Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತಿರುಪತಿಯಲ್ಲಿ ರಾಜ್ಯದ ಯಾತ್ರಿಕರಿಗೆ 236 ಕೋಟಿ ಯೋಜನೆ
    ಸುದ್ದಿ

    ತಿರುಪತಿಯಲ್ಲಿ ರಾಜ್ಯದ ಯಾತ್ರಿಕರಿಗೆ 236 ಕೋಟಿ ಯೋಜನೆ

    vartha chakraBy vartha chakraJuly 12, 2022Updated:July 12, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ತಿರುಪತಿ: ತಿರುಪತಿ ತಿರುಮಲದಲ್ಲಿ ರಾಜ್ಯದ ಯಾತ್ರಾರ್ತಿಗಳಿಗೆ ಶೀಘ್ರವೇ 346 ಸುಸಜ್ಜಿತ ವಸತಿ ಕೊಠಡಿಗಳು ಸಿದ್ಧವಾಗಲಿವೆ ಎಂದು ಬಿಡಿಎ ಅಧ್ಯಕ್ಷರೂ ಆದ ತಿರುಪತಿ ತಿರುಮಲ ಮಂಡಳಿ ಸದಸ್ಯ ಎಸ್ ಆರ್ ವಿಶ್ವನಾಥ್ ಹೇಳಿದ್ದಾರೆ.
    ತಿರುಪತಿ ತಿರುಮಲದಲ್ಲಿ ರಾಜ್ಯ ಸರ್ಕಾರದಿಂದ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
    ತಿರುಮಲದಲ್ಲಿ ಕರ್ನಾಟಕದ ಯಾತ್ರಾರ್ತಿಗಳು ಬಂದು ವಾಸ್ತವ ಹೂಡಲು ಸೌಲಭ್ಯಗಳು ಅಷ್ಟಾಗಿ ಇರಲಿಲ್ಲ. ಜೊತೆಗೆ ರಾಜ್ಯಕ್ಕೆ ಸೇರಿದ ಸುಮಾರು ಏಳು ಎಕರೆ ಜಾಗ ಕೂಡ ನ್ಯಾಯಾಲಯದಲ್ಲಿತ್ತು. ಅದೆಲ್ಲವನ್ನು ಈಗ ಸರಿಪಡಿಸಿ ಯಾತ್ರಾರ್ಥಿಗಳಿಗೆ ಅನುಕೂಲ ಆಗುವಂತೆ ಸುಸಜ್ಜಿತ ಕೊಠಡಿಗಳು ಹಾಗು ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
    ಕರ್ನಾಟಕ ಭವನ ನವೀಕರಣ ವಸತಿಗೃಹಗಳ ನಿರ್ಮಾಣ ಸೇರಿದಂತೆ ಒಟ್ಟಾರೆ ಸುಮಾರು ₹236 ಕೋಟಿ ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಇದರಲ್ಲಿ ಒಟ್ಟು 346 ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ. ವಿವಿಧ ಕಾರಣಗಳಿಂದ ಇಲ್ಲಿ ಅಭಿವೃದ್ಧಿ ಕೆಲಸಗಳನ್ನು ನಡೆಸಲು ಆಗುತ್ತಿರಲಿಲ್ಲ. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ನೀಡಿದ್ದ ಅನುದಾನ ಹಾಗು ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆದ ಮೇಲೆ ನೀಡಿದ ಸಹಕಾರದಿಂದ ಈಗ ಶೀಘ್ರಗತಿಯ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಮುಖ್ಯಮಂತ್ರಿ ಅವರು ಇತ್ತೀಚೆಗೆ ತಿರುಮಲಕ್ಕೆ ಭೇಟಿ ನೀಡಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಿದ್ದರು. ಹೀಗಾಗಿ ಮುಂದಿನ ಫೆಬ್ರವರಿ ವೇಳೆಗೆ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುತ್ತಿದೆ ಎಂದು ವಿಶ್ವನಾಥ್ ವಿವರಣೆ ನೀಡಿದರು.
    ತಿರುಪತಿಗೆ ನಿತ್ಯ ಲಕ್ಷಾಂತರ ಯಾತ್ರಾರ್ಥಿಗಳು ಬರುತ್ತಿದ್ದು ಇವರ ಪೈಕಿ ರಾಜ್ಯದಿಂದ ಬರುವ ಯಾತ್ರಾರ್ಥಿಗಳಲ್ಲಿ ಸುಮಾರು ಏಕಕಾಲಕ್ಕೆ ಒಂದುವರೆ ಸಾವಿರಕ್ಕೂ ಹೆಚ್ಚು ಯಾತ್ರಾರ್ತಿಗಳಿಗೆ ರಾಜ್ಯ ಸರ್ಕಾರದಿಂದ ವಸತಿ ಸೌಲಭ್ಯ ಕಲ್ಪಿಸಬಹುದು. ಹೀಗಾಗಿ ರಾಜ್ಯ ಸರ್ಕಾರ ಈಗ ತಕ್ಷಣಕ್ಕೆ 100 ಕೋಟಿ ರೂ ಬಿಡುಗಡೆ ಮಾಡುತ್ತಿದ್ದು ಉಳಿದ ಅನುದಾನವನ್ನು ಹಂತ ಹಂತವಾಗಿ ಕೊಡಲಿದೆ. ಹೀಗಾಗಿ ತಿರುಮಲದಲ್ಲಿ ಸರ್ಕಾರ ಕೈಗೊಳ್ಳುತ್ತಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಯಾವುದೇ ತೊಂದರೆ ಇಲ್ಲ ಎಂದು ಹೇಳಿದರು.
    ತಿರುಪತಿ ಬೆಟ್ಟದ ಕೆಳಗೆ ರಾಜ್ಯ ಸರ್ಕಾರದ ಆಸ್ತಿ ಇದೆ. ಅದನ್ನು ಕೂಡ ಅಭಿವೃದ್ಧಿಪಡಿಸಿ ಅದರಿಂದ ಬರುವ ಆದಾಯವನ್ನು ತಿರುಮಲದಲ್ಲಿರುವ ಕರ್ನಾಟಕ ಭವನ ನಿರ್ವಹಣೆಗೆ ಬಳಸುವ ಬಗ್ಗೆ ಚಿಂತಿಸಲಾಗುತ್ತಿದೆ ಎಂದು ವಿಶ್ವನಾಥ್ ತಿಳಿಸಿದರು.

