ಬೆಂಗಳೂರು,ಜು.26-ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ಅವರ ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆಯನ್ನು ವಿರೋಧಿಸಿ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ನಗರದಲ್ಲಿ ಇಂದು ಮೌನ ಪ್ರತಿಭಟನೆ ನಡೆಸಿದರು.
ನಗರದ ಆನಂದರಾವ್ ವೃತ್ತದ ಮಹಾತ್ಮಗಾಂಧಿ ಪ್ರತಿಮೆ ಮುಂಭಾಗ ನಡೆದ ಮೌನ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ,ಹರಿಪ್ರಸಾದ್, ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹಮ್ಮದ್ ಸೇರಿದಂತೆ ಹಲವು ಮುಖಂಡರು ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು.
ಸೋನಿಯಾಗಾಂಧಿ ಅವರ ಜಾರಿ ನಿರ್ದೇಶನಾಲಯ ವಿಚಾರಣೆ ಖಂಡಿಸಿ ದೇಶದಾದ್ಯಂತ ಪ್ರತಿಭಟನೆ ನಡೆಸಿದ್ದು ಅದರ ಭಾಗವಾಗಿ ನಗರದಲ್ಲಿ ಮೌನ ಪ್ರತಿಭಟನೆ ನಡೆಸಲಾಗಿದೆ.
ಮೌನ ಪ್ರತಿಭಟನೆ ಅನಿರ್ದಿಷ್ಟಾವವರೆಗೂ ನಡೆಯಲಿದೆ. ಸೋನಿಯಾಗಾಂಧಿ ಅವರನ್ನು ವಿಚಾರಣೆ ನಡೆಸಿ ಬಿಡುವವರೆಗೂ ಪ್ರತಿಭಟನೆ ಮುಂದುವರೆಯಲಿದೆ ಎಂದು ಕಾಂಗ್ರೆಸ್ ಮುಖಂಡರು ಘೋಷಿಸಿದ್ದಾರೆ.
ಸೋನಿಯಾಗಾಂಧಿ ಅವರನ್ನು ಮೊದಲ ದಿನ ವಿಚಾರಣೆಗೊಳಪಡಿಸಿದಾಗಲೂ ಪ್ರತಿಭಟನೆ ನಡೆಸಲಾಗಿತ್ತು. ಪ್ರತಿಭಟನೆಗಳಿಂದ ದೆಹಲಿಯಲ್ಲಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗಿತ್ತು.
ಈ ನಡುವೆ ಕೇಂದ್ರ ಸರ್ಕಾರದ ತನಿಖಾ ಸಂಸ್ಥೆ ಜಾರಿ ನಿರ್ದೇಶನಾಲಯ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾಗಾಂಧಿ ಅವರನ್ನು ವಿಚಾರಣೆ ನಡೆಸಲು ಎರಡನೇ ಬಾರಿ ನೋಟಿಸ್ ನೀಡಿದೆ.
ಕಳೆದ ವಾರ ಸುಮಾರು 3 ಗಂಟೆಗಳ ಕಾಲ ಸೋನಿಯಾ ಅವರನ್ನು ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯ ಅಷ್ಟಕ್ಕೆ ಬಿಡದೆ ಮತ್ತೆ ಸಮನ್ಸ್ ನೀಡಿತ್ತು. ಇದು ಕಾಂಗ್ರೆಸ್ ಕಾರ್ಯಕರ್ತರನ್ನು ಕೆರಳಿಸಿದೆ.
ಸಂಸತ್ ಅವೇಶನ ನಡೆಯುವಾಗ ಸಂಸದರಿಗೆ ಸಮನ್ಸ್ ನೀಡಿ ವಿಚಾರಣೆ ನಡೆಸುವುದು ಪ್ರಜಾಪ್ರಭುತ್ವಕ್ಕೆ ಅಗೌರವವಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣ ಮುಗಿದ ಅಧ್ಯಯವಾಗಿದೆ ಎಂದು ಕೇಂದ್ರ ಸಚಿವರಾಗಿದ್ದ ಬಿಜೆಪಿ ನಾಯಕ ಅರುಣ್ ಜೈಟ್ಲಿ ಸಂಸತ್‍ನಲ್ಲಿ ಹೇಳಿಕೆ ನೀಡಿದ್ದರು. ಅದರ ಹೊರತಾಗಿಯೂ ಬಿಜೆಪಿ ದುರುದ್ದೇಶ ಪೂರಕವಾಗಿ ನೋಟಿಸ್ ನೀಡಿ ಕಾಂಗ್ರೆಸ್ ನಾಯಕರನ್ನು ವಿಚಾರಣೆ ನಡೆಸುವ ಮೂಲಕ ದ್ವೇಷ ರಾಜಕಾರಣ ಮಾಡುತ್ತಿದೆ. ಈ ಮೊದಲು ರಾಹುಲ್‍ಗಾಂಧಿ ಅವರನ್ನು ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐದು ದಿನ 50 ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಲಾಗಿತ್ತು.
ಪದೇ ಪದೆ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ಕಾಂಗ್ರೆಸಿಗರನ್ನು ಮುಜುಗರಕ್ಕೀಡು ಮಾಡುವ ಪ್ರಯತ್ನವನ್ನು ಬಿಜೆಪಿ ನಡೆಸುತ್ತಿದೆ ಎಂದು ಕಾಂಗ್ರೆಸಿಗರು ದೂರಿದ್ದಾರೆ.
ರಾಹುಲ್‍ಗಾಂಧಿ ವಿಚಾರಣೆ ವೇಳೆ ಕಾಂಗ್ರೆಸಿಗರು ದೆಹಲಿ ಸೇರಿದಂತೆ ದೇಶದಾದ್ಯಂತ ಪ್ರತಿಭಟನೆ ನಡೆಸಿದ್ದರು.
ಈಗ ಸೋನಿಯಾಗಾಂಧಿರನ್ನು ಮೊದಲ ದಿನ ವಿಚಾರಣೆಗೊಳಪಡಿಸಿದಾಗಲೂ ಪ್ರತಿಭಟನೆ ನಡೆಸಲಾಗಿತ್ತು. ಪ್ರತಿಭಟನೆಗಳಿಂದ ದೆಹಲಿಯಲ್ಲಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗಿತ್ತು. ಬೆಂಗಳೂರಿನಲ್ಲೂ ಕಾಂಗ್ರೆಸಿಗರು ರಾಜಭವನ ಮುತ್ತಿಗೆ ಹಾಕಲು ಯತ್ನಿಸಿದರು. ಮರುದಿನ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಯಿತು.
Previous Articleಕಾರ್ಗಿಲ್ ವಿಜಯೋತ್ಸವ
Next Article ಕಾಮನ್ ವೆಲ್ತ್ ಗೇಮ್ಸ್ ನಿಂದ ಹೊರಗುಳಿದ ನೀರಜ್