ಬೆಂಗಳೂರು: ರಾಜ್ಯದ 15 ಜೀವನದಿ ಹಾಗು ಉಪ ನದಿಗಳಿಂದ ಸಂಗ್ರಹ ಮಾಡಿದ ಪವಿತ್ರ ಗಂಗಾ ಜಲದ ಕಲಶ ಪ್ರತಿಷ್ಠಾಪನೆಯ ಮಹಾಪೂಜಾ ಕಾರ್ಯಕ್ರಮ ಹಾಗು ಕಲಶ ಪ್ರತಿಷ್ಠಾಪನೆ ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಡಲಾಗಿದೆ.
ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದಲ್ಲಿ ಇರಿಸಿರುವ ಬೃಹತ್ ಬ್ರಹ್ಮ ಕಲಶಕ್ಕೆ ಹಿರಿಯ ಪುರೋಹಿತರಿಂದ ಪೂಜಾ ಕೈಂಕರ್ಯ ನಡೆಯಲಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.
10 ಅಡಿ ಎತ್ತರದ 500 ಲೀಟರ್ ಜಲ ತುಂಬಲಿರುವ ಕಲಶವನ್ನು ಸ್ಥಾಪನೆ ಮಾಡಲಾಗುವುದು. ಕಲಶದ ಸುತ್ತ ತೂಗು ದೀಪಾಲಂಕಾರ ಮಾಡಲಾಗಿದೆ. ಜತೆಗೆ ದೇಶದ ಏಳು ಮಹಾ ನದಿಗಳ ಹೆಸರಿನಲ್ಲಿ ಪುಟ್ಟ ಕಲಶಗಳನ್ನು ಇಟ್ಟು ಪೂಜೆ ನೆರವೇರಿಸಲಾಗುವುದು ಎಂದು ಮಾಹಿತಿ ನೀಡಿದರು.
ಈ ಕಲಶಕ್ಕೆ ಮುಂದಿನ ಚುನಾವಣೆವರೆಗೆ ಹಿಂದೂ ಸಂಪ್ರದಾಯದಂತೆ ನಿತ್ಯ ಗಂಗಾಪೂಜೆ ನಡೆಯುತ್ತದೆ. ಹಾಗಾಗಿ, ನಾಳೆ ಕಲಶ ಪ್ರತಿಷ್ಠಾಪನೆ ಪೂಜಾ ಕಾರ್ಯಕ್ರಮ ಬಹಳ ವಿಶೇಷವಾಗಿರುತ್ತದೆ.
ನಾಳೆಯಿಂದ ಮುಂಬರುವ ವಿಧಾನಸಭೆ ಚುನಾವಣೆವರೆಗೂ ಈ ಗಂಗಾ ಮಾತೆಯ ಕಲಶಕ್ಕೆ ನಿತ್ಯಪೂಜೆ ನಡೆಯಲಿದೆ ಎಂದು ಅವರು ತಿಳಿಸಿದರು
ಕಲಶ ಪ್ರತಿಷ್ಠಾಪನೆ ಮಾಡಲಿರುವ ಮಂಟಪವನ್ನು ವಿಶೇಷವಾಗಿ ವಿನ್ಯಾಸ ಮಾಡಲಾಗಿದೆ. ಕರ್ನಾಟಕದ ಪರಂಪರೆಯನ್ನು ಬಿಂಬಿಸುವ ವಾಸ್ತುಶಿಲ್ಪ ಉಳ್ಳ ಮಂಟಪ ವಿಶೇಷ ಆಕರ್ಷಣೆಯಾಗಿದೆ. ಇಡೀ ಮಂಟಪವನ್ನು ಆವರಣ ಮಂಟಪ ಕಲಾ ಆರ್ಟ್ ನ ಕಲಾವಿದರು ಸಿದ್ಧಪಡಿಸಿದ್ದಾರೆ. ಈ ಮಂಟಪದಲ್ಲಿ ನಿರಂತರವಾಗಿ ಜಪ, ಮಂತ್ರ, ಮಂಗಳ ನಾದ ಮೊಳಗುತ್ತಿರುತ್ತದೆ.
Previous Articleಮಹಾರಾಷ್ಟ್ರ ಸಚಿವ ಪರಬ್ ಮನೆ, ಕಚೇರಿ ಮೇಲೆ ಇಡಿ ದಾಳಿ
Next Article ಮಹಿಳೆಯನ್ನು ಕೊಲೆ ಮಾಡಿದ ಭೂಪ ಸಿಕ್ಕಿಬಿದ್ದ