ಹೇಮಾವತಿ ಜಲಾಶಯದ ಜಲಾನಯನ ಪ್ರದೇಶದಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದ್ದು, ಜುಲೈ 07 ರಂದು ಬೆಳಿಗ್ಗೆ 6.00 ಗಂಟೆಗೆ 16660 ಕ್ಯುಸೆಕ್ಸ್ ನೀರು ಹರಿದು ಬರುತ್ತಿದ್ದು, ಜಲಾಶಯದ ಗರಿಷ್ಠ ನೀರಿನ ಮಟ್ಟವು 2922.00 ಅಡಿಗಳಾಗಿದ್ದು, ಜುಲೈ 07
ರಂದು ಬೆಳಿಗ್ಗೆ 6.00 ಗಂಟೆಗೆ 2913.60 ಅಡಿ ತುಂಬಿರುತ್ತದೆ. ಇನ್ನೂ 8.40 ಅಡಿಗಳಷ್ಟು ನೀರನ್ನು ಜಲಾಶಯದಲ್ಲಿ ಸಂಗ್ರಹಿಸಬಹುದಾಗಿರುತ್ತದೆ.
ಜಲಾನಯನ ಪ್ರದೇಶದಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದ್ದು, ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಜಲಾಶಯಕ್ಕೆ ನೀರು ಹರಿದು ಬರುವ ಸಾಧ್ಯತೆಯಿರುವುದರಿಂದ, ಜಲಾಶಯದಿಂದ ಯಾವುದೇ ಸಮಯದಲ್ಲಾದರೂ ನದಿಗೆ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಡುವ ಸಾಧ್ಯತೆ ಇರುತ್ತದೆ. ಈ ಹಿನ್ನೆಲೆಯಲ್ಲಿ ಹೇಮಾವತಿ ನದಿ ಪಾತ್ರ, ನದಿ ದಂಡೆ ಮತ್ತು ನದಿಯ ಆಸುಪಾಸಿನಲ್ಲಿ ವಾಸಿಸುವ ಎಲ್ಲಾ ಗ್ರಾಮಸ್ಥರು/ಸ್ಥಳೀಯ ವಾಸಿಗಳು ಮುನ್ನೆಚ್ಚರಿಕೆ ಕ್ರಮವಾಗಿ ಸುರಕ್ಷಿತ ಸ್ಥಳಗಳಿಗೆ ತಕ್ಷಣವೇ ತೆರಳಲು ಹೇಮಾವತಿ ಯೋಜನಾ ವೃತ್ತದ ಸೂಪರಿಂಟೆಂಡಿಂಗ್ ಇಂಜಿನಿಯರ್ ಪ್ರಕಟಣೆಯಲ್ಲಿತಿಳಿಸಿದ್ದಾರೆ.