Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೃದಯಾಘಾತಕ್ಕೆ ಕಾರಣ ಪತ್ತೆ ಹಚ್ಚಿದ ತಜ್ಞರು
    Viral

    ಹೃದಯಾಘಾತಕ್ಕೆ ಕಾರಣ ಪತ್ತೆ ಹಚ್ಚಿದ ತಜ್ಞರು

    vartha chakraBy vartha chakraJuly 7, 2025No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜು.7:
    ಕೋವಿಡ್ ಲಸಿಕೆ ಹಾಕಿಸಿಕೊಂಡವರಿಗೆ ಅಡ್ಡ ಪರಿಣಾಮಗಳಿಂದಾಗಿ ಹೃದಯಘಾತ ಪ್ರಕರಣಗಳು ಹೆಚ್ಚುತ್ತಿದೆ ಎಂಬ ವರದಿಗಳನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಳ್ಳಿ ಹಾಕಿದ್ದಾರೆ.
    ಹೃದಯಾಘಾತಗಳಿಗೆ ಜನರ ಜೀವನಶೈಲಿ ಕಾರಣವಾಗಿದೆ. ಕೋವಿಡ್‌ ಲಸಿಕೆಯೇ ಹೃದಯಾಘಾತಕ್ಕೆ ಕಾರಣ ಎಂದು ಎಲ್ಲಿಯೂ ತಿಳಿದುಬಂದಿಲ್ಲ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಈ ಬಗ್ಗೆ ಅಧ್ಯಯನ ನಡೆದಿದೆ. ಲಸಿಕೆಯಿಂದ ಜನರಿಗೆ ಒಳ್ಳೆಯದಾಗಿದೆ. ಬಹಳಷ್ಟು ಜನರ ಜೀವ ಉಳಿದಿದೆ ಎಂದು ಸ್ಪಷ್ಟಪಡಿಸಿದ್ದಾರೆ.
    ಹಾಸನ, ತುಮಕೂರು ಸೇರಿದಂತೆ ರಾಜ್ಯದ ಹಲವು ಪ್ರದೇಶಗಳಲ್ಲಿ ಹೃದಯಘಾತ ಪ್ರಕರಣಗಳು ಹೆಚ್ಚುತ್ತಿವೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಹೃದ್ರೋಗಗಳಿಂದ ಸಂಭವಿಸುತ್ತಿರುವ ಹಠಾತ್‌ ಸಾವುಗಳ ಬಗ್ಗೆ ಅಧ್ಯಯನಕ್ಕಾಗಿ ರಚಿಸಲಾಗಿದ್ದ ತಜ್ಞರ ಸಮಿತಿ ವರದಿಯನ್ನು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
    ಕೋವಿಡ್‌ ನಿಯಂತ್ರಣಕ್ಕೆ ನೀಡಲಾದ ಎಂಆರ್‌ಎನ್‌ಎ ಲಸಿಕೆಯ ಬಗ್ಗೆ ಒಂದಿಷ್ಟು ಅನುಮಾನಗಳಿವೆ. ಆದರೆ ಅದನ್ನು ನಮ ದೇಶದಲ್ಲಿ ನೀಡಲಾಗಿಲ್ಲ ಎಂದರು.ಜನಸಾಮಾನ್ಯರಲ್ಲಿದ್ದ ಅನುಮಾನವನ್ನು ಬಗೆಹರಿಸುವ ಸಲುವಾಗಿಯೇ ಮುಖ್ಯಮಂತ್ರಿಯವರು ತಂತ್ರಜ್ಞರ ಸಮಿತಿಯನ್ನು ರಚಿಸಿದ್ದರು. ಅಧ್ಯಯನ ನಡೆಸಿದ ಸಮಿತಿಯು ಲಸಿಕೆಯ ಕಾರಣದಿಂದ ಹೃದಯಾಘಾತವಾಗಿಲ್ಲ ಎಂದು ಸ್ಪಷ್ಟಪಡಿಸಿದೆ ಎಂದು ಹೇಳಿದರು.
    ಚಿಕ್ಕವಯಸ್ಸಿನವರಲ್ಲಿ ದಿಢೀರ್‌ ಹೃದಯಾಘಾತವಾಗುತ್ತಿವೆ. ನಡೆದು ಹೋಗುವಾಗ, ವ್ಯಾಯಾಮ ಮಾಡುವಾಗ ಹಠಾತ್‌ ಮರಣಗಳಾಗುತ್ತಿವೆ. ಅವುಗಳ ಬಗ್ಗೆ ಹೆಚ್ಚಿನ ಗಮನ ಕೊಡಬೇಕು ಎಂದು ತಜ್ಞರ ಸಮಿತಿ ಹೇಳಿದೆ. ಸಮಿತಿಯ ಶಿಫಾರಸು ಆಧಾರದ ಮೇಲೆ ಸರ್ಕಾರ ಕೆಲ ನಿರ್ಧಾರಗಳನ್ನು ತೆಗೆದುಕೊಂಡಿದೆ ಎಂದರು.
    ಹಠಾತ್‌ ಸಾವಿಗೆ ಕಾರಣವಾಗುವ ಹೃದ್ರೋಗವನ್ನು ಅಧಿಸೂಚಿತ ಕಾಯಿಲೆ ಎಂದು ರಾಜ್ಯ ಸರ್ಕಾರ ಘೋಷಿಸುತ್ತಿದ್ದು, ಹೃದಯ ಸಂಬಂಧದ ಕಾಯಿಲೆಗಳನ್ನು ತಪ್ಪಿಸಲು ಶಾಲೆಗಳಲ್ಲಿ ,ಸರ್ಕಾರಿ ನೌಕರರು, ಗುತ್ತಿಗೆ ನೌಕರರಿಗೆ ವಾರ್ಷಿಕ ನಿಯಮಿತ ತಪಾಸಣೆಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
    ಆಸ್ಪತ್ರೆಯ ಹೊರಗಡೆ ಹಠಾತ್‌ ಮರಣಗಳನ್ನು ಅಧಿಸೂಚಿತ ಕಾಯಿಲೆ ಎಂದು ಘೋಷಿಸಲಾಗುತ್ತಿದ್ದು, ಆ ಸಾವನ್ನು ಆರೋಗ್ಯ ಇಲಾಖೆಯ ಗಮನಕ್ಕೆ ತಂದು ಕಡ್ಡಾಯವಾಗಿ ಮರಣೋತ್ತರ ಪರೀಕ್ಷೆಗೊಳಪಡಿಸುವ ನಿರ್ಧಾರ ತೆಗೆದುಕೊಳ್ಳಲು ಸರ್ಕಾರ ಸಹಮತ ವ್ಯಕ್ತಪಡಿಸಿದೆ. ಈ ನಿರ್ಧಾರವನ್ನು ಸರ್ಕಾರ ತೆಗೆದುಕೊಳ್ಳುತ್ತಿದೆ ಎಂದು ಹೇಳಿದರು.
    ಹೆಚ್ಚು ಜನರಲ್ಲಿ ಜಾಗೃತಿ ಮೂಡಿಸಲು ತಪಾಸಣೆಯನ್ನು ವ್ಯಾಪಕಗೊಳಿಸಲಾಗುತ್ತದೆ. 15 ವರ್ಷದೊಳಗಿನ ಮಕ್ಕಳಿಗೆ ವರ್ಷಕ್ಕೊಮೆಯಾದರೂ ಹೃದಯದ ತಪಾಸಣೆ ನಡೆಸಲಾಗುವುದು. ಹುಟ್ಟಿನಿಂದಲೇ ಬಂದಿರುವ (ಕಾಂಜಿನೇಟಲ್‌ ಡಿಸೀಸ್‌‍) ಆರೋಗ್ಯ ಸಮಸ್ಯೆಗಳನ್ನು ಪತ್ತೆ ಹಚ್ಚಲು ಕ್ರಮ ಕೈಗೊಳ್ಳಲಾಗುವುದು. ಆರ್‌ಬಿಎಸ್‌‍ ಯೋಜನೆಯಡಿ ಹಲವು ರೀತಿಯ ತಪಾಸಣೆಗಳಿದ್ದು, ಹೃದಯ ಸಂಬಂಧಿ ತಪಾಸಣೆಗಳನ್ನು ಅಳವಡಿಸಲಾಗುವುದು ಎಂದು ವಿವರಿಸಿದರು.