    ಈ ಎಲ್ಲಾ ಕಾಮಗಾರಿಗಳನ್ನು ಮುಜರಾಯಿ ಇಲಾಖೆ ವತಿಯಿಂದ ನಡೆಸಲಾಗುತ್ತಿದ್ದು ಇಲಾಖೆಯಿಂದ ಈಗಾಗಲೇ ಸಾಕಷ್ಟು ಸಹಕಾರ ಸಿಕ್ಕಿದೆ ಇನ್ನೂ ಹೆಚ್ಚಿನ ಸಹಕಾರ ನೀಡಬೇಕೆಂದು ಸಚಿವೆ ಶಶಿಕಲಾ ಜೊಲ್ಲೆ ಅವರನ್ನು ವಿನಂತಿಸಲಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಹೆಚ್ಚಿನ ಸೌಲಭ್ಯಗಳು ಸಿಗಲಿದೆ ಎಂದರು.
    ತಿರುಮಲದಲ್ಲಿ ಬೇರೆ ರಾಜ್ಯಗಳು ಹೊಂದಿರುವ ಆಸ್ತಿಗಳಿಗೆ ಹೋಲಿಸಿದರೆ ಕರ್ನಾಟಕ ಅತಿ ಹೆಚ್ಚಿನ ಆಸ್ತಿ ಅಂದರೆ ಸುಮಾರು ಏಳು ಎಕರೆ ಜಾಗ ಹೊಂದಿದೆ ಇದನ್ನು ಯಾತ್ರಾರ್ಥಿಗಳ ಸೌಲಭ್ಯ ಹಾಗು ಅನುಕೂಲಕ್ಕೆ ಬಳಸಿಕೊಳ್ಳಬೇಕೆನ್ನುವ ನಿಟ್ಟಿನಲ್ಲಿ ಇನ್ನೂ ಅನೇಕ ಕ್ರಮ ಕೈಗೊಳ್ಳುವ ಆಲೋಚನೆ ಇದೆ ಎಂದು ಹೇಳಿದರು.

    Verbattle
    Verbattle
    Verbattle
    andhra pradesh Government thirumala tirupathi
    Share. Facebook Twitter Pinterest LinkedIn Tumblr Email WhatsApp
    Previous Articleಪತ್ನಿಯನ್ನು ಕೊಂದು, ಪೊದೆಗೆಸೆದು ಸುಟ್ಟ ಪಾಪಿ ಪತಿರಾಯ..!
    Next Article E.D.ಗೆ ಪಂಗನಾಮ ಹಾಕಿದ ಐನಾತಿಗಳು..
    vartha chakra
    • Website

    Related Posts

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    February 3, 2026

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    February 2, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    February 2, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    ನೇಪಾಳಿ ಗ್ಯಾಂಗ್ ಇದೆ ಹುಷಾರ್!

    ವಿಧಾನಸಭೆಯಲ್ಲಿ ಅಶೋಕ್ ವೀರಾವೇಶದ ಭಾಷಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Conradjag on ವಲಸಿಗರ ನಡುವೆ ಜಿದ್ದಾಜಿದ್ದಿನ ಪೈಪೋಟಿ (ಚಿತ್ರದುರ್ಗ ಲೋಕಸಭಾ ಕ್ಷೇತ್ರ) | Chitradurga
    • Jamespiedy on ಎದೆ ನಡುಗಿಸಿದ ಭೀಕರ ಹತ್ಯೆ.
    • CharleneWow on ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    February 3, 2026

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    February 2, 2026

    ನೇಪಾಳಿ ಗ್ಯಾಂಗ್ ಇದೆ ಹುಷಾರ್!

    February 2, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.