ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿನ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ.
ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 17,070 ಕೊರೋನಾ ಪ್ರಕರಣ ವರದಿಯಾಗಿದೆ. ಕೊರೋನಾ ಸೋಂಕಿತರಾಗಿದ್ದ 14,413 ಮಂದಿ ಗುಣಮುಖರಾಗಿದ್ದಾರೆ. ಕೇರಳ ಸಹಿತ ಹಲವು ರಾಜ್ಯಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಿದೆ.
ಕೊರೋನಾದಿಂದ ಕಳೆದ 24 ಗಂಟೆ ಅವಧಿಯಲ್ಲಿ 23 ಮಂದಿ ಮೃತಪಟ್ಟಿದ್ದಾರೆ. ದೇಶದ ವಿವಿಧ ಆಸ್ಪತ್ರೆಗಳಲ್ಲಿ 1,07,189 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಾಸಿಟಿವಿಟಿ ದರ ಶೇಕಡ 3.40ಕ್ಕೆ ತಲುಪಿದೆ.
ಕೊರೋನಾ ಸೋಂಕು ತಡೆಗಟ್ಟಲು ಪರಿಣಾಮಕಾರಿ ಕ್ರಮ ತೆಗೆದುಕೊಳ್ಳುವಂತೆ ಕೇಂದ್ರ ಆರೋಗ್ಯ ಇಲಾಖೆ ರಾಜ್ಯಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
Previous Articleಕುಖ್ಯಾತ ಬೈಕ್ ಕಳ್ಳನ ಬಂಧನ 10 ಲಕ್ಷ ಮಾಲು ವಶ!
Next Article ನಾಳೆ ಏಕನಾಥ ಶಿಂಧೆ ವಿಶ್ವಾಸಮತ ಯಾಚನೆ