    ಆರೋಗ್ಯ ತುಮಕೂರು Bengaluru ಶಾಲೆ ಸರ್ಕಾರ ಸುದ್ದಿ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನ ಎಲ್ಲಾ Bar Pub ಗಳ CCTV ಮೇಲೆ ಪೊಲೀಸ್ ಕಣ್ಣು.
    Next Article ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ
    vartha chakra
    • Website

    Related Posts

    ಎಚ್ಚೆತ್ತ ರಾಜ್ಯ ಸರ್ಕಾರ

    December 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    December 12, 2025

    ಮರಣದ ಕಾರಣ ಹೇಳುವುದು ಕಡ್ಡಾಯ

    December 9, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಚ್ಚೆತ್ತ ರಾಜ್ಯ ಸರ್ಕಾರ

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • kypit kyrsovyu_rcOn on ರೇಣುಕಾಚಾರ್ಯ ಅವರಿಗೆ ಬೇಸರವಾಗಿದೆಯಂತೆ | MP Renukacharya
    • драгон мани скачать on ಕನ್ನಡದಲ್ಲಿ ಮಾತಾಡು ಅಂದಿದ್ದೇ ತಪ್ಪಾಯ್ತಾ?
    • Williamgeate on ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    Latest Kannada News

    ಎಚ್ಚೆತ್ತ ರಾಜ್ಯ ಸರ್ಕಾರ

    December 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    December 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    December 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ವಿಮಾನಯಾನ ಬಳಕೆಗೆ 47 ಕೋಟಿ ಖರ್ಚು #varthachakra #siddaramaiah #helicopter #airtravel #costs #news
    Subscribe