ಬೆಂಗಳೂರು:
ಬೃಹತ್ Bengaluru ಮಹಾನಗರ ಪಾಲಿಕೆ ಆಸ್ತಿ ತೆರಿಗೆ ಸಂಗ್ರಹದಲ್ಲಿ ಹೊಸ ಇತಿಹಾಸ ನಿರ್ಮಿಸಿದೆ
ಬೆಂಗಳೂರು ನಗರದ ಉಸ್ತುವಾರಿಯಾಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೈಗೊಂಡ ಕ್ರಮಗಳು ಹಾಗೂ ಅಧಿಕಾರಿಗಳ ಕಾರ್ಯ ಕ್ಷಮತೆ ವೃದ್ಧಿಸುವ ತೀರ್ಮಾನಗಳಿಂದ ದಾಖಲೆ ಪ್ರಮಾಣದಲ್ಲಿ ಆಸ್ತಿ ತೆರಿಗೆ ಸಂಗ್ರಹ ಮಾಡಲಾಗಿದೆ.
ಬಹು ವರ್ಷಗಳಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಆಸ್ತಿ ಮಾಲೀಕರನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ರೂಪಿಸಿದ ಓಟಿಎಸ್ (ಒಂದು ಬಾರಿ ಪರಿಹಾರ) ಅತ್ಯುತ್ತಮ ಫಲಿತಾಂಶ ತಂದುಕೊಟ್ಟಿದೆ.
ಇಲ್ಲಿಯವರೆಗೆ ಬಿಬಿಎಂಪಿಯಲ್ಲಿ 4284 ಕೋಟಿ ರೂ.ಗಳ ಆಸ್ತಿ ತೆರಿಗೆ ಸಂಗ್ರಹ ಮಾಡಲಾಗಿದೆ.ಆಸ್ತಿ ತೆರಿಗೆ ಸಂಗ್ರಹಕ್ಕೆ ಇನ್ನು ಮಾರ್ಚ್ ತಿಂಗಳವರೆಗೆ ಅವಕಾಶವಿದ್ದು ಆ ವೇಳೆಗೆ 5200 ಕೋಟಿ ರೂ.ಗಳ ತೆರಿಗೆ ಸಂಗ್ರಹಕ್ಕೆ ಗುರಿ ಇರಿಸಿಕೊಳ್ಳಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.
2024-25ನೇ ಸಾಲಿನಲ್ಲಿ ಈವರೆಗೆ 3,751 ಕೋಟಿ ರೂ. ತೆರಿಗೆ ಸಂಗ್ರಹಿಸಲಾಗಿದ್ದು, ವರ್ಷಾಂತ್ಯದೊಳಗೆ 5,200 ಕೋಟಿ ರೂ. ಸಂಗ್ರಹಿಸುವ ಗುರಿ ಹೊಂದಲಾಗಿದೆ ಎಂದರು.
ಪ್ರಸಕ್ತ ಹಣಕಾಸು ವರ್ಷದಲ್ಲಿ 5,200 ಕೋಟಿ ರೂ. ತೆರಿಗೆ ಸಂಗ್ರಹದ ಗುರಿ ನೀಡಲಾಗಿದ್ದು, ಈ ಗುರಿ ತಲುಪುವ ವಿಶ್ವಾಸವಿದೆ,” ಎಂದು ಹೇಳಿದರು.
ಪಾಲಿಕೆ ವ್ಯಾಪ್ತಿಯಲ್ಲಿ ತೆರಿಗೆ ಪಾವತಿಸದ ಎಲ್ಲ ಆಸ್ತಿಗಳನ್ನೂ ತೆರಿಗೆ ಜಾಲದಡಿ ತರಲಾಗುವುದು. ಅನಧಿಕೃತ ಕಟ್ಟಡಗಳಿಂದಲೂ ತೆರಿಗೆ ವಸೂಲಾತಿ ಮಾಡಲಾಗುವುದು. ಇ – ಖಾತಾ ವಿತರಣೆ ನಿಯಮಗಳನ್ನು ಸಡಿಲಗೊಳಿಸಲಾಗಿದೆ. ಸಾರ್ವಜನಿಕರು ತಮ್ಮ ಸ್ವತ್ತಿನ ಇ – ಖಾತಾವನ್ನು ಆನ್‌ಲೈನ್ ಮೂಲಕವೇ ಪಡೆಯಲು ಅನುವು ಮಾಡಿಕೊಡಲಾಗಿದೆ,” ಎಂದರು.