ಬೆಂಗಳೂರು,ಜು.9-ಮಾದಕವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಇಬ್ಬರು ಬಂಧಿಸುವಲ್ಲಿ ಉಪ್ಪಾರಪೇಟೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಿರಣ್ ಹಾಗು ವಿಜಯ್ ಬಂಧಿತ ಆರೋಪಿಗಳಾಗಿದ್ದಾರೆ. 5 ಕೆಜಿ 110 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಡಿಸಿಪಿ ಲಕ್ಷ್ಮಣ ನಿಂಬರಗಿ ಅವರು ತಿಳಿಸಿದ್ದಾರೆ.
ಕಳೆದ ಜು.8 ರಂದು ಬೆಳಿಗ್ಗೆ 11ರ ವೇಳೆ ಉಪ್ಪಾರಪೇಟೆ ಪೊಲೀಸರು ಕೆಎಸ್‍ಆರ್ ಟಿಸಿ ಬಸ್ ನಿಲ್ದಾಣದ ನಿಲುಗಡೆ ಪ್ರದೇಶದಲ್ಲಿ
ಗಾಂಜಾ ಮಾರಾಟ ಮಾಡುತ್ತಿದ್ದ ಮಾಹಿತಿಯನ್ನು ಆಧರಿಸಿ ಕಾರ್ಯಾಚರಣೆ ಕೈಗೊಂಡ ಉಪ್ಪಾರಪೇಟೆ ಪೊಲೀಸ್
ಇನ್ಸ್‌ಪೆಕ್ಟರ್ ವಸಂತ್.ಎಸ್.ಹೆಚ್.ಮತ್ತವರ ಸಿಬ್ಬಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.
ಆರೋಪಿಗಳು ಬೇರೆ ಕಡೆಯಿಂದ ಗಾಂಜಾವನ್ನು ಕಡಿಮೆ ಬೆಲೆಗೆ ತಂದು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು ಎಂದು ಅವರು ತಿಳಿಸಿದರು.