ಬೆಂಗಳೂರು,ಜ.2- ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹೋರಾಟ ನಡೆಸಿದ ರೈತರು, ದಲಿತ ಸಂಘಟನೆಗಳ ಕಾರ್ಯಕರ್ತರು ಕನ್ನಡಪರ ಹೋರಾಟ ಗಾರರು ಮತ್ತು ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಹಿಂದೆ ಪಡೆಯಲು ಸರ್ಕಾರ ಚಿಂತನೆ ನಡೆಸಿದೆ.
ಈ ಕುರಿತಂತೆ ಮಾಹಿತಿ ನೀಡಿದ ಗೃಹಸಚಿವ ಡಾ.ಜಿ.ಪರಮೇಶ್ವರ್ ,ಇದಕ್ಕಾಗಿ ತಮ್ಮ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪಸಮಿತಿ ರಚಿಸಲಾಗಿದೆ. ಅಲ್ಲಿ ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದರು.
ರಾಜ್ಯಾದ್ಯಂತ 400ಕ್ಕೂ ಹೆಚ್ಚು ಅರ್ಜಿಗಳು ಪ್ರಕರಣವನ್ನು ಹಿಂಪಡೆಯುವ ಸಲುವಾಗಿ ಬಂದಿವೆ. ಇದರಲ್ಲಿ ಸ್ಪಷ್ಟವಾದ ಮಾರ್ಗಸೂಚಿ ಪಾಲನೆ ಮಾಡಲಾಗುವುದು. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಎಂಬ ಆದ್ಯತೆಗಳಿರುವುದಿಲ್ಲ ಎಂದು ತಿಳಿಸಿದರು.
ಪೊಲೀಸ್ ಅಧಿಕಾರಿಗಳು ಪ್ರಕರಣ ಹಿಂಪಡೆಯ ಬಹುದೇ ಅಥವಾ ಬೇಡವೇ ಎಂಬುದರ ಬಗ್ಗೆ ಸ್ಪಷ್ಟ ಶಿಫಾರಸ್ಸಿನೊಂದಿಗೆ ಕಡತ ಮಂಡಿಸಲಿದ್ದಾರೆ. ಉಪಸಮಿತಿ ಅದನ್ನು ಪರಿಶೀಲಿಸಲಿದೆ. ಸೂಕ್ತವಾಗಿದ್ದರೆ ಹಿಂಪಡೆಯುವ ಬಗ್ಗೆ ಪ್ರಕ್ರಿಯೆ ಮುಂದುವರೆಸಲು ಸಂಪುಟಕ್ಕೆ ಶಿಫಾರಸ್ಸು ಮಾಡಲಾಗುವುದು. ಇಲ್ಲವಾದರೆ ಪ್ರಕರಣವನ್ನು ಮುಂದುವರೆಸಲು ಪೊಲೀಸರಿಗೆ ಸೂಚಿಸಲಾಗುವುದು ಎಂದರು ರಾಜ್ಯಾದ್ಯಂತ ಇರುವ ಬಾಕಿ ಪ್ರಕರಣಗಳನ್ನು ಇತ್ಯರ್ಥಪಡಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ. ಎಲ್ಲಾ ಜಿಲ್ಲೆಗಳ ಎಸ್ಪಿಗಳು, ನಗರ ಪ್ರದೇಶದ ಆಯುಕ್ತರು ಪರಿಶೀಲನೆ ನಡೆಸುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ಪರಿಶೀಲನೆ ನಡೆಸುವಾಗ 32 ಪ್ರಕರಣಗಳು ಕಂಡುಬಂದಿವೆ. ಅದರಲ್ಲಿ ರಾಮ ಜನ್ಮಭೂಮಿ ಹೋರಾಟ ಪ್ರಕರಣದಲ್ಲಿ ಭಾಗಿಯಾದವರೂ ಸೇರಿದ್ದಾರೆ. ಆದರೆ ಅದೊಂದೇ ಪ್ರಕರಣವನ್ನು ನಾವು ಕೆದಕಿಲ್ಲ. ರಾಜ್ಯಾದ್ಯಂತ ಪರಿಶೀಲನೆ ನಡೆಯುವಾಗ ಹುಬ್ಬಳ್ಳಿ ಪ್ರಕರಣವೂ ಕಂಡುಬಂದಿದೆ. ಅಯೋಧ್ಯೆ ರಾಮಮಂದಿರ ಉದ್ಘಾಟನೆ ವೇಳೆ ಇದು ಕಂಡುಬಂದಿರುವುದು ಕಾಕತಾಳೀಯವಷ್ಟೇ ಎಂದು ಸ್ಪಷ್ಟಪಡಿಸಿದರು.

1 Comment
Turn the night into pure adrenaline — start winning today – http://gketorolac.com/mostbet-kasino-2026-najlepsie-bonusy-a-recenzia-pre-slovakov/ , One click and the whole algorithm blushes .