ಬೆಂಗಳೂರು:
ರಾಜ್ಯಾದ್ಯಂತ ಬೇಸಿಗೆಯ ತೀವ್ರತೆ ದಿನೇ ದಿನೇ ಹೆಚ್ಚುತ್ತಿದ್ದು,ಬಿರು ಬಿಸಿಲಿನ ಶಾಖ ಮತ್ತು ಸೆಕೆಗೆ ಜನತೆ ಬಳಲತೊಡಗಿದ್ದಾರೆ. ಇದರ ಬೆನ್ನಲ್ಲೇ ಬಿಸಿ ವಾತಾವರಣದಿಂದ ಎಚ್ಚರಿಕೆಯಿಂದ ಇರುವಂತೆ
ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಅತಿ ಹೆಚ್ಚು ಬಿಸಿಲು ಕಾಣಿಸಿಕೊಂಡಿರುವ ಉತ್ತರ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ನೀಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ಸೇರಿದಂತೆ ಹಲವು ತಾಲೂಕುಗಳಲ್ಲಿ ದಿನದಿಂದ ದಿನಕ್ಕೆ ಬಿಸಿಲ ಝಳ ಹೆಚ್ಚಾಗಿದ್ದು, ಬಿಸಿ ವಾತಾವರಣ ಹಾಗೂ ತೇವಾಂಶ ಕಡಿಮೆಯಾಗಿ ಒಣ ಹವೆಯವಾತಾವರಣ ಇರಲಿದೆ. ಮುಂದಿನ 3 ದಿನದ ವರೆಗೆ ಈ ಅಲರ್ಟ್ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ 24 ಗಂಟೆಯಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ ದಾಖಲಾಗಿದೆ. ಕಲಬುರಗಿಯಲ್ಲಿ ಅತಿ ಹೆಚ್ಚು ಉಷ್ಣಾಂಶ ಅದರೆ 36.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕನಿಷ್ಠ ಉಷ್ಣಾಂಶ ದಾವಣಗೆರೆಯಲ್ಲಿ ದಾಖಲಾಗಿದೆ.
ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ ಮತ್ತು ಹಾವೇರಿಯಲ್ಲಿ 32-34 ° C ಮತ್ತು ವಿಜಯಪುರ, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು ಮತ್ತು ಬಾಗಲಕೋಟೆಯಲ್ಲಿ 31-37 ಡಿಗ್ರಿ ಉಷ್ಣಾಂಶ ದಾಖಲಾಗಿದೆ
ದಕ್ಷಿಣ ಒಳನಾಡಿನ ಚಿಕ್ಕ ಬಳ್ಳಾಪುರ, ಚಿಕ್ಕಮಗಳೂರು, ಚಿಂತಾಮಣಿ, Bengaluru, ಮೈಸೂರು ಮತ್ತು ಮಡಿಕೇರಿಯಲ್ಲಿ 31- 33 ° ಸೆ. ಹಾಗೂ ದಕ್ಷಿಣ ಒಳನಾಡಿನ ಆಗುಂಬೆ, ಚಿತ್ರದುರ್ಗ, ಚಾಮರಾಜನಗರ, ದಾವಣಗೆರೆ, ಮಂಡ್ಯ ಮತ್ತು ಶಿವಮೊಗ್ಗದಲ್ಲಿ 34-35 °ಸೆ ಇತ್ತು.
5 ಜಿಲ್ಲೆಗಳಲ್ಲಿ ಭಾರೀ ಬಿಸಿಲು:
ಬೆಂಗಳೂರು, ಮೈಸೂರಲ್ಲೂ ತಾಪಮಾನ ಹೆಚ್ಚಳ• ಕಳೆದ 24 ಗಂಟೆಗಳಲ್ಲಿ, ದಕ್ಷಿಣ ಒಳನಾಡಿನ ಆಗುಂಬೆಯಲ್ಲಿ ಗರಿಷ್ಠ ತಾಪಮಾನದಲ್ಲಿ (+2.9°ಸೆ) ಗಮನಾರ್ಹ ಏರಿಕೆಯಾಗಿದೆ.
ರಾಜ್ಯದ ಉಳಿದ ಭಾಗಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ. ಗರಿಷ್ಠ ತಾಪಮಾನವು ಕರಾವಳಿಯ ಕಾರವಾರದಲ್ಲಿ ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಹೆಚ್ಚಾಗಿದೆ, ಉತ್ತರ ಒಳನಾಡಿನ ಬಾಗಲಕೋಟೆಯಲ್ಲಿ ಮತ್ತು ದಕ್ಷಿಣ ಒಳನಾಡಿನ ಮಂಡ್ಯದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ. ರಾಜ್ಯದ ಉಳಿದ ಭಾಗಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯವಾಗಿತ್ತು.
ಕೆಲವು ಕಡೆಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33°ಸೆ ಮತ್ತು 18°ಸೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
Previous Articleಕಾಂಗ್ರೆಸ್ ನಲ್ಲಿ ಯಾರಿಗೆ ಅವಕಾಶ ಗೊತ್ತಾ
Next Article ದಾಸನ ಕಂಡು ಕಣ್ಣೀರು ಹಾಕಿದ ಪವಿತ್ರಾ ಗೌಡ