ಬೆಂಗಳೂರು,ಜು.29-ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆಗೈದ ಪತಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬನ್ನೇರುಘಟ್ಟ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬನ್ನೇರುಘಟ್ಟದ ಮೈಲಸಂದ್ರ
ಸುರೇಶ್ ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆ ನಡೆದು ಎರಡು ದಿನಗಳಾಗಿದ್ದು ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ.
ಪ್ರತಿ ನಿತ್ಯ ಪತ್ನಿಯೊಂದಿಗೆ ಜಗಳವಾಡುತ್ತಿದ್ದ ಸುರೇಶ್ ಎರಡು ದಿನಗಳ ಹಿಂದೆ ಮತ್ತೆ ಪತ್ನಿಯೊಂದಿಗೆ ಜಗಳವಾಡಿದ್ದಾನೆ. ಈ ವೇಳೆ ಜಗಳ ವಿಕೋಪಕ್ಕೆ ತಿರುಗಿ ಪತ್ನಿಗೆ ಚಾಕುವಿನಿಂದ ಇರಿದಿದ್ದಾನೆ.
ಬಳಿಕ ಸ್ಥಳೀಯರು ಆಗಮಿಸಿ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೇ ಆಕೆ ನಿನ್ನೆ ರಾತ್ರಿ ಮೃತಪಟ್ಟಿದ್ದಾಳೆ.
ಅದರ ಬೆನ್ನಲ್ಲೆ ಪತಿಯೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸದ್ಯ ಈ ಸಂಬಂಧ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