Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಚ್ಚಿ ಬಿದ್ದ ಬೆಳಗಾವಿ ಮಂದಿ : ಹಳ್ಳದಲ್ಲಿ ತೇಲಿ ಬಂದ ಏಳು ಭ್ರೂಣಗಳು
    Viral

    ಬೆಚ್ಚಿ ಬಿದ್ದ ಬೆಳಗಾವಿ ಮಂದಿ : ಹಳ್ಳದಲ್ಲಿ ತೇಲಿ ಬಂದ ಏಳು ಭ್ರೂಣಗಳು

    vartha chakraBy vartha chakraJune 24, 2022Updated:June 24, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ: ಕ್ರೌರ್ಯ ಹೇಗೆಲ್ಲ ಇರುತ್ತದೆ ಎನ್ನುವುದಕ್ಕೆ ಊಹೆ ಮತ್ತು ನಂಬಿಕೆಗೂ ನಿಲುಕದ ಅದೆಷ್ಟೋ ಉದಾಹರಣೆಗಳು ನಮ್ಮೆದುರಿಗೆ ಇವೆ. ಅಂತಹದ್ದೆ ಒಂದು ಉದಾಹರಣೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದ್ದು, ಕುಂದಾನಗರಿಯ ಜನರನ್ನು ಅಕ್ಷರಶಃ ಬೆಚ್ಚಿ ಬೀಳಿಸಿದೆ.

    ಹೌದು, ರಾಕ್ಷಸಿ ಕೃತ್ಯವೊಂದು ಬೆಳಗಾವಿ ಜಿಲ್ಲೆ ಮೂಡಲಗಿ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಹಳ್ಳದಲ್ಲಿ ಭ್ರೂಣಗಳು ತೇಲಿ ಬಂದಿದ್ದು ಜನರಲ್ಲಿ ದಿಗ್ಭ್ರಮೆ ಮೂಡಿಸಿದೆ.
    ಆದರೆ ಈ ಹಳ್ಳದಲ್ಲಿ ತೇಲಿ ಬಂದಿದ್ದು, ಏಳು ಬ್ರೂಣಗಳು. ಇದರಿಂದ ಇದು ಮೇಲ್ನೋಟಕ್ಕೆ ಯಾರೋ ಕಿರಾತಕರೆ ಮಾಡಿದ್ದು ಎನ್ನುವುದು ಕಂಡುಬರುತ್ತದೆ.
    ಭ್ರೂಣಗಳ ಹತ್ಯೆಗೈದವರು ಯಾರು? ಎನ್ನುವ ಪ್ರಶ್ನೆ ಹಾಗು ಚರ್ಚೆ ಇಡೀ ಜಿಲ್ಲೆಯಲ್ಲಿ ವ್ಯಾಪಿಸಿದೆ.
    ಇಲ್ಲಿನ ಬಸ್ ನಿಲ್ದಾಣ ಸಮೀಪದ ಹಳ್ಳದಲ್ಲಿ 7 ಭ್ರೂಣಗಳು ಐದು ಡಬ್ಬಗಳಲ್ಲಿ ಪತ್ತೆಯಾಗಿವೆ. ಇದನ್ನು ಗಮನಿಸಿದ ಸ್ಥಳೀಯರು ಮೂಡಲಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಭ್ರೂಣಗಳನ್ನು ಹಳ್ಳದಿಂದ ಹೊರತೆಗೆದು ಸ್ಥಳೀಯ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಸ್ಥಳೀಯ ಆರೋಗ್ಯಾಧಿಕಾರಿಗಳು, ಮೂಡಲಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
    ಇನ್ನು ಪ್ರಕರಣ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಬೆಳಗಾವಿ ಡಿಹೆಚ್‌ಒ ಡಾ.ಮಹೇಶ್ ಕೋಣಿ, ಮೂಡಲಗಿ ಪಟ್ಟಣದ ಸೇತುವೆ ಕೆಳಗೆ ಐದು ಡಬ್ಬಿಯಲ್ಲಿ ಏಳು ಭ್ರೂಣಗಳು ಪತ್ತೆಯಾಗಿವೆ. ಫೋಟೋ ನೋಡಿದರೆ ಪತ್ತೆಯಾದ ಭ್ರೂಣಗಳು ಐದು ತಿಂಗಳು ತುಂಬಿದ ಹಾಗೇ ಕಾಣುತ್ತಿವೆ. ಭ್ರೂಣಗಳನ್ನು ಸ್ಥಳೀಯ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ. ನಂತರ ಬೆಳಗಾವಿಯ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ತಂದು ಪರೀಕ್ಷೆ ನಡೆಸಲಾಗುವುದು. ಈ ಕೃತ್ಯವೆಸಗಿದವರು ಯಾರು? ಎನ್ನುವ ಬಗ್ಗೆ ತನಿಖೆಯಿಂದ ಗೊತ್ತಾಗಬೇಕಿದೆ. ಈ ಬಗ್ಗೆ ಜಿಲ್ಲಾಧಿಕಾರಿಕಾರಿಯೊಂದಿಗೆ ಚರ್ಚಿಸಿ ತನಿಖಾ ತಂಡ ರಚಿಸುವ ಬಗ್ಗೆ ಆರೋಗ್ಯ‌ ಇಲಾಖೆ ಅಧಿಕಾರಿ ಮಾಹಿತಿ ನೀಡಿದ್ದಾರೆ.
    ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಶಿಕ್ಷಾರ್ಹ ಅಪರಾಧ. ಈ ರೀತಿ ಒಂದೇ ಸ್ಥಳದಲ್ಲಿ ಏಳು ಭ್ರೂಣಗಳು ಪತ್ತೆಯಾಗಿದ್ದು ಇಡೀ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದೆ. ಪ್ರಕರಣ ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಡಳಿತ ಆರೋಪಿಗಳ ಪತ್ತೆಗೆ ಬಲೆ ಬೀಸಿದೆ. ಏನೇ ಆಗಲಿ ಈ ಘಟನೆ ಕ್ರೌರ್ಯದ ಅತಿರೇಕತನವಲ್ಲದೆ ಇನ್ನೇನು ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ.

    Verbattle
    Verbattle
    Verbattle
    News Trending viral ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಉದ್ಯಮಿಯಾದ ರಶ್ಮಿಕಾ!
    Next Article ಸ್ಕೂಟರ್‌ನಲ್ಲಿ ಆಕಸ್ಮಿಕ ಬೆಂಕಿ ತಗುಲಿ ಇಬ್ಬರ ಸ್ಥಿತಿ ಚಿಂತಾಜನಕ
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    February 8, 2026

    ಹೈಕಮಾಂಡ್ ನಿಂದ ಸಂದೇಶ ಬರುತ್ತಾ..?

    February 6, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn on ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • Everetttup on ವಿಮಾನದಲ್ಲಿ ಬೀಡಿ‌ ಸೇದಿದ‌ ಆಸಾಮಿ | Indigo
    • LinwoodGah on ಭಾರತಕ್ಕೆ ಇನ್ನೊಬ್ಬ ವೈರಿ ಹುಟ್ಟಿಕೊಂಡನೇ?
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.