ಬೆಂಗಳೂರು, ಮಾ.10-ರಾಜ್ಯ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ 15.50 ಕೋಟಿ ಬೆಲೆಯ 1596 ಕೆಜಿ ಗಾಂಜಾ (Ganja) ವಶಪಡಿಸಿಕೊಳ್ಳಲಾಗಿದೆ.
ಖಚಿತ ಮಾಹಿತಿ ಆಧರಿಸಿ ಕೇಂದ್ರ ಮಾದಕದ್ರವ್ಯ ನಿಗ್ರಹ ದಳ ಹಾಗೂ ಬೀದರ್ ಜಿಲ್ಲಾ ಪೊಲೀಸ್ ಜಂಟಿ ಕಾರ್ಯಾಚರಣೆ ನಡೆಸಿ 15.50 ಕೋಟಿ ಬೆಲೆಯ 1596 ಕೆಜಿ ಗಾಂಜಾ ಹಾಗೂ ಲಾರಿಯನ್ನು ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿದ್ದಾರೆ.
ಇತ್ತೀಚಿನ ವರ್ಷಗಳಲ್ಲಿ ಇಷ್ಟೊಂದು ಪ್ರಮಾಣದ ಗಾಂಜಾ ವಶಪಡಿಸಿಕೊಳ್ಳಲಾಗಿರುವುದು ಇದೇ ಮೊದಲು ಎಂದು ಹೇಳಲಾಗುತ್ತಿದೆ.
ಲಾರಿಯಲ್ಲಿ ಅಕ್ರಮವಾಗಿ ಆಂಧ್ರಪ್ರದೇಶದಿಂದ ಬೀದರ್ ಮುಖಾಂತರ ಮಹಾರಾಷ್ಟ್ರಕ್ಕೆ ದೊಡ್ಡ ಪ್ರಮಾಣದಲ್ಲಿ ಗಾಂಜಾ ಸಾಗಾಣಿಕೆ ಮಾಡಲಾಗುತ್ತಿದೆ ಎಂಬ ಮಾಹಿತಿ ಪಡೆದ ಎನ್ ಸಿಬಿ ಅಧಿಕಾರಿಗಳ ತಂಡ ಬೀದರ್ ಪೊಲೀಸರ ನೆರವು ಪಡೆದು ಕಾರ್ಯಾಚರಣೆ ನಡೆಸಿತು.
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ವನಮಾರಪ್ಪನ ಹಳ್ಳಿ ಚೆಕ್‌ಪೋಸ್ಟ್ ಬಳಿ ಎನ್‌ಸಿಬಿ ಹಾಗೂ ಬೀದರ್ ಪೊಲೀಸರು ಲಾರಿಯೊಂದನ್ನು ತಡೆದು ನಿಲ್ಲಿಸಿದರು. ಅದರಲ್ಲಿ ಪೊಟ್ಟಣಗಳನ್ನಿಟ್ಟುಸಾಗಿಸುತ್ತಿದ್ದ 1,596 ಕೆ.ಜಿ ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿ ಡ್ರೈವರ್, ಕ್ಲೀನರ್‌ನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
ಈ ಗಾಂಜಾವನ್ನು ಎಲ್ಲಿಂದ ತರಲಾಯಿತು. ಇದು ಯಾರಿಗೆ ಸೇರಿದ್ದು ಮತ್ತು ಎಲ್ಲಿಗೆ ಕೊಂಡೊಯ್ಯಲಾಗುತ್ತಿತ್ತು ಎಂಬ ಮಾಹಿತಿ ಕಲೆ ಹಾಕುತ್ತಿದ್ದಾರೆ.

1 Comment
250 rodadas grГЎtis + 125% de bГґnus? SГі o Mostbet entrega isso – https://mostbetpt.pro/ , Mostbet entrega bГґnus turbinados e saques rГЎpidos para vocГЄ aproveitar logo .