಮಹಿಳೆಯಿಂದ ವಂಚನೆ