ಬೆಂಗಳೂರು, ಸೆ.24 – ರಾಜ್ಯದಲ್ಲಿ ಮೂರು ಸಾವಿರ ಜನಸಂಖ್ಯೆಯುಳ್ಳ ಪ್ರತೀ ಪಂಚಾಯಿತಿ ವ್ಯಾಪ್ತಿಯಲ್ಲಿ ಮದ್ಯದ ಅಂಗಡಿಗಳನ್ನು ತೆರಲು ಕಾಂಗ್ರೆಸ್ ಸರ್ಕಾರ ಹೊರಟಿದೆ. ಇದು ಅಸಹ್ಯದ ಪರಮಾವಧಿ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಪ್ರತೀ ಪಂಚಾಯಿತಿಯಲ್ಲೂ ಮದ್ಯದ ಅಂಗಡಿ ತೆರೆಯಲು ಸಿದ್ಧತೆ ನಡೆಸಿರುವುದು ನಾಚಿಕೆಗೇಡು. ಅಕ್ಕಿ, ಬೇಳೆ, ದವಸಧಾನ್ಯ, ಹಣ್ಣು ತರಕಾರಿ, ಹಾಲು-ಮೊಸರು ಸಿಗುವ ಸೂಪರ್ ಮಾರುಕಟ್ಟೆಗಳಲ್ಲೂ ಮುಕ್ತವಾಗಿ ಮದ್ಯ ಮಾರಾಟಕ್ಕೆ ಅವಕಾಶ ನೀಡುವುದು ಅಸಹ್ಯದ ಪರಮಾವಧಿ. ಇದಾ ಸಮಾಜವಾದ? ಎಂದು ಪ್ರಶ್ನಿಸಿದ್ದಾರೆ.
ಗ್ಯಾರಂಟಿಗಳಿಂದ ಜನರನ್ನು ಯಾಮಾರಿಸಿದ್ದು ಸಾಲದೆಂಬಂತೆ ಪ್ರತೀ ಪಂಚಾಯಿತಿಯಲ್ಲೂ ಮದ್ಯದ ಅಂಗಡಿ ತೆರೆಯಲು ಸಿದ್ಧತೆ ನಡೆಸುತ್ತಿದೆ. ಮೂರು ಸಾವಿರ ಜನಸಂಖ್ಯೆಯುಳ್ಳ ಪ್ರತೀ ಪಂಚಾಯಿತಿ ವ್ಯಾಪ್ತಿಯಲ್ಲಿ ಬಾರ್ ತೆಗೆದು ಮನೆಹಾಳು ಮಾಡಲಿದೆ ಸರಕಾರ. ಸುಳ್ಳು ಗ್ಯಾರಂಟಿಗಳನ್ನು ನಂಬಿ ಮೋಸ ಹೋದ ಮಹಿಳೆಯರಿಗೆ ಕರ್ನಾಟಕದಲ್ಲಿ ಕೇಡುಗಾಲ ಶುರುವಾಗಿದೆ ಅವರ ಸೌಭಾಗ್ಯಕ್ಕೆ ಎದುರಾಗಿದೆ ಸಂಚಕಾರ. ಇದು ಮನೆಹಾಳು ಸರಕಾರ ಎಂದು ಕಿಡಿ ಕಾರಿದ್ದಾರೆ.
ನಾರಿಯರಿಗೆ ‘ಶಕ್ತಿ’ ತುಂಬುತ್ತೇವೆ ಎಂದ ಸರಕಾರ, ಈಗ ಅವರ ಬಾಳಿಗೆ ಬೆಂಕಿ ಹಾಕುತ್ತಿದೆ. ‘ಗೃಹಲಕ್ಷ್ಮೀ’ ಎಂದ ಸರಕಾರ ಅವರ ಬಾಳಿಗೆ ಗ್ರಹಣವಾಗಿದೆ. ‘ಗೃಹಜ್ಯೋತಿ’ ಎಂದ ಸರಕಾರ ಅವರ ಬಾಳಜ್ಯೋತಿಯನ್ನೇ ನಂದಿಸುತ್ತಿದೆ. ‘ಅನ್ನಭಾಗ್ಯ’ ಎಂದ ಸರಕಾರ, ಈಗ ‘ಮದ್ಯಭಾಗ್ಯ’ ಎನ್ನುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯೋಜನೆಗಳ ಹೆಸರಲ್ಲಿ ಕೊಳ್ಳೆ ಹೊಡೆಯುವ ಹುನ್ನಾರ ಕಾಂಗ್ರೆಸ್ ಸರಕಾರದ್ದು. ಒಂದೆಡೆ ಮನೆಮನೆಗೂ ಗೃಹಜ್ಯೋತಿ ಎಂದು ಹೇಳಿ, ಈಗ ಮನೆಮನೆಗೂ ‘ಮದ್ಯಭಾಗ್ಯ’ ನೀಡಲು ಹೊರಟಿದೆ. ಸರಕಾರವು ಧನಪಿಶಾಚಿ ಅವತಾರವೆತ್ತಿ ಅಬಕಾರಿ ಆದಾಯ ಹೆಚ್ಚಿಸಿಕೊಳ್ಳಲು ಈಗ ಮದ್ಯ ಸಮಾರಾಧನೆಗೆ ಶ್ರೀಕಾರ ಹಾಡಿದೆ. ಇದು 6ನೇ ಗ್ಯಾರಂಟಿ ಎಂದು ಆಪಾದಿಸಿದ್ದಾರೆ.


2 Comments
Закрытие месяца в 1С Бухгалтерия — рутинная, но важная операция. Программа последовательно выполняет регламентные операции: списание расходов будущих периодов, расчет долей, формирование финансового результата. Контроль последовательности исключает задвоение сумм. Система проверяет корректность ввода остатков и наличие закрытых периодов. buhgalteriya0.wordpress.com
Необычный интерьер в стиле лофт. Бетон, металл, кожаный диван. Мужской характер. Техника Hi-Fi. Проектор вместо ТВ. Игры на PS5 (бесплатно). Тусовка или мальчишник. Звук объемный. Соседи не слышат. Квартира на сутки для тех, кто ценит стиль. квартира на сутки молодечно