ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿನ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 18,819 ಕೊರೋನಾ ಪ್ರಕರಣ ವರದಿಯಾಗಿದೆ. ಕೇರಳ ಸಹಿತ ಹಲವು ರಾಜ್ಯಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಿದೆ.
ಕೊರೋನಾದಿಂದ ಕಳೆದ 24 ಗಂಟೆ ಅವಧಿಯಲ್ಲಿ 39 ಮಂದಿ ಮೃತಪಟ್ಟಿದ್ದಾರೆ. ದೇಶದ ವಿವಿಧ ಆಸ್ಪತ್ರೆಗಳಲ್ಲಿ 1,04,555 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಾಸಿಟಿವಿಟಿ ದರ ಶೇಕಡ 4.16ಕ್ಕೆ ತಲುಪಿದೆ.
ಕೊರೋನಾ ಸೋಂಕು ತಡೆಗಟ್ಟಲು ಪರಿಣಾಮಕಾರಿ ಕ್ರಮತೆಗೆದುಕೊಳ್ಳುವಂತೆ ಕೇಂದ್ರ ಆರೋಗ್ಯ ಇಲಾಖೆ ರಾಜ್ಯಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
Previous Articleಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ರಾಜೀನಾಮೆ
Next Article ನಾಳೆಯಿಂದ ನೈಸ್ ಟೋಲ್ ಶುಲ್ಕ ಹೆಚ್ಚಳ