ತುಮಕೂರು ತಾಲ್ಲೂಕಿನ ಹೆಬ್ಬೂರು ಕಟ್ಟೆಗೊಲ್ಲಹಳ್ಳಿ ಗ್ರಾಮದಲ್ಲಿ ಮೂವರು ಕಳ್ಳರು ಹಾಡುಹಗಲೇ ಮಹಿಳೆಯೊಬ್ಬರ ಮಾಂಗಲ್ಯ ಸರ ಕಳ್ಳತನ ಮಾಡಿಕೊಂಡ ಪರಾರಿಯಾಗಿರುವ ಘಟನೆ ಮಂಗಳವಾರ ನಡೆದಿದೆ.
ಗ್ರಾಮದ ರೂಪ ಎಂಬ ಮಹಿಳೆಯು ತಮ್ಮ ಅಂಗಡಿಯಲ್ಲಿ Business ಮಾಡುತ್ತಿದ್ದ ವೇಳೆ ಖರೀದಿ ನೆಪದಲ್ಲಿ ಬಂದ ಮೂವರು ಕಳ್ಳರು ಮಹಿಳೆಯ ಕಣ್ಣಿಗೆ ಖಾರದ ಪುಡಿ ಎರಚಿ ಸುಮಾರು 30 ಗ್ರಾಂ ತೂಕದ ಮಾಂಗಲ್ಯ ಸರ ಕಸಿದು ಪರಾರಿಯಾಗಿದ್ದಾರೆ. ಹೆಬ್ಬೂರು ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.