ಬೆಂಗಳೂರು,ಏ.9:
ರಾಜ್ಯದಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಯ ಸ್ಥಳ ನಿಗದಿ ವಿಚಾರ ಇದೀಗ ರಾಜ್ಯ ಕಾಂಗ್ರೆಸ್ ನಲ್ಲಿ ದೊಡ್ಡ ಮಟ್ಟದ ಅಪಸ್ವರಕ್ಕೆ ಕಾರಣವಾಗಿದೆ.
ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಉಂಟಾಗುವ ಹೊರೆಯನ್ನು ತಪ್ಪಿಸಲು ರಾಜ್ಯ ಸರ್ಕಾರ Bengaluru ಸುತ್ತಮುತ್ತ ನಿರ್ಮಿಸಲು ಉದ್ದೇಶಿಸಿರುವ ಪ್ರಸ್ತಾವನೆಗೆ 50 ಕ್ಕೂ ಹೆಚ್ಚು ಮಂದಿ ಕಾಂಗ್ರೆಸ್ ಶಾಸಕರು ವಿರೋಧ ವ್ಯಕ್ತಪಡಿಸಿದ್ದಾರೆ
ಕನಕಪುರ ಅಥವಾ ಕುಣಿಗಲ್ ರಸ್ತೆಯಲ್ಲಿ ವಿಮಾನ ನಿಲ್ದಾಣ ಸ್ಥಾಪನೆಯ ಬದಲು ಸ್ಥಳಗಳ ಬದಲು ಕಲ್ಯಾಣ ಕರ್ನಾಟಕ ಮಧ್ಯ ಕರ್ನಾಟಕ ಹಾಗೂ ಕಿತ್ತೂರು ಕರ್ನಾಟಕದ ಹೆಬ್ಬಾಗಿಲು ತುಮಕೂರು ಜಿಲ್ಲೆ ಶಿರಾದಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ಥಾಪನೆ ಮಾಡಬೇಕೆಂದು ಶಾಸಕರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ.
ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಮಾಜಿ ಸಚಿವ ಟಿ.ಬಿ.ಜಯಚಂದ್ರ ನೇತೃತ್ವದಲ್ಲಿ ಬರೆದಿರುವ ಪತ್ರಕ್ಕೆ ಡಿ.ಜಿ.ಶಾಂತನಗೌಡ, ಬಿ.ಆರ್.ಪಾಟೀಲ್, ನಯನ ಮೋಟಮ್ಮ, ಬಿ.ಎಂ.ನಾಗರಾಜ, ಎಸ್.ರಾಜಪ್ಪ, ಲಕ್ಷ್ಮಣ್ ಸವದಿ, ಹಂಪನಗೌಡ ಬಾದರ್ಲಿ, ಆನಂದ್ ಕೆ.ಎಸ್. ಎಚ್.ಡಿ.ತಮ್ಮಯ್ಯ, ವಿನಯ್ ಕುಲಕರ್ಣಿ, ಸಿ.ಎಸ್.ನಾಡಗೌಡ, ಗಣೇಶ್ ಹುಕ್ಕೇರಿ, ಅಶೋಕ್ ಪಟ್ಟಣ್, ಸುರೇಶ್ ಗೌಡ ಸೇರಿದಂತೆ ಹಲವರು ಸಿಹಿ ಹಾಕಿದ್ದಾರೆ.
ಶಿರಾದಲ್ಲಿ ಏರ್‌ಪೋರ್ಟ್ ನಿರ್ಮಾಣ ಮಾಡುವುದರಿಂದ ಬಯಲುಸೀಮೆ, ಉತ್ತರ ಕರ್ನಾಟಕದ ಭಾಗಕ್ಕೆ ಹೆಚ್ಚು ಅನುಕೂಲ ಆಗಲಿದೆ ಎ ಚೆನ್ನೈ -ಮುಂಬೈ ಹೆದ್ದಾರಿ ಹಾದುಹೋಗಿರುವ ಇಲ್ಲಿ ಎಚ್ ಎಎಲ್ ನಂತಹ ರಕ್ಷಣಾ ಸಂಸ್ಥೆ ಇದೆ. ಅತೀದೊಡ್ಡ ವಸಂತನರಸಾಪುರ ಕೈಗಾರಿಕಾ ವಸಾಹತು ಇದೆ. ಶೀಘ್ರದಲ್ಲೇ ಜಪಾನ್ ಟೌನ್ ಶಿಪ್ ಕೂಡ ನಿರ್ಮಾಣವಾಗುತ್ತಿದೆ.
ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ಆಗುತ್ತಿದೆ. ಎತ್ತಿನಹೊಳೆ, ಭದ್ರಾ ಮೇಲ್ದಂಡೆ, ಹೇಮಾವತಿ ನೀರಾವರಿ ಸೌಲಭ್ಯ ಇದೆ. ತುಮಕೂರು-ರಾಯಮರ್ಗ ರೈಲ್ವೇ ಮಾರ್ಗ ಕೂಡ ಹಾದು ಹೋಗಲಿದೆ. ಹೀಗಿರುವಾಗ ಶಿರಾ ಏರ್‌ಪೋರ್ಟ್ ನಿರ್ಮಾಣಕ್ಕೆ ಸೂಕ್ತ ಸ್ಥಳವಾಗಿದೆ ಇದರಿಂದ ಬೆಂಗಳೂರಿನಲ್ಲಿ ಅರ್ಧದಷ್ಟು ಟ್ರಾಫಿಕ್ ದಟ್ಟಣೆ ಕಡಿಮೆಯಾಗಲಿದೆ ಎಂದು ಪತ್ರದಲ್ಲಿ ಹೇಳಿದ್ದಾರೆ.
Previous Articleಸಿದ್ದರಾಮಯ್ಯ ಅವರಿಗೆ 500 ಕೋಟಿ ಕಿಕ್ ಬ್ಯಾಕ್
Next Article ಬೆಚ್ಚಿ ಬಿದ್ದು ಮನೆಗಳಿಂದ ಓಡಿ ಬಂದ ಗ್ರಾಮಸ್ಥರು