ಬೆಂಗಳೂರು,ಜು.29– ನಾವು ಇನ್ನು ಮನೆಗೆ ಬರಲ್ಲ ನಮ್ಮನ್ನು ಹುಡುಕಬೇಡಿ ಎಂದು ತಿಳಿಸಿ ನಗರದಿಂದ ನಾಪತ್ತೆಯಾಗಿದ್ದ ಇಬ್ಬರು ಪಿಯುಸಿ ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆಯಾಗಿದ್ದಾರೆ.
ವಿದ್ಯಾರ್ಥಿನಿಯರಾದ ಹರ್ಷಿತಾ, ವೈಶಾಲಿ ಪ್ರತಿಷ್ಠಿತ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದಾರೆ. ಸ್ನೇಹಿತರಾಗಿದ್ದ ಇವರಿಬ್ಬರೂ ನಿನ್ನೆ ಕಾಣೆಯಾಗಿದ್ದರು.
ಈ ಬಗ್ಗೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು ಯುವತಿಯರನ್ನ ಪತ್ತೆ ಹಚ್ಚುವಲ್ಲಿ ಯಶಸ್ವಿಗೊಂಡಿದ್ದಾರೆ.
ಚೆನೈನಿಂದ ಯುವತಿಯರನ್ನ ಬೆಂಗಳೂರಿಗೆ ಕರೆತಂದ ಪೊಲೀಸರು ಪೋಷಕರಿಗೆ ಒಪ್ಪಿಸಿದ್ದಾರೆ.
ಯುವತಿಯರು ಇದ್ದಕ್ಕಿದ್ದಂತೆ ನಾಪತ್ತೆಯಾಗಲು ಕಾರಣವೇನು? ಪ್ರಕರಣದ ಹಿಂದೆ ಯಾರದ್ದಾದರೂ ಕೈವಾಡ ಇದೆಯಾ? ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.
Previous Articleಸುಂದರಿಯರ ಪೋಟೋ ನೋಡಿ ಯಾಮಾರಿದ್ರೆ ಅಷ್ಟೇ…?
Next Article ಕರಾವಳಿ ಈಗ ಕೊಲೆಗಳ ಆಡಂಬೋಲ..!